Just In
Don't Miss!
- Movies
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- News
ಕರ್ನಾಟಕ ಆಕ್ರಮಿತ ಪ್ರದೇಶ ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ: ಉದ್ಧವ್ ಠಾಕ್ರೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯ ಟೀಸರ್ ಬಿಡುಗಡೆ
ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆ ಮಾರುತಿ ಸುಜುಕಿ ತನ್ನ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಮಾರುತಿ ಸುಜುಕಿ ತನ್ನ ಹೊಸ ಎಸ್-ಕ್ರಾಸ್ ಕಾರಿನ ಟೀಸರ್ ಅನ್ನು ಬಿಡುಗಡೆಗೊಳಿಸಲಾಗಿದೆ.

ಕಳೆದ ಫೆಬ್ರವರಿ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯ ಜನಪ್ರಿಯ ಎಸ್-ಕ್ರಾಸ್ ಕಾರಿನ ಒಂದು ಯುನಿಟ್ ಕೂಡ ಮಾರಾಟವಾಗಿಲ್ಲ. ಜನಪ್ರಿಯ ಮಾರುತಿ ಸುಜುಕಿ ಕಂಪನಿಗೆ ಎಸ್-ಕ್ರಾಸ್ ಕಾರಿನ ಒಂದು ಯುನಿಟ್ ಅನ್ನು ಕೂಡ ಮಾರಾಟ ಮಾಡಲು ಸಾಧ್ಯವಾಗಿಲ್ಲ. ಡೀಸೆಲ್ ಎಸ್-ಕ್ರಾಸ್ ಕಾರಿನ ಮಾರಾಟದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳ ಕೊನೆಯಲ್ಲಿ ಈ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು. ಒಟ್ಟಾರೆಯಾಗಿ ಪೆಟ್ರೋಲ್ ಮಾದರಿಗಳಿಗೆ ಹೋಲಿಸಿದರೆ ಡೀಸೆಲ್ ಕಾರುಗಳ ಮಾರಾಟದಲ್ಲಿ ಕುಸಿತ ಕಂಡಿದೆ.

ಇದರಿಂದಾಗಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಕಾರನ್ನು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. ಇದೀಗ ಮಾರುತಿ ಸುಜುಕಿ ಕಂಪನಿಯು ಹೊಸ ಎಸ್-ಕ್ರಾಸ್ ಕಾರಿನ ಟೀಸರ್ ಅನ್ನು ಬಿಡುಗಡೆಗೊಳಿಸಲಿದೆ.

ಈ ಮಾರುತಿ ಎಸ್-ಕ್ರಾಸ್ ಕಾರ್ ಅನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಹೊಸ ಮಾರುತಿ ಎಸ್-ಕ್ರಾಸ್ ಕಾರನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಲಿದೆ.

ಹೊಸ ಎಸ್-ಕ್ರಾಸ್ ನಲ್ಲಿ 1.5 ಪೆಟ್ರೋಲ್ ಬಿಎಸ್- ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 103.5 ಬಿಹೆಚ್‍ಪಿ ಪವರ್ ಮತ್ತು 138 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅಥವಾ 4 ಸ್ಪೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಈ ಹೊಸ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್ ಸ್ಕ್ರೀನ್ ಇನ್ಪೋಟೇನ್‍ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋವನ್ನು ಹೊಂದಿದೆ.

ಇನ್ನೂ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್ ಅನ್ನು ಅಳವಡಿಸಲಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಇದರಲ್ಲಿ ಏರ್‍ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಎಸ್ಒಫಿಕ್ಸ್ ಚೈಲ್ಡ್ ಸೀಟ್, ಸ್ಪೀಡ್ ವಾರ್ನಿಂಗ್ ಸಿಸ್ಟಂ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿರಲಿದೆ.

ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಫೀಚರ್‍ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಈ ಹೊಸ ಕಾರಿನಲ್ಲಿ ಅಲಾಯ್ ವ್ಹೀಲ್, ಫ್ರಂಟ್ ಗ್ರಿಲ್, ಹೆಡ್ ಲ್ಯಾಂಪ್, ಎಲ್‍ಇಡಿ ಡಿಆರ್‍ಎಲ್, ಟರ್ನ್ ಸಿಗ್ನಿಲ್ ಮತ್ತು ಟೇಲ್‍ಲೈಟ್‍ಗಳನ್ನು ಹೊಂದಿರಲಿದೆ.

ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಎಸ್-ಕ್ರಾಸ್ ಸಿಗ್ಮಾ, ಡೆಲ್ಟಾ, ಝೀಟಾ ಮತ್ತು ಆಲ್ಫಾ ಎಂಬ ನಾಲ್ಕು ವಿವಿಧ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ದೇಶಿಯ ಮಾರುಕಟ್ಟೆಯಲ್ಲಿ ಹೊಸ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡಲಿದೆ.