ಎಸ್-ಕ್ರಾಸ್ 1.3-ಲೀಟರ್ ಡೀಸೆಲ್ ವರ್ಷನ್‌ಗೆ ಗುಡ್‌ಬೈ- ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ ಹೊಸ ವರ್ಷನ್

ಮಾರುತಿ ಸುಜುಕಿ ಸಂಸ್ಥೆಯು ಈಗಾಗಲೇ ತನ್ನ ಜನಪ್ರಿಯ 1.3-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಬಿಎಸ್-6 ನಿಯಮ ಅನುಸಾರ ಸ್ಥಗಿತಗೊಳಿಸಿದ್ದು, ವಿಟಾರಾ ಬ್ರೆಝಾ ನಂತರ ಇದೀಗ ಎಸ್-ಕ್ರಾಸ್ ಮಾದರಿಯನ್ನು ಸ್ಥಗಿತಗೊಳಿಸಿ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಸಿದ್ದತೆ ನಡೆಸಿದೆ.

ಎಸ್-ಕ್ರಾಸ್ 1.3-ಲೀಟರ್ ಡೀಸೆಲ್ ವರ್ಷನ್‌ಗೆ ಗುಡ್‌ಬೈ- ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ ಹೊಸ ವರ್ಷನ್

ಹೊಸ ಎಮಿಷನ್ ಪ್ರಕಾರ ಡೀಸೆಲ್ ಕಾರುಗಳ ಮಾರಾಟದಲ್ಲಿ ಮಹತ್ವದ ತಂದಿರುವ ಮಾರುತಿ ಸುಜುಕಿ ಸಂಸ್ಥೆಯು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳಿಗೆ ಗುಡ್‌ಬೈ ಹೇಳಿದ್ದು, ಇದೀಗ ತನ್ನ ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯಾಗಿರುವ ವಿಟಾರಾ ಬ್ರೆಝಾ ಮತ್ತು ಎಸ್‌ಯುವಿ ಆವೃತ್ತಿಯಾದ ಎಸ್-ಕ್ರಾಸ್ ಕಾರುಗಳನ್ನು ಪೆಟ್ರೋಲ್ ಎಂಜಿನ್‌ನೊಂದಿಗೆ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿತ್ತು.

ಎಸ್-ಕ್ರಾಸ್ ಡೀಸೆಲ್ ವರ್ಷನ್‌ಗೆ ಗುಡ್‌ಬೈ- ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ ಹೊಸ ವರ್ಷನ್

ಇದರಲ್ಲಿ ವಿಟಾರಾ ಬ್ರೆಝಾ ಕಾರನ್ನು ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಕಳೆದ ವಾರ ಬಿಡುಗಡೆ ಮಾಡಿರುವ ಮಾರುತಿ ಸುಜುಕಿಯು ಇದೀಗ ಎಸ್-ಕ್ರಾಸ್ ಮಾದರಿಯಲ್ಲೂ ಬ್ರೆಝಾ ಅಳವಡಿಸಿದ ಪೆಟ್ರೋಲ್ ಮಾದರಿಯನ್ನೇ ಪರಿಚಯಿಸುತ್ತಿದೆ.

ಎಸ್-ಕ್ರಾಸ್ ಡೀಸೆಲ್ ವರ್ಷನ್‌ಗೆ ಗುಡ್‌ಬೈ- ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ ಹೊಸ ವರ್ಷನ್

ವಿಟಾರಾ ಬ್ರೆಝಾ, ಎಸ್-ಕ್ರಾಸ್ ಸೇರಿದಂತೆ ಪ್ರಮುಖ ಕಾರು ಮಾದರಿಗಳಲ್ಲಿ ಮಾರುತಿ ಸುಜುಕಿ ಸಂಸ್ಥೆಯು 1.3-ಲೀಟರ್ ಬೂಸ್ಟರ್ ಜೆಟ್ ಡೀಸೆಲ್ ಎಂಜಿನ್‌‌ ಬಳಕೆ ಮಾಡುತ್ತಿತ್ತು. ಆದರೆ ಬಿಎಸ್-6 ನಿಯಮದಿಂದಾಗಿ 1.3-ಲೀಟರ್ ಡೀಸೆಲ್ ಎಂಜಿನ್‌ಗೆ ಗುಡ್‌ಬೈ ಹೇಳಲಾಗಿದ್ದು, ತನ್ನದೇ ನಿರ್ಮಾಣದ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್‌ ಪರಿಚಯಿಸಲಾಗಿದೆ.

ಎಸ್-ಕ್ರಾಸ್ ಡೀಸೆಲ್ ವರ್ಷನ್‌ಗೆ ಗುಡ್‌ಬೈ- ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ ಹೊಸ ವರ್ಷನ್

ಬಿಡುಗಡೆಗೊಂಡಿರುವ ಹೊಸ ವಿಟಾರಾ ಬ್ರೆಝಾದಲ್ಲಿ ಬಳಕೆ ಮಾಡಿರುವ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್‌ ಮಾದರಿಯನ್ನು ಈಗಾಗಲೇ ಎರ್ಟಿಗಾ ಎಕ್ಸ್ಎಲ್6 ಮತ್ತು ಸಿಯಾಜ್ ಕಾರುಗಳಲ್ಲಿ ಬಳಕೆ ಮಾಡಲಾಗುತ್ತಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಗಳಲ್ಲಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದೆ. ಇದೀಗ ಇದೇ ಎಂಜಿನ್ ಮಾದರಿಯು ಎಸ್-ಕ್ರಾಸ್ ಕಾರಿನಲ್ಲೂ ಬಳಕೆಯಾಗಲಿದೆ.

ಎಸ್-ಕ್ರಾಸ್ ಡೀಸೆಲ್ ವರ್ಷನ್‌ಗೆ ಗುಡ್‌ಬೈ- ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ ಹೊಸ ವರ್ಷನ್

ಹೊಸ ಪೆಟ್ರೋಲ್ ಎಂಜಿನ್ ಮಾದರಿಯು 105-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 4-ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದುಕೊಂಡಿದೆ.

ಎಸ್-ಕ್ರಾಸ್ ಡೀಸೆಲ್ ವರ್ಷನ್‌ಗೆ ಗುಡ್‌ಬೈ- ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ ಹೊಸ ವರ್ಷನ್

ಇನ್ನು ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಡೀಸೆಲ್ ಎಂಜಿನ್ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿವೆ.

ಎಸ್-ಕ್ರಾಸ್ ಡೀಸೆಲ್ ವರ್ಷನ್‌ಗೆ ಗುಡ್‌ಬೈ- ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ ಹೊಸ ವರ್ಷನ್

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ನಿರ್ಮಾಣದ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಣವು ಅಸಾಧ್ಯ ಎನ್ನಲಾಗುತ್ತಿದ್ದು, ಆರ್ಥಿಕವಾಗಿ ಹೊರೆಯಾಗಲಿರುವ ಉನ್ನತೀಕರಣ ಪ್ರಕ್ರಿಯೆಯಿಂದ ಹಿಂದೆ ಸರಿದಿರುವ ಮಾರುತಿ ಸುಜುಕಿಯು ಡೀಸೆಲ್ ಎಂಜಿನ್‌ಗೆ ಪರ್ಯಾಯವಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಹೆಚ್ಚಿಸುತ್ತಿದೆ.

ಎಸ್-ಕ್ರಾಸ್ ಡೀಸೆಲ್ ವರ್ಷನ್‌ಗೆ ಗುಡ್‌ಬೈ- ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ ಹೊಸ ವರ್ಷನ್

ಒಂದು ವೇಳೆ ಕಡಿಮೆ ಸಾಮರ್ಥ್ಯದ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಿಸಿದರೂ ಬೆಲೆ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಲಿದ್ದು, ಇದಕ್ಕಾಗಿಯೇ ಮಾರುತಿ ಸುಜುಕಿಯು ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳ ಮೇಲೆ ಹೆಚ್ಚು ಗಮನಹರಿಸಲು ನಿರ್ಧರಿಸಿದೆ.

ಎಸ್-ಕ್ರಾಸ್ ಡೀಸೆಲ್ ವರ್ಷನ್‌ಗೆ ಗುಡ್‌ಬೈ- ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ ಹೊಸ ವರ್ಷನ್

ಮಾಹಿತಿಗಳ ಪ್ರಕಾರ, ಮಾರುತಿ ಸುಜುಕಿ ಸಂಸ್ಥೆಯು ಹೈ ಎಂಡ್ ಮಾದರಿಗಳಲ್ಲಿ ಮಾತ್ರವೇ ಹೊಸದಾಗಿ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಿದ್ದು, ಇನ್ನುಳಿದಂತೆ ಕಡಿಮೆ ಎಂಜಿನ್ ಸಾಮಾರ್ಥ್ಯದ ಕಾರುಗಳಲ್ಲಿ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಗಳು ಮುಂದುವರಿಯಲಿವೆ.

Article Published On: Friday, February 28, 2020, 14:04 [IST]
English summary
Maruti Suzuki S-Cross Diesel Discontinued. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+