ನವೆಂಬರ್ ತಿಂಗಳ ಮಾರಾಟದಲ್ಲಿ ಶೇ.100 ಬೆಳವಣಿಗೆಯನ್ನು ಸಾಧಿಸಿದ ಮಾರುತಿ ಎಸ್-ಕ್ರಾಸ್
ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಮಾರುತಿ ಸುಜುಕಿ ತನ್ನ ಜನಪ್ರಿಯ ಎಸ್-ಕ್ರಾಸ್ ಮಾದರಿಯನ್ನು ಪೆಟ್ರೋಲ್ ಆವೃತ್ತಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷ ಬಿಡುಗಡೆಗೊಳಿಸಿತ್ತು. ಈ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಹೊಸ ಪೆಟ್ರೋಲ್ ಎಂಜಿನ್ ಖಂಡಿತವಾಗಿಯೂ ಬಿಎಸ್-6 ಮಾರುತಿ ಸುಜುಕಿ ಎಎಸ್-ಕ್ರಾಸ್‌ಗೆ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯತೆ ಗಳಿಸಲು ಸಹಾಯ ಮಾಡಿದೆ ಎಂದು ಹೇಳಬಹುದು. 2020ರ ನವೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಮಾದರಿಯ 2,877 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಕಳೆದ ವರ್ಷದ ನವೆಂವರ್ ತಿಂಗಳಿನಲ್ಲಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಮಾದರಿಯ 1,439 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.

ಕಳೆದ ವರ್ಷದ ನವೆಂಬರ್ ತಿಂಗಳ ಮಾರಾಟವನ್ನು ಈ ವರ್ಷದ ಅದೇ ಅವಧಿಯ ಮಾರಾಟಕ್ಕೆ ಹೋಲಿಸಿದರೆ ಶೇ.100 ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳು ದೀಪಾವಳಿ ಹಬ್ಬದ ಅವಧಿಯಲ್ಲಿ ಮಾರುತಿ ಎಸ್-ಕ್ರಾಸ್ ಕಾರು ಭರ್ಜರಿಯಾಗಿ ಮಾರಾಟವಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗಿತ್ತು. ಬಿಎಸ್-6 ಮಾರುತಿ ಎಸ್-ಕ್ರಾಸ್ ಕಾರಿನಲ್ಲಿ ಹೊಸ ಎಂಜಿನ್ ಆಯ್ಕೆಯ ಜೊತೆ ವಿನ್ಯಾಸದಲ್ಲಿ ಮತ್ತು ಫೀಚರ್ ಗಳನ್ನು ಕೂಡ ಅಪ್ದೇಟ್ ಮಾಡಿ ಬಿಡುಗಡೆಗೊಳಿಸಲಾಗಿತ್ತು.

ಡೀಸೆಲ್ ಎಸ್-ಕ್ರಾಸ್ ಕಾರಿನ ಮಾರಾಟದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳ ಕೊನೆಯಲ್ಲಿ ಈ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಕಾರನ್ನು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಿದರು.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಎಸ್-ಕ್ರಾಸ್ ನಲ್ಲಿ 1.5 ಪೆಟ್ರೋಲ್ ಮಾದರಿಯು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಣೆಯ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 103.5 ಬಿಹೆಚ್‍ಪಿ ಪವರ್ ಮತ್ತು 138 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. , 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಈ ಹೊಸ ಮಾರುತಿ ಎಸ್-ಕ್ರಾಸ್ ಕಾರಿನ ಇಂಟಿರಿಯರ್ ನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್ ಸ್ಕ್ರೀನ್ ಇನ್ಪೋಟೇನ್‍ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋವನ್ನು ಹೊಂದಿದೆ.
MOST READ: ಕ್ರ್ಯಾಶ್ ಟೆಸ್ಟ್‌ನಲ್ಲಿ ಶೂನ್ಯ ಸ್ಟಾರ್ ರೇಟಿಂಗ್ ಪಡೆದ ಜನಪ್ರಿಯ ಮಾರುತಿ ಎಸ್-ಪ್ರೆಸ್ಸೊ ಕಾರು

ಇನ್ನು ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್ ಅನ್ನು ಅಳವಡಿಸಲಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಇದರಲ್ಲಿ ಏರ್‍ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಎಸ್ಒಫಿಕ್ಸ್ ಚೈಲ್ಡ್ ಸೀಟ್, ಸ್ಪೀಡ್ ವಾರ್ನಿಂಗ್ ಸಿಸ್ಟಂ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಪ್ಯಾಸೆಂಜರ್ ವಾಹನಗಳ ಮಾರಾಟದಲ್ಲಿ ಮಾರುತಿ ಸುಜುಕಿ ನಿಸ್ಸಂದೇಹವಾಗಿ ನಾಯಕನಾಗಿದ್ದರೂ, ಪ್ರೀಮಿಯಂ ವಾಹನಗಳ ಮಾರಾಟದಲ್ಲಿ ಹ್ಯುಂಡೈ ಕಂಪನಿಗೆ ಹೋಲಿಸಿದರೆ ದೊಡ್ಡ ಮಟ್ಟದ ಯಶಸ್ಸನ್ನು ಕಂಡಿಲ್ಲ. ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್ ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications