ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಕ್ರಾಸ್

ದೇಶದ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಮಾರುತಿ ಸುಜುಕಿ ತನ್ನ ಜನಪ್ರಿಯ ಎಸ್-ಕ್ರಾಸ್ ಮಾದರಿಯನ್ನು ಪೆಟ್ರೋಲ್ ಆವೃತ್ತಿಯಲ್ಲಿ ಭಾರತದ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್ ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಗಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಕ್ರಾಸ್

ಮಾರುತಿ ಸುಜುಕಿ ಭಾರತದಲ್ಲಿ ತನ್ನದೆ ಆದ ದೊಡ್ಡ ಗ್ರಾಹಕ ವರ್ಗವನ್ನು ಹೊಂದಿದೆ. ಇನ್ನು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು ಬಿಡುಗಡೆಯಾದ ಮೊದಲ ತಿಂಗಳಲ್ಲಿ 2,527 ಯುನಿ‍‍ಟ್‍‍ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಈ ಬಾರಿ ಶೇ. 279.43 ರಷ್ಟು ಭಾರಿ ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಎಸ್-ಕ್ರಾಸ್ 666 ಯುನಿ‍‍ಟ್‍‍ಗಳು ಮಾತ್ರ ಮಾರಾಟವಾಗಿತ್ತು.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಕ್ರಾಸ್

ಈ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ಪ್ರೀಮಿಯಂ ನೆಕ್ಸಾ ಡೀಲರ್‍‍ಗಳ ಮೂಲಕ ಮಾರಾಟ ಮಾಡಲಾಗುತ್ತಿದೆ. ಇನ್ನು ಈ ಮಾರುತಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯನ್ನು ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಲಾಗಿತ್ತು.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಕ್ರಾಸ್

ಡೀಸೆಲ್ ಎಸ್-ಕ್ರಾಸ್ ಕಾರಿನ ಮಾರಾಟದಲ್ಲಿ ಕುಸಿತ ಕಂಡ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳ ಕೊನೆಯಲ್ಲಿ ಈ ಮಾದರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಮಾರುತಿ ಸುಜುಕಿ ಕಂಪನಿಯು ಎಸ್-ಕ್ರಾಸ್ ಕಾರನ್ನು ಪೆಟ್ರೋಲ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಿದರು.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಕ್ರಾಸ್

ಹೊಸ ಎಸ್-ಕ್ರಾಸ್ ನಲ್ಲಿ 1.5 ಪೆಟ್ರೋಲ್ ಮಾದರಿಯು ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಣೆಯ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 103.5 ಬಿ‍ಹೆಚ್‍‍ಪಿ ಪವರ್ ಮತ್ತು 138 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. , 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಕ್ರಾಸ್

ಈ ಹೊಸ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್ ಸ್ಕ್ರೀನ್ ಇನ್ಪೋಟೇನ್‍‍ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋವನ್ನು ಹೊಂದಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಕ್ರಾಸ್

ಇನ್ನೂ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್ ಅನ್ನು ಅಳವಡಿಸಲಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಇದರಲ್ಲಿ ಏರ್‍‍ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಎಸ್ಒ‍ಫಿಕ್ಸ್ ಚೈಲ್ಡ್ ಸೀಟ್, ಸ್ಪೀಡ್ ವಾರ್ನಿಂಗ್ ಸಿಸ್ಟಂ ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಹೊಂದಿದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಕ್ರಾಸ್

ಭಾರತೀಯ ಮಾರುಕಟ್ಟೆಯಲ್ಲಿ ಪ್ಯಾಸೆಂಜರ್ ವಾಹನಗಳ ಮಾರಾಟದಲ್ಲಿ ಮಾರುತಿ ಸುಜುಕಿ ನಿಸ್ಸಂದೇಹವಾಗಿ ನಾಯಕನಾಗಿದ್ದರೂ, ಪ್ರೀಮಿಯಂ ವಾಹನಗಳ ಮಾರಾಟದಲ್ಲಿ ಹ್ಯುಂಡೈ ಕಂಪನಿಗೆ ಹೋಲಿಸಿದರೆ ದೊಡ್ಡ ಮಟ್ಟದ ಯಶಸ್ಸನ್ನು ಕಂಡಿಲ್ಲ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಎಸ್-ಕ್ರಾಸ್

ಹೊಸ ಮಾರುತಿ ಸುಜುಕಿ ಎಸ್-ಕ್ರಾಸ್ ಪೆಟ್ರೋಲ್ ಆವೃತ್ತಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಮತ್ತು ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಹಬ್ಬದ ಸೀಸನ್ ನಲ್ಲಿ ಮಾರುತಿ ಸುಜುಕಿ ಕಾರುಗಳ ಮಾರಾಟವು ಮತ್ತಷ್ಟು ಹೆಚ್ಚಾಗಬಹುದು.

Most Read Articles

Kannada
English summary
Maruti Suzuki S-Cross Posts 279% Sales Growth In August 2020. Read In Kannada.
Story first published: Friday, September 4, 2020, 13:35 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X