ಭಾರತದಲ್ಲಿ ಕಳಪೆ ಕಾರು ಮಾರಾಟವನ್ನು ಬಹಿರಂಗವಾಗಿಯೇ ಒಪ್ಪಿಕೊಂಡ ಮಾರುತಿ ಸುಜುಕಿ

ಭಾರತದಲ್ಲಿ ಹೊಸ ವಾಹನಗಳ ಮಾರಾಟ ಹೆಚ್ಚಳದ ನಡುವೆ ವಾಹನಗಳ ಸುರಕ್ಷಾ ರೇಟಿಂಗ್ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಬಜೆಟ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಕಂಪನಿಯು ಅತ್ಯಧಿಕ ಪ್ರಮಾಣದ ಕಾರು ಮಾರಾಟ ಹೊಂದಿದ್ದರು ಸುರಕ್ಷತೆಯ ವಿಚಾರವಾಗಿ ಗ್ರಾಹಕರಿಂದ ಟೀಕೆಗೆ ಒಳಗಾಗುತ್ತಿದೆ.

ಕಳಪೆ ಕಾರು ಮಾರಾಟವನ್ನು ಬಹಿರಂಗವಾಗಿಯೇ ಒಪ್ಪಿಕೊಂಡ ಮಾರುತಿ ಸುಜುಕಿ

ಸದ್ಯ ಭಾರತೀಯ ಆಟೋ ಉದ್ಯಮದಲ್ಲಿನ ಕಾರು ಮಾರಾಟ ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಬರೋಬ್ಬರಿ 7 ಕಾರು ಮಾದರಿಗಳನ್ನು ಹೊಂದಿದ್ದು, ಬಹುತೇಕ ಕಾರು ಮಾದರಿಗಳು ಮಾರಾಟದಲ್ಲಿ ದಾಖಲೆ ಮಟ್ಟದ ಮಾರಾಟ ಗುರಿಸಾಧಿಸಿವೆ. ಆದರೆ ಪ್ರಯಾಣಿಕರ ಸುರಕ್ಷತೆಯಲ್ಲಿ ಕಳಪೆ ಗುಣಮಟ್ಟ ಹೊಂದಿದ್ದು, ಕನಿಷ್ಠ ಮಟ್ಟದ ಸುರಕ್ಷತೆಯನ್ನು ನೀಡುವಲ್ಲಿಯೂ ವಿಫಲವಾಗಿದೆ.

ಕಳಪೆ ಕಾರು ಮಾರಾಟವನ್ನು ಬಹಿರಂಗವಾಗಿಯೇ ಒಪ್ಪಿಕೊಂಡ ಮಾರುತಿ ಸುಜುಕಿ

ಮಾರುತಿ ಸುಜುಕಿ ನಿರ್ಮಾಣದ ಬಹುತೇಕ ಕಾರುಗಳು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಅಂಕಗಳಿಗೆ ಒಂದು ಅಥವಾ ಎರಡು ಅಂಕಗಳನ್ನು ಮಾತ್ರ ಗಿಟ್ಟಿಸಿಕೊಂಡಲ್ಲಿ ಎಂಟ್ರಿ ಲೆವಲ್ ಮಾದರಿಗಂತೂ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಸೊನ್ನೆ ಸುತ್ತಿವೆ.

ಕಳಪೆ ಕಾರು ಮಾರಾಟವನ್ನು ಬಹಿರಂಗವಾಗಿಯೇ ಒಪ್ಪಿಕೊಂಡ ಮಾರುತಿ ಸುಜುಕಿ

ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಹಾನಿ ಉಂಟು ಮಾಡುವ ಮಾರುತಿ ಸುಜುಕಿ ಕಾರುಗಳ ಬಂಡವಾಳವನ್ನು ಬಯಲು ಮಾಡುತ್ತಿರುವ ಗ್ಲೊಬಲ್ ಎನ್‌ಸಿಎಪಿ ಸಂಸ್ಥೆಯು ಸೇಫ್ಟಿ ಕಾರ್ಸ್ ಫಾರ್ ಇಂಡಿಯಾ ಅಭಿಯಾನದಡಿ ವಿವಿಧ ಕಾರು ಮಾದರಿಗಳ ಕ್ರ್ಯಾಶ್ ಟೆಸ್ಟಿಂಗ್ ಅಂಕಗಳನ್ನು ಪ್ರಕಟಗೊಳಿಸುತ್ತಿದೆ.

ಕಳಪೆ ಕಾರು ಮಾರಾಟವನ್ನು ಬಹಿರಂಗವಾಗಿಯೇ ಒಪ್ಪಿಕೊಂಡ ಮಾರುತಿ ಸುಜುಕಿ

ಬಜೆಟ್ ಬೆಲೆಗಳಲ್ಲಿ ಪ್ರತಿಯೊಬ್ಬರಿಗೂ ಕಾರು ಖರೀದಿಯ ಕನಸನ್ನು ನನಸು ಮಾಡುವಲ್ಲಿ ಯಶಸ್ವಿಯಾಗುತ್ತಿರುವ ಮಾರುತಿ ಸುಜುಕಿಯು ಪ್ರಯಾಣಿಕ ಸುರಕ್ಷಾ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ವಾಹನಗಳನ್ನು ಮಾರಾಟಗೊಳಿಸುತ್ತಿದ್ದು, ಇತ್ತೀಚೆಗೆ ಎಸ್-ಪ್ರೆಸ್ಸೊ ಕಾರಿನ ಕ್ರ್ಯಾಶ್ ಟೆಸ್ಟಿಂಗ್ ಫಲಿತಾಂಶವು ಭಾರತದಲ್ಲಿ ಮಾತ್ರವಲ್ಲ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

ಕಳಪೆ ಕಾರು ಮಾರಾಟವನ್ನು ಬಹಿರಂಗವಾಗಿಯೇ ಒಪ್ಪಿಕೊಂಡ ಮಾರುತಿ ಸುಜುಕಿ

ಭಾರತದಲ್ಲಿ ನಿರ್ಮಾಣವಾಗುವ ಬಹುತೇಕ ಮಾರುತಿ ಸುಜುಕಿ ಕಾರುಗಳು ವಿದೇಶಿ ಮಾರುಕಟ್ಟೆಗಳಲ್ಲೂ ಮಾರಾಟವಾಗುತ್ತಿದ್ದು, ಎಸ್-ಪ್ರೆಸ್ಸೊ ಮಾದರಿಯ ಕ್ರ್ಯಾಶ್ ಟೆಸ್ಟಿಂಗ್ ಕುರಿತಂತೆ ದಕ್ಷಿಣ ಆಫ್ರಿಕಾದಲ್ಲಿ ಗ್ರಾಹಕರು ಕಂಪನಿಯು ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಕಳಪೆ ಕಾರು ಮಾರಾಟವನ್ನು ಬಹಿರಂಗವಾಗಿಯೇ ಒಪ್ಪಿಕೊಂಡ ಮಾರುತಿ ಸುಜುಕಿ

ಸಾಮಾಜಿಕ ಜಾಲತಾಣಗಳಲ್ಲಿ ಸುಜುಕಿ ಕಾರುಗಳ ವಿರುದ್ಧ ದಕ್ಷಿಣ ಆಫ್ರಿಕಾದಲ್ಲಿ ಅಭಿಯಾನ ಶುರುವಾಗುತ್ತಿದ್ದಂತೆ ಗ್ರಾಹಕರಿಗೆ ಉತ್ತರಿಸಿರುವ ದಕ್ಷಿಣ ಆಫ್ರಿಕಾ ಸುಜುಕಿ ಕಾರ್ಸ್ ವಿಭಾಗವು ಭಾರತದಲ್ಲಿ ಮಾರಾಟವಾಗುವ ಎಸ್‌-ಪ್ರೆಸ್ಸೊ ಮಾದರಿಗೂ ದಕ್ಷಿಣ ಆಫ್ರಿಕಾದಲ್ಲಿ ಮಾರಾಟವಾಗುತ್ತಿರುವ ಎಸ್-ಪ್ರೆಸ್ಸೊ ಮಾದರಿಗೂ ಸಾಕಷ್ಟು ವ್ಯತ್ಯಾಸ ಇರುವುದಾಗಿ ಉತ್ತರಿಸಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಕಳಪೆ ಕಾರು ಮಾರಾಟವನ್ನು ಬಹಿರಂಗವಾಗಿಯೇ ಒಪ್ಪಿಕೊಂಡ ಮಾರುತಿ ಸುಜುಕಿ

ಜೊತೆಗೆ ಭಾರತದಲ್ಲಿ ಮಾರಾಟವಾಗುತ್ತಿರುವ ಎಸ್-ಪ್ರೆಸ್ಸೊ ಮಾದರಿಯಲ್ಲಿ ಹೆಚ್ಚಿನ ಸುರಕ್ಷತೆಗಳಿಲ್ಲದಿರುವುದೇ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ವಿಫಲವಾಗಿದೆ ಎಂಬುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದು, ದಕ್ಷಿಣ ಆಫ್ರಿಕಾದಲ್ಲಿ ಮಾದರಿಯು ಉತ್ತಮ ಸುರಕ್ಷತೆ ಹೊಂದಿರುವುದರಿಂದ ಯಾವುದೇ ಆತಂಕ ಬೇಡವೆಂದು ಗ್ರಾಹಕರ ಪ್ರಶ್ನೆಗಳಿಗೆ ಟ್ವಿಟರ್ ಮೂಲಕ ಉತ್ತರಿಸಿದೆ.

ಕಳಪೆ ಕಾರು ಮಾರಾಟವನ್ನು ಬಹಿರಂಗವಾಗಿಯೇ ಒಪ್ಪಿಕೊಂಡ ಮಾರುತಿ ಸುಜುಕಿ

ಈ ಮೂಲಕ ಭಾರತದಲ್ಲಿ ಲಾಭದ ಉದ್ದೇಶಕ್ಕಾಗಿ ಪ್ರತಿ ತಿಂಗಳು ಲಕ್ಷಾಂತರ ಕಾರುಗಳನ್ನು ಮಾರಾಟ ಮಾಡುತ್ತಿರುವ ಮಾರುತಿ ಸುಜುಕಿಯು ಗ್ರಾಹಕರ ಸುರಕ್ಷತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಇದೇ ವಿಚಾರವಾಗಿ ಗ್ಲೊಬಲ್ ಎನ್‌ಸಿಎಪಿ ಸಂಸ್ಥೆಯು ಮಾರುತಿ ಸುಜುಕಿಗೆ ಛೀಮಾರಿ ಹಾಕಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಕಳಪೆ ಕಾರು ಮಾರಾಟವನ್ನು ಬಹಿರಂಗವಾಗಿಯೇ ಒಪ್ಪಿಕೊಂಡ ಮಾರುತಿ ಸುಜುಕಿ

ಭಾರತದಲ್ಲಿ ವಿವಿಧ ಮಾದರಿಯ ಹಲವು ಎಂಟ್ರಿ ಲೆವಲ್ ಕಾರುಗಳನ್ನು ಮಾರಾಟದೊಂದಿಗೆ ಪ್ರಯಾಣಿಕ ಸುರಕ್ಷತೆಗೆ ಹೆಚ್ಚಿನ ಗಮನಹರಿಸುತ್ತಿರುವ ಮಹೀಂದ್ರಾ, ಟಾಟಾ ಮೋಟಾರ್ಸ್ ಕಂಪನಿಗಳ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಗ್ಲೊಬಲ್ ಎನ್‌ಸಿಎಪಿ ಸಂಸ್ಥೆಯು ಕಾರುಗಳ ಸುರಕ್ಷತೆಯಲ್ಲಿ ಮಾರುತಿ ಸುಜುಕಿಯು ಸಾಕಷ್ಟು ಗಮನಹರಿಸುವ ಅವಶ್ಯಕತೆ ಎಂಬ ಅಭಿಪ್ರಾಯ ಹಂಚಿಕೊಂಡಿದೆ.

Most Read Articles

Kannada
English summary
Maruti Suzuki S-Presso Claims To Be Safer In South-Africa. Read in kannada.
Story first published: Tuesday, December 1, 2020, 20:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X