ಜೂನ್ ಅವಧಿಯ ಕಾರು ಮಾರಾಟದಲ್ಲಿ ಭಾರೀ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಂಪನಿಯು ಲಾಕ್‌ಡೌನ್ ಸಡಿಲಿಕೆ ನಂತರ ಹಲವಾರು ಆಫರ್‌ಗಳೊಂದಿಗೆ ಕಾರು ಮಾರಾಟ ಕೈಗೊಂಡಿದ್ದು, ಲಾಕ್‌ಡೌನ್ ಸಂಕಷ್ಟದಿಂದಾಗಿ ಆಫರ್ ಮಧ್ಯದಲ್ಲೂ ಕಾರು ಮಾರಾಟದಲ್ಲಿ ಭಾರೀ ಪ್ರಮಾಣದ ಕುಸಿತ ಕಂಡಿದೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಭಾರೀ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಲಾಕ್‌ಡೌನ್ ಸಡಿಲಿಕೆ ನಂತರ ಮೇ ಅವಧಿಯಲ್ಲಿ ಶೇ.86ರಷ್ಟು ನಷ್ಟ ಅನುಭವಿಸಿದ್ದ ಮಾರುತಿ ಸುಜುಕಿಯು ಜೂನ್ ಅವಧಿಯಲ್ಲಿ 52,300 ಯುನಿಟ್ ಮಾರಾಟ ಮಾಡುವ ಮೂಲಕ ತುಸು ಚೇತರಿಕೆ ಕಂಡಿದೆ. ಆದರೂ ಕೂಡಾ ಕಳೆದ ವರ್ಷದ ಜೂನ್ ಅವಧಿಯ ಕಾರು ಮಾರಾಟಕ್ಕೆ ಹೋಲಿಕೆ ಮಾಡಿದ್ದಲ್ಲಿ ಶೇ.53.7 ರಷ್ಟು ಕುಸಿತ ಕಂಡಿದ್ದು, ಮುಂಬರುವ ದಿನಗಳಲ್ಲಿ ಕಾರು ಮಾರಾಟ ಹೆಚ್ಚಳವಾಗುವ ನೀರಿಕ್ಷೆಯಲ್ಲಿದೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಭಾರೀ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಇನ್ನು ಲಾಕ್‌ಡೌನ್ ಸಂಕಷ್ಟದಿಂದಾಗಿ ಹೊಸ ವಾಹನಗಳ ಖರೀದಿ ಯೋಜನೆಯಿಂದ ಹಿಂದೆ ಸರಿಯುತ್ತಿರುವ ಗ್ರಾಹಕರನ್ನು ಸೆಳೆಯುತ್ತಿರುವ ಮಾರುತಿ ಸುಜುಕಿ ಕಂಪನಿಯು ವಿವಿಧ ಬ್ಯಾಂಕ್‌ಗಳ ಜೊತೆಗೂಡಿ ಹಲವಾರು ಲೋನ್ ಸೌಲಭ್ಯಗಳನ್ನು ಘೋಷಣೆ ಮಾಡಿದೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಭಾರೀ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಆಟೋ ಉದ್ಯಮ ಸೇರಿದಂತೆ ಎಲ್ಲಾ ವಲಯದಲ್ಲೂ ಕರೋನಾ ಮಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ವ್ಯಾಪಾರ ಅಭಿವೃದ್ದಿಯು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಸದ್ಯಕ್ಕೆ ಆಟೋ ಉದ್ಯಮಕ್ಕೆ ಕೆಲವು ವಿನಾಯ್ತಿಗಳನ್ನು ನೀಡಲಾಗಿದ್ದರೂ ಕೂಡಾ ವಾಹನ ಖರೀದಿದಾರರು ಇಲ್ಲದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಭಾರೀ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಇದಕ್ಕಾಗಿಯೇ ಸಂಕಷ್ಟದಲ್ಲಿರುವ ಆಟೋ ಕಂಪನಿಗಳು ಕುಸಿದಿರುವ ಹೊಸ ವಾಹನಗಳ ಮಾರಾಟವನ್ನು ಸುಧಾರಿಸಲು ವಿವಿಧ ಮಾದರಿಯ ಲೋನ್ ಆಫರ್‌ಗಳನ್ನು ಘೋಷಿಸುತ್ತಿದ್ದು, ಹೊಸ ವಾಹನಗಳ ಮಾರಾಟವನ್ನು ಸರಿದಾರಿಗೆ ತರಲು ಯತ್ನಿಸುತ್ತಿರುವ ಆಟೋ ಕಂಪನಿಯು ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸುತ್ತಿವೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಜೂನ್ ಅವಧಿಯ ಕಾರು ಮಾರಾಟದಲ್ಲಿ ಭಾರೀ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಹೊಸ ವಾಹನ ಖರೀದಿದಾರರಿಗೆ ಇಎಂಐ ಹೊರೆ ತಗ್ಗಿಸಲು ಅತಿ ಸುಲಭವಾದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ದೇಶದ ಅತಿ ದೊಡ್ಡ ಕಾರು ಮಾರಾಟ ಕಂಪನಿ ಮಾರುತಿ ಸುಜುಕಿ ಕೂಡಾ ಆಯ್ದ ಕಾರು ಮಾದರಿಗಳ ಮೇಲೆ ವಿಶೇಷ ಲೋನ್ ಆಫರ್ ನೀಡಿದೆ.

ಜೂನ್ ಅವಧಿಯ ಕಾರು ಮಾರಾಟದಲ್ಲಿ ಭಾರೀ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ವಿವಿಧ ಬ್ಯಾಂಕ್‌ಗಳ ಜೊತೆಗೂಡಿ ಕನಿಷ್ಠ ಇಎಂಐ, ಸೆಟ್ ಅಪ್ ಇಎಂಐ, ಬಲೂನ್ ಇಎಂಐ ಸ್ಕೀಮ್ ಪರಿಚಯಿಸಿದ್ದು, ಆಯ್ದ ಕಾರು ಮಾದರಿಗಳ ಮೇಲೆ ಶೇ.100 ಆನ್‌ರೋಡ್ ಲೋನ್‌ಗಳನ್ನು ಪರಿಚಯಿಸಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಜೂನ್ ಅವಧಿಯ ಕಾರು ಮಾರಾಟದಲ್ಲಿ ಭಾರೀ ನಷ್ಟ ಅನುಭವಿಸಿದ ಮಾರುತಿ ಸುಜುಕಿ

ಜೊತೆಗೆ ಬಹುತೇಕ ವಾಹನ ಮಾದರಿಗಳ ಮೇಲೆ ಮಾರುತಿ ಸುಜುಕಿಯು ಶೇ.100 ಆನ್‌ರೋಡ್ ಲೋನ್‌ಗಳನ್ನು ಪರಿಚಯಿಸುತ್ತಿದ್ದು, ಲಾಕ್‌ಡೌನ್ ಸಂಕಷ್ಟದಲ್ಲಿ ಮರುಪಾವತಿಗೂ ಅನುಕೂರವಾಗುವಂತೆ ಇಎಂಐ ಆಯ್ಕೆಗಳನ್ನು ಪರಿಚಯಿಸಿದೆ.

Most Read Articles

Kannada
English summary
Maruti Suzuki sales decline by 53.7 percent in June. Read in Kannada.
Story first published: Wednesday, July 1, 2020, 22:12 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X