ಸೆಪ್ಟೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಸುಜುಕಿ

ಭಾರತೀಯ ಆಟೋಮೊಬೈಲ್ ಕ್ಷೇತ್ರವು ದೊಟ್ಟ ಮಟ್ಟದ ನಷ್ಟದ ನಂತರ ಇತ್ತೀಚೆಗೆ ನಿಧಾನವಾಗಿ ಬೆಳವಣಿಗೆಯಾಗುತ್ತದೆ. ಇನ್ನು ದೇಶದ ಅತಿ ದೊಡ್ಡ ಕಾರು ತಯಾರಕ ಕಂಫನಿಯಾದ ಮಾರುತಿ ಸುಜುಕಿ ಕಾರು ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸುತ್ತಿದೆ.

ಸೆಪ್ಟೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಸುಜುಕಿ

2020ರ ಸೆಪ್ಟೆಂಬರ್‌ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು 1,60,442 ಯುನಿಟ್‌ಗಳನ್ನು ಮಾರಾಟ ಮಾಡಿವೆ, ವರ್ಷದಿಂದ ವರ್ಷಕ್ಕೆ ಮಾರಾಟದಲ್ಲಿ ಮಾರುತಿ ಸುಜುಕಿ ಶೇ.30.8 ರಷ್ಟು ಬೆಳವಣಿಯನ್ನು ಸಾಧಿಸಿದೆ. ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ ಇಂಡೋ-ಜಪಾನೀಸ್ ಬ್ರ್ಯಾಂಡ್ ಮಾರುತಿ ಸುಜುಕಿ 1,50,040 ಯುನಿಟ್‌ಗಳನ್ನು ಮಾರಾಟ ಮಾಡಿವೆ. ಇನ್ನು ಒಟ್ಟು 7,834 ಯುನಿಟ್‌ಗಳನ್ನು ರಫ್ತು ಮಾಡಿದ್ದಾರೆ.

ಸೆಪ್ಟೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಸುಜುಕಿ

ಒಇಎಂ ಒಪ್ಪಂದದ ಭಾಗವಾಗಿ ಮಾರುತಿ ಸುಜುಕಿ ತನ್ನ ಬ್ರೆಝಾ ರಿಬ್ಯಾಡ್ಜ್ ಆವೃತ್ತಿಯಾದ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‌ಯುವಿಯ 2,568 ಯುನಿಟ್‌ಗಳನ್ನು ಟೊಯೋಟಾ ಕಿರ್ಲೋಸ್ಕರ್ ಮೋಟರ್‌ಗೆ ಸರಬರಾಜು ಮಾಡಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸೆಪ್ಟೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಸುಜುಕಿ

2020ರ ಸೆಪ್ಟೆಂಬರ್‌ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಎಂಟ್ರಿ ಲೆವಲ್ ವಿಭಾಗದಲ್ಲಿ 27,246 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳ ಎಂಟ್ರಿ ಲೆವೆಲ್ ವಿಭಾಗ ಮಾರಾಟಕ್ಕೆ ಹೋಲಿಸಿದರೆ ಶೇ.35 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಸೆಪ್ಟೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಸುಜುಕಿ

2020ರ ಸೆಪ್ಟೆಂಬರ್‌ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು 1,60,442 ಯುನಿಟ್‌ಗಳನ್ನು ಮಾರಾಟ ಮಾಡಿದ್ದರೆ, ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳಲ್ಲಿ 1,22,640 ಯುನಿಟ್‌ಗಳನ್ನು ಮಾರಾಟ ಮಾಡಿದ್ದರು. ಕಳೆದ ವರ್ಷದ್ ಇದೇ ಸೆಪ್ಟಂಬರ್ ಅವಧಿಯ ಮಾರಾಟಕ್ಕೆ ಹೋಲಿಸಿದರೆ ಶೇ.31 ರಷ್ಟು ಬೆಳವಣಿಗೆಯನ್ನು ಕಂಡಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಸೆಪ್ಟೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಸುಜುಕಿ

ಮಾರುತಿ ಸುಜುಕಿಯ ಲೈಟ್ ಕಮರ್ಷಿಯಲ್ ವೆಹಿಕಲ್ (ಎಲ್‌ಸಿವಿ) ಸೂಪರ್ ಕ್ಯಾರಿಯ ವಿಭಗದಲ್ಲಿ 2,128 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇದು ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.4 ಹೆಚ್ಚಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಸೆಪ್ಟೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಸುಜುಕಿ

ಇನ್ನು ಮಾರುತಿ ಸುಜುಕಿ ಕಂಪನಿಯ ವ್ಯಾಗನ್ಆರ್ ಸಿಎನ್‌ಜಿ ಆವೃತ್ತಿಯು ಮಾರಾಟದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಮಾರುತಿ ಸುಜುಕಿ ವ್ಯಾಗನ್ಆರ್ ಸಿಎನ್‌ಜಿ ಆವೃತ್ತಿಯು ಮೂರು ಲಕ್ಷ ಮಾರಾಟವಾಗಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ.

ಸೆಪ್ಟೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಸುಜುಕಿ

ಭಾರತೀಯ ಮಾರುಕಟ್ಟೆಯಲ್ಲಿ ಮೂರು ತಲೆಮಾರುಗಳಲ್ಲಿ 24 ಲಕ್ಷ ವ್ಯಾಗನ್ಆರ್ ಮಾರಾಟವಾಗಿದೆ. ಮಾರುತಿ ಸುಜುಕಿ ಕಾರುಗಳ ಸರಣಿಯಲ್ಲಿ ವ್ಯಾಗನ್ಆರ್ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ.

ಸೆಪ್ಟೆಂಬರ್‌ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಾರುತಿ ಸುಜುಕಿ

ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದ್ದ ವ್ಯಾಗನ್ಆರ್ ಅನ್ನು ಮಾರುತಿ ಸುಜುಕಿ ಸಿಎನ್‌ಜಿ ಆವೃತ್ತಿಯಲ್ಲಿಯು ಬಿಡುಗಡೆಗೊಳಿಸಿದ್ದರು. ಮಾರುತಿ ಸುಜುಕಿ ವ್ಯಾಗನ್ಆರ್ ಸಿಎನ್‌ಜಿ ಆವೃತ್ತಿಯು ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ.

Most Read Articles

Kannada
English summary
Maruti Suzuki Records 30.8 Per Cent Sales Growth In September 2020. Read In Kannada.
Story first published: Thursday, October 1, 2020, 16:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X