ಅಕ್ಟೋಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಎಂಟ್ರಿ ಲೆವೆಲ್ ಮೈಕ್ರೊ ಎಸ್‌ಯುವಿಯಾದ ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಮಾರುತಿ ಎಸ್-ಪ್ರೆಸ್ಸೊ ಮಿನಿ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಮಾರುತಿ ಸುಜುಕಿ ಕಂಪನಿಯು ಸಾಮಾನ್ಯ ಜನರಿಗಾಗಿ ಕೈಗೆಟಕುವ ದರದಲ್ಲಿ ಈ ಮಿನಿ ಎಸ್‍‍ಯುವಿಯನ್ನು ಬಿಡುಗಡೆಗೊಳಿಸಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಎಸ್-ಪ್ರೆಸ್ಸೊ ಕಾರಿಗೆ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. 2020ರ ಅಕ್ಟೋಬರ್‌ ತಿಂಗಳಿನಲ್ಲಿ ಮಾರುತಿ ಸುಜುಕಿ ಎಸ್-ಪ್ರೆಸ್ಸೊ 10,612 ಯುನಿಟ್ ಗಳು ಮಾರಾಟವಾಗಿವೆ.

ಅಕ್ಟೋಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಎಸ್-ಪ್ರೆಸ್ಸೊ ಮಿನಿ ಎಸ್‍ಯುವಿ 998 ಸಿಸಿ ಪೆಟ್ರೋಲ್ ಎಂಜಿನ್‌ ‌67 ಬಿಎಚ್‌ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಆರಂಭಿಕ ಕಾರು ಮಾದರಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು ಹೈ ಎಂಡ್ ಮಾದರಿಯಲ್ಲಿ 5-ಸ್ಪೀಡ್ ಆಟೋ ಗೇರ್ ಶಿಫ್ಟ್(ಎಜಿಎಸ್) ಆಯ್ಕೆಯನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಅಕ್ಟೋಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಎಸ್-ಪ್ರೆಸ್ಸೊ ಕಾರಿನಲ್ಲಿ ಮೈಕ್ರೋ ಎಸ್‌ಯುವಿ ವಿನ್ಯಾಸದೊಂದಿಗೆ ಆಕರ್ಷಕ ಗ್ರೌಂಡ್ ಕ್ಲಿಯೆರೆನ್ಸ್, 14-ಇಂಚಿನ ಸ್ಟೀಲ್ ವೀಲ್ಹ್, ಸ್ಲಿಕ್ ಫ್ರಂಟ್ ಗ್ರಿಲ್, ಕ್ರೋಮ್ ಇನ್ಸರ್ಟ್, ಹೆಡ್‌ಲ್ಯಾಂಪ್, ವಿಸ್ತರಿತ ಸೆಂಟರ್ ಏರ್ ಇನ್‌ಟೆಕ್, ಸಿ ಶೇಫ್ ಟೈಲ್‌ಗೆಟ್ ಸೌಲಭ್ಯವು ಕಾರಿನ ಅಂದಕ್ಕೆ ಮತ್ತಷ್ಟು ಮೆರಗು ನೀಡುತ್ತವೆ.

ಅಕ್ಟೋಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಎಸ್-ಪ್ರೆಸ್ಸೊ ಕಾರಿನ ಇಂಟಿರಿಯರ್ ನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿದ್ದು, ಬಾಡಿ ಕಲರ್ ಡ್ಯಾಶ್‌ಬೋರ್ಡ್, ಸೆಂಟರ್ ಕನ್ಸೊಲ್‌ನಲ್ಲಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಟ್ಯಾಕೊ ಮೀಟರ್, ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಮಾರ್ಟ್‌ಪ್ಲೇ ಸ್ಟುಡಿಯೋ ಸಿಸ್ಟಂ,ಆ್ಯಪಲ್ ಕಾರ್ ಪ್ಲೇ/ಆಂಡ್ರಾಯ್ಡ್ ಆಟೋ, ಆರೇಂಜ್ ಕಲರ್ ಆಕ್ಸೆಂಟ್ ಸೌಲಭ್ಯವಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಅಕ್ಟೋಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಇದರೊಂದಿಗೆ ಈ ಕಾರಿನಲ್ಲಿ ಎಸಿ ವೆಂಟ್ಸ್, ಸ್ಟಿಯರಿಂಗ್ ಮೌಟೆಂಡ್ ಕಂಟ್ರೋಲ್, ಮ್ಯಾನುವಲ್ ಹೊಂದಾಣಿಕೆಯ ರೇರ್ ವ್ಯೂ ಮಿರರ್, 12ವೊಲ್ಟ್ ಚಾರ್ಜಿಂಗ್ ಸ್ಯಾಕೆಟ್, ಯುಎಸ್‌ಬಿ ಕನೆಕ್ಟ್ ಸಹ ಹೊಂದಿದ್ದು, ಕೇಂದ್ರ ಸರ್ಕಾರದ ಕ್ರ್ಯಾಶ್ ಟೆಸ್ಟ್ ನಿಯಮಗಳಿಗೆ ಅನುಗುಣವಾಗಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಈ ಕಾರಿನಲ್ಲಿ ಕೀ ಲೆಸ್ ಎಂಟ್ರಿ, ಬ್ಲೂ‌ಥೂತ್ ಕನೆಕ್ಟಿವಿಟಿ, ಪವರ್ ವಿಂಡೋ, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಪೀಡ್ ವಾರ್ನಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸಾರ್ ಸೇರಿದಂತೆ ಹಲವು ಫೀಚರ್ಸ್‌ಗಳನ್ನು ನೀಡಲಾಗಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಅಕ್ಟೋಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಎಸ್-ಪ್ರೆಸ್ಸೊ ಕಾರು ಸದ್ಯ ಪ್ರಮುಖ ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್ ಆಯ್ಕೆ ಮಾಡಬಹುದಾಗಿದೆ.

ಅಕ್ಟೋಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾಯ್ತು ಮಾರುತಿ ಸುಜುಕಿ ಎಸ್-ಪ್ರೆಸ್ಸೊ

ಭಾರತೀಯ ಮಾರುಕಟ್ಟೆಯಲ್ಲಿ ಎಸ್-ಪ್ರೆಸ್ಸೊ ಮಾದರಿಯನ್ನು ಸಿ‍ಎನ್‍‍ಜಿ ಆವೃತ್ತಿಯಲ್ಲಿ ಕೂಡ ಬಿಡುಗಡೆಗೊಳಿಸಲಾಗಿದೆ. ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಗರನ್ನು ಸೆಳೆಯುಯಲ್ಲಿ ಉತ್ತಮವಾಗಿ ಯಶಸ್ವಿಯಾಗಿದೆ

Most Read Articles

Kannada
English summary
Over 10,500 Units Of Maruti Suzuki S-Presso Sold In October 2020. Read In Kannada.
Story first published: Thursday, November 5, 2020, 14:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X