ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಕಂಪನಿಯ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಹೊಸ ಸಾಧನೆಯನ್ನು ಮಾಡಿದೆ. ಮಾರುತಿ ಸುಜುಕಿ ಕಂಪನಿಯು ಕೇವಲ 8 ತಿಂಗಳಲ್ಲಿ ಎಕ್ಸ್‌ಎಲ್6 ಕಾರಿನ 22,000 ಯುನಿಟ್ ಗಳನ್ನು ಮಾರಾಟ ಮಾಡಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಆದರೆ ಕಳೆದ ಮಾರ್ಚ್ ತಿಂಗಳ ಮಾರಾಟದ ವರದಿಯಲ್ಲಿ ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿಯ ಕಾರುಗಳ ಮಾರಾಟದಲ್ಲಿ ಭಾರಿ ಕುಸಿತವನ್ನು ಕಂಡಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ತಮ್ಮ ಕಾರುಗಳ ಮಾರಾಟದಲ್ಲಿ 47% ರಷ್ಟು ಭಾರಿ ಕುಸಿತವನ್ನು ಕಂಡಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಒಟ್ಟು 83,792 ಕಾರುಗಳು ಮಾರಾಟವಾಗಿವೆ. ಇದರಲ್ಲಿ ರಫ್ತು ಮಾಡಲಾದ ಕಾರುಗಳ ಸಂಖ್ಯೆಯು ಒಳಗೊಂಡಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಮಾರ್ಚ್ 2019-20ರ ಆರ್ಥಿಕ ವರ್ಷದ ಅಂತ್ಯದಲ್ಲಿ ಮಾರುತಿ ಸುಜುಕಿ ಕಂಪನಿಯು ವರ್ಷದಲ್ಲಿ ಒಟ್ಟು 15,63,297 ಕಾರುಗಳನ್ನು ಮಾರಟ ಮಾಡಿದೆ. ಮಾರುತಿ ಸುಜುಕಿ ಕಂಪನಿಯ ಕಾರುಗಳ ಮಾರಾಟದಲ್ಲಿ ಕುಸಿತ ಕಾಣಲು ಪ್ರಮುಖ ಕಾರಣ ಕರೋನಾ ವೈರಸ್ ಆಗಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಮಾರುತಿ ಸುಜುಕಿ ಕಂಪನಿಯ ಒಟ್ಟು ಮಾರಾಟದಲ್ಲಿ ಕುಸಿತ ಕಂಡಿರುವ ವೇಳೆಯಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಉತ್ತಮವಾಗಿ ಮಾರಾಟವಾಗುತ್ತಿದೆ. ಮಾರುತಿ ಎಕ್ಸ್‌ಎಲ್6 ಕಾರಿನ ಮಾರಾಟದಲ್ಲಿ ಏರಿಕೆಯನ್ನು ಕಂಡಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಮಾರುತಿ ಸುಜುಕಿ ಎಕ್ಸ್ಎಲ್6 ಕಾರಿನಲ್ಲಿ 1.5 ಲೀಟರ್ ಕೆ15 ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 103 ಬಿಎಚ್‍ಪಿ ಪವರ್ ಮತ್ತು 138 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರೊಂದಿಗೆ 4-ಸ್ಪೀಡ್ ಟಾರ್ಕ್ ಕರ್ನವಾಟರ್ ಅನ್ನು ಹೊಂದಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಹೆಚ್ಚು ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಂಡಿರುವ ಎಕ್ಸ್ಎಲ್6 ಕಾರಿನಲ್ಲಿ ಫ್ರಂಟ್ ಗ್ರಿಲ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಹೆಡ್‌ಲ್ಯಾಂಪ್ ಕ್ಲಸ್ಟರ್, ಎಲ್‌ಇಡಿ ಡಿಆರ್‌ಎಸ್ ಟರ್ನ್ ಇಂಡಿಕೇಟರ್, 15-ಇಂಚಿನ ಅಲಾಯ್ ವೀಲ್ಹ್ ಮತ್ತು ಎಲ್ಇಡಿ ಟೈಲ್ ಲೈಟ್ ಅನ್ನು ಹೊಂದಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಪ್ರಯಾಣಿಕರ ಸುರಕ್ಷತೆಗಾಗಿ ಕಾರಿನಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಅಸಿಸ್ಟ್, ಚೈಲ್ಡ್ ಸೀಟ್ ಮೌಂಟ್, ಕ್ರೂಸ್ ಕಂಟ್ರೋಲರ್, ರೇರ್ ಪಾರ್ಕಿಂಗ್ ಸೆನ್ಸಾರ್, ಸೆಂಟ್ರಲ್ ಲಾಕಿಂಗ್, ಫ್ರಂಟ್ ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಇದರೊಂದಿಗೆ 2019-20ರ ಆರ್ಥಿಕ ವರ್ಷದ ಅಂತ್ಯದಲ್ಲಿ ಮಾರುತಿ ಸುಜುಕಿಯ ಎರ್ಟಿಗಾ ಕಾರಿನ 90,547 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು 2018-2019ರ ಆರ್ಥಿಕ ವರ್ಷದಲ್ಲಿ 65,263 ಯುನಿಟ್‌ಗಳನ್ನು ಮಾರಾಟವಾಗಿತ್ತು. 2018-2019ರ ಆರ್ಥಿಕ ವರ್ಷವನ್ನು ಹೋಲಿಸಿದರೆ ಶೇ.39 ರಷ್ಟು ಹೆಚ್ಚಾಗಿದೆ.

ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಕೈಗೆಟುಕುವ ಬೆಲೆ ಮತ್ತು ಕಡಿಮೆ ನಿರ್ವಹಣೆಯು ಸುಲಭವಾಗಿರುವುದರಿಂದ ಭಾರತದಲ್ಲಿ ಬಿಡುಗಡೆಯಾಗಿರುವ ಬಹುತೇಕ ಮಾರುತಿ ಸುಜುಕಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯತೆಯೊಂದಿಗೆ ಗ್ರಾಹಕರ ಗಮನಸೆಳೆಯುವಲ್ಲಿ ಯಶ್ವಸಿಯಾಗಿದೆ.

More from DriveSpark

Article Published On: Thursday, April 9, 2020, 17:55 [IST]
English summary
Over 22,000 Units Of Maruti Suzuki XL6 Sold In Just 8 Months. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+