Just In
- 5 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಸೂಪರ್ ಕ್ಯಾರಿ
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿಯ ಕ್ಯಾರಿ ಲೈಟ್ ಕಮರ್ಷಿಯಲ್ ವೆಹಿಕಲ್ (ಎಲ್‌ಸಿವಿ) ಮಾರಾಟದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಮಾರುತಿ ಸುಜುಕಿ ಸೂಪರ್ ಕ್ಯಾರಿ ಎಲ್‌ಸಿವಿ ಪ್ರಸ್ತುತ ಮಿನಿ ಟ್ರಕ್ ವಿಭಾಗದಲ್ಲಿ ಶೇ.20 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ.

ಮಾರುತಿ ಸುಜುಕಿ ಸೂಪರ್ ಕ್ಯಾರಿ ಎಲ್‌ಸಿವಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೆ 70,000 ಯುನಿಟ್‌ಗಳು ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದೆ. ಮಾರುತಿ ಸುಜುಕಿ 2016ರಲ್ಲಿ ಸೂಪರ್ ಕ್ಯಾರಿಯೊಂದಿಗೆ ಕಮರ್ಷಿಯಲ್ ವಾಹನಗಳ ವಿಭಾಗಕ್ಕೆ ಕಾಲಿಟ್ಟಿತ್ತು. ಕೇವಲ ನಾಲ್ಕು ವರ್ಷಗಳಲ್ಲಿ ಮಾರುತಿ ಸುಜುಕಿ ಕಂಪನಿಯು ಹೊಸ ಮೈಲಿಗಲ್ಲನ್ನು ಸೃಷ್ಟಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕ (ಮಾರ್ಕೆಟಿಂಗ್ ಮತ್ತು ಸೇಲ್ಸ್) ಶಶಾಂಕ್ ಶ್ರೀವಾಸ್ತವ ಅವರು ಹೊಸ ಮೈಲಿಗಲ್ಲು ಕುರಿತು ಮಾತನಾಡಿ, ಉತ್ತಮ ಮೈಲೇಜ್ ನೀಡುವ ರೀತಿ ಭಾರತೀಯ ಮಿನಿ ಟ್ರಕ್ ಗ್ರಾಹಕರಿಗಾಗಿ ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಸೂಪರ್ ಕ್ಯಾರಿ ತನ್ನ ಭರವಸೆಗಳನ್ನು ಈಡೇರಿಸಿದೆ. ಮಾರುತಿ ಸುಜುಕಿ ಸೂಪರ್ ಕ್ಯಾರಿ ಕಮರ್ಷಿಯಲ್ ವಾಹನಗಳ ವಿಭಾಗದಲ್ಲಿ ಎರಡನೇ ಅತಿ ಹೆಚ್ಚು ಮಾರಾಟವಾದ ಮಿನಿ-ಟ್ರಕ್ ಆಗಿದೆ. ಸೂಪರ್ ಕ್ಯಾರಿಯ ಯಶಸ್ಸಿಗೆ ವೈವಿಧ್ಯಮಯ ಗ್ರಾಹಕರ ನೆಲೆಯು ಸಾಕ್ಷಿಯಾಗಿದೆ. ಈ ಮೈಲಿಗಲ್ಲನ್ನು ತಲುಪಲು ನಮ್ಮ ಎಲ್ಲ ವಿಶ್ವಾಸಾರ್ಹ ಖರೀದಿದಾರರಿಗೆ ಅವರು ನೀಡದ ಬೆಂಬಲಕ್ಕಾಗಿ ಧನ್ಯವಾದ ತಿಳಿಸುತೇನೆ ಎಂದು ಹೇಳಿದರು.

ಮಾರುತಿ ಸುಜುಕಿ ಹೊಸ ಸೂಪರ್ ಕ್ಯಾರಿ ಬಿಎಸ್-6 ಪ್ರೇರಿತ ಎಸ್-ಸಿಎನ್‌ಜಿ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಮಾರುತಿ ಸೂಪರ್ ಕ್ಯಾರಿ ವಾಹನವು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಅಪ್ಡೇಟ್ ಮಾಡಿ ಬಿಡುಗಡೆಗೊಳಿಸಿದ ಭಾರತದ ಮೊದಲ ಲೈಟ್ ಕಮರ್ಷಿಯಲ್ ವೆಹಿಕಲ್ (ಎಲ್ಸಿವಿ) ಆಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಸೂಪರ್ ಕ್ಯಾರಿ ಸಿಎನ್‌ಜಿಯು ಸ್ಮಾರ್ಟ್ ಹೈಬ್ರಿಡ್ ವಾಹನಗಳನ್ನು ಒಳಗೊಂಡಿರುವ ಬ್ರ್ಯಾಂಡ್‌ನ ‘ಮಿಷನ್ ಗ್ರೀನ್ ಮಿಲಿಯನ್' ನ ಭಾಗವಾಗಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿ ಮತ್ತು ಬಿಎಸ್-6 ಮಾದರಿಯಲ್ಲಿ ಬಿಡುಗಡೆಗೊಳಿಸಿರುವುದಕ್ಕೆ ಹೆಚ್ಚಿನ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ.

ವಿಶೇಷವಾಗಿ ಮಿನಿ ಲೈಟ್ ಕಮರ್ಷಿಯಲ್ ವೆಹಿಕಲ್ ವಿಭಾಗದ ವಾಹನಗಳ ಬಳೆಕೆದಾರರು ಕೂಡ ಹೆಚ್ಚಿನ ಸಂಖ್ಯೆಯಲ್ಲಿದೆ. ಈ ಸೂಪರ್ ಕ್ಯಾರಿಯು ಹೆಚ್ಚು ಪವರ್, ವಿಶಾಲವಾದ ಸ್ಪೇಸ್, ಉತ್ತಮ ಗುಣಮಟ್ಟ ಮತ್ತು ಬಹುಮುಖ ಡೆಕ್ ಅನ್ನು ಹೊಂದಿರುವುದು ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರುತಿ ಸುಜುಕಿ ಸೂಪರ್ ಕ್ಯಾರಿಯು ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 6000 ಆರ್‌ಪಿಎಂನಲ್ಲಿ 64 ಬಿಹೆಚ್‍ಪಿ ಪವರ್ ಮತ್ತು 85 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಲ್ಲಾ ಭೂಪ್ರದೇಶಗಳಲ್ಲಿ ಗರಿಷ್ಠ ಕಾರ್ಯಕ್ಷಮತೆ, ವರ್ಧಿತ ಡ್ರೈವಿಬಿಲಿಟಿ ನೀಡಲು ವಿಶೇಷವಾಗಿ ಟ್ಯೂನ್ ಮಾಡಲಾಗಿದೆ.

ಮಾರುತಿ ಸುಜುಕಿ ಸೂಪರ್ ಕ್ಯಾರಿಯು ದೇಶದ ಮೊದಲ 4 ಸಿಲಿಂಡರ್ ಚಾಲಿತ ಮಿನಿ ಟ್ರಕ್ ಕಮರ್ಷಿಯಲ್ ವಾಹನವಾಗಿದೆ. ಈ ವಾಹನವು ಹಲವಾರು ಫೀಚರ್ ಗಳನ್ನು ಹೊಂದಿದೆ. ಇದರಲ್ಲಿ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು, ಸೀಟ್-ಬೆಲ್ಟ್ ರಿಮೈಂಡರ್, ಲಾಕ್ ಮಾಡಬಹುದಾದ ಗ್ಲೋವ್‌ಬಾಕ್ಸ್, ದೊಡ್ಡ ಲೋಡಿಂಗ್ ಡೆಕ್ ಮತ್ತು ಇನ್ನೂ ಹಲವು ಫೀಚರ್ ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಸೂಪರ್ ಕ್ಯಾರಿ ಎಲ್‌ಸಿವಿ ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಏಸ್ ಗೆ ಪೈಪೋಟಿಯನ್ನು ನೀಡುತ್ತದೆ. ಸೂಪರ್ ಕ್ಯಾರಿ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಲೈಟ್ ಕಮರ್ಷಿಯಲ್ ವೆಹಿಕಲ್ (ಎಲ್ಸಿವಿ) ಆಗಿದೆ. ಮಾರುತಿ ಸುಜುಕಿ ಸೂಪರ್ ಕ್ಯಾರಿಯು ದೇಶದ ಮೊದಲ 4 ಸಿಲಿಂಡರ್ ಚಾಲಿತ ಮಿನಿ ಟ್ರಕ್ ಎಂಬ ಹೆಗ್ಗಳಿಕೆಯೊಂದಿಗೆ ಹಲವಾರು ವಿಶೇಷತೆಗಳನ್ನು ಒಳಗೊಂಡಿವೆ.