ಬಿಎಸ್-6 ಕಾರುಗಳಲ್ಲಿ ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೋಡಣೆ ಮಾಡಿದ ಮಾರುತಿ ಸುಜುಕಿ

ಬಿಎಸ್-6 ನಿಯಮದಿಂದಾಗಿದ ಬಹುತೇಕ ಕಾರು ಮಾದರಿಗಳ ಎಂಜಿನ್ ಆಯ್ಕೆಯಲ್ಲಿ ಭಾರೀ ಬದಲಾವಣೆಗಳಾಗಿದ್ದು, ಇದೀಗ ಮಾರುತಿ ಸುಜುಕಿ ಕಂಪನಿಯು ಹೊಸ ಎಂಜಿನ್ ಪ್ರೇರಿತ ಕಾರುಗಳಲ್ಲಿ ಇನ್ಪೋಟೈನ್‌ಮೆಂಟ್ ಸಿಸ್ಟಂ ಬದಲಾವಣೆಗೊಳಿಸಿದೆ.

ಸದ್ಯ ಕರೋನಾ ವೈರಸ್ ಹಿನ್ನಲೆ ಲಾಕ್‌ಡೌನ್ ವಿಧಿಸಿದ್ದು, ಯಾವುದೇ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿಲ್ಲ. ಈ ನಡುವೆ ಹೊಸ ಕಾರುಗಳ ತಾಂತ್ರಿಕ ಅಂಶಗಳಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸಿರುವುದಾಗಿ ಹೇಳಿಕೊಂಡಿರುವ ಮಾರುತಿ ಸುಜುಕಿಯು ಲಾಕ್‌ಡೌನ್ ತೆರೆದ ನಂತರ ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿರುವ ಕಾರು ಮಾದರಿಗಳನ್ನು ಖರೀದಿಗೆ ಅಧಿಕೃತವಾಗಿ ಲಭ್ಯವಿರುವುದಾಗಿ ಹೇಳಿಕೊಂಡಿದೆ.

ಬಿಎಸ್-6 ಕಾರುಗಳಲ್ಲಿ ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೋಡಣೆ ಮಾಡಿದ ಮಾರುತಿ ಸುಜುಕಿ

ಮಲ್ಟಿ ಕಲರ್ ಹೊಂದಿರುವ ಹೊಸ ಇನ್ಪೊಟೈನ್‌ಮೆಂಟ್ ಸೌಲಭ್ಯವು ಗ್ರಾಹಕರ ಆಕರ್ಷಣೆ ಕಾರಣವಾಗಲಿದ್ದು, ಹೊಸ ಸೌಲಭ್ಯವನ್ನು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೇ ನೀಡುವುದಾಗಿ ಹೇಳಿಕೊಂಡಿದೆ.

ಇನ್ನು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ನಿಯಮ ಅನ್ವಯ ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ಪರಿಚಯಿಸಿದ್ದು, ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಸೇರಿದಂತೆ ಹಲವು ಕಾರು ಆವೃತ್ತಿಯಲ್ಲಿನ ಡೀಸೆಲ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಲಾಗಿದೆ.

ಬಿಎಸ್-6 ಎಂಜಿನ್ ಕಾರುಗಳ ಮಾರಾಟದಲ್ಲಿ ಈಗಾಗಲೇ ಹೊಸ ದಾಖಲೆಗೆ ಕಾರಣವಾಗಿರುವ ಮಾರುತಿ ಸುಜುಕಿಯು ಸುಮಾರು 7 ಲಕ್ಷ ಯುನಿಟ್ ಮಾರಾಟ ಮಾಡಿದ್ದು, ಮಾರಾಟಗೊಂಡಿರುವ ಬಹುತೇಕ ಕಾರುಗಳು ಬಿಎಸ್-6 ಪೆಟ್ರೋಲ್ ಮಾದರಿಗಳಾಗಿವೆ. ಹೊಸ ಎಮಿಷನ್ ನಿಯಮದಂತೆ ಕಳೆದ ವರ್ಷದ ಜನವರಿಯಿಂದಲೇ ಬಿಎಸ್-6 ಪೆಟ್ರೋಲ್ ಕಾರುಗಳ ಮಾರಾಟವನ್ನು ಆರಂಭಿಸಿದ್ದ ಮಾರುತಿ ಸುಜುಕಿಯು ಡೀಸೆಲ್ ಕಾರುಗಳ ಮಾರಾಟವನ್ನು ಮಾತ್ರ ಬಿಎಸ್-4 ಎಂಜಿನ್‌ನಲ್ಲೇ ಮುಂದುವರಿಸಿತ್ತು.

ಹೊಸ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೋಡಣೆ ಮಾಡಿದ ಮಾರುತಿ ಸುಜುಕಿ

ಆದರೆ ಇದೀಗ ಏಪ್ರಿಲ್ 1ರಿಂದ ಬಿಎಸ್-6 ನಿಯಮವು ಕಡ್ಡಾಯವಾಗಿ ಜಾರಿಗೆ ಬಂದ ಹಿನ್ನಲೆ ಪ್ರಮುಖ ಕಾರುಗಳಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.3-ಲೀಟರ್ ಡೀಸೆಲ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದ್ದು, ಜನಪ್ರಿಯ ಸ್ವಿಫ್ಟ್ ಕಾರಿನಲ್ಲೂ ಕೂಡಾ ಇನ್ಮುಂದೆ ಡೀಸೆಲ್ ಆವೃತ್ತಿಯು ಖರೀದಿಗೆ ಲಭ್ಯವಿರುವುದಿಲ್ಲ.

ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಡೀಸೆಲ್ ಎಂಜಿನ್ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿವೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ನಿರ್ಮಾಣದ ಬಿಎಸ್-4 ಡೀಸೆಲ್ ಕಾರುಗಳ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಣವು ಆರ್ಥಿಕವಾಗಿ ಹೊರೆಯಾಗಲಿದ್ದು, ಇದೇ ಕಾರಣಕ್ಕೆ ಪೆಟ್ರೋಲ್, ಪೆಟ್ರೋಲ್ ಜೊತೆಗೆ ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆ ಹೆಚ್ಚಿಸಲಾಗುತ್ತಿದೆ.

ಒಂದು ವೇಳೆ ಕಡಿಮೆ ಸಾಮರ್ಥ್ಯದ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಿಸಿದರೂ ಬೆಲೆ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಲಿದ್ದು, ಇದಕ್ಕಾಗಿಯೇ ಮಾರುತಿ ಸುಜುಕಿಯು ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲು ಮುಂದಾಗುತ್ತಿಲ್ಲ.

Article Published On: Saturday, April 18, 2020, 8:45 [IST]
English summary
Maruti Suzuki Swift Gets An Updated Infotainment System — No Hike In Price. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+