ಬಲೆನೊ ಆಧರಿಸಿ ಮತ್ತೊಂದು ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಮಾರುತಿ ಸುಜುಕಿಯು ಮುಂಬರುವ 2022ರ ಹೊತ್ತಿಗೆ ಐದು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ನೀರಿಕ್ಷೆಯಲ್ಲಿದ್ದು, ಬಲೆನೊ ಹ್ಯಾಚ್‌ಬ್ಯಾಕ್ ಆಧರಿಸಿ ನಿರ್ಮಾಣವಾಗಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಮಾರುತಿ ಸುಜುಕಿಗೆ ಕಂಪನಿಗೆ ಮತ್ತಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಟಾಪ್ 10 ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ನಿರ್ಮಾಣದ ಏಳು ಕಾರುಗಳು ಸ್ಥಾನ ಪಡೆದುಕೊಂಡಿದ್ದು, ಟಾಪ್ 10 ಕಾರು ಮಾರಾಟದಲ್ಲಿ ಹತ್ತು ಸ್ಥಾನಗಳನ್ನು ಆಕ್ರಮಿಸಿಕೊಳ್ಳುವ ತವಕದಲ್ಲಿರುವ ಮಾರುತಿ ಸುಜುಕಿಯು ವಿವಿಧ ಮಾದರಿಯ ಐದು ಹೊಸ ಕಾರುಗಳನ್ನು ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಹೊಸ ಕಾರುಗಳ ಪೈಕಿ ಬಲೆನೊ ಹ್ಯಾಚ್‌ಬ್ಯಾಕ್ ಆಧರಿಸಿ ನಿರ್ಮಾಣ ಮಾಡಲಾಗುತ್ತಿರುವ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಹೊಸ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಸದ್ಯ ವೈಟಿಬಿ ಕೋಡ್‌ನೆಮ್ ಅಡಿ ಅಭಿವೃದ್ದಿಗೊಳಿಸಲಾಗುತ್ತಿದ್ದು, ಹೊಸ ಕಾರು ಕ್ರಾಸ್ ಓವರ್ ಮತ್ತು ಕೂಪೆ ಕಾರುಗಳ ವಿನ್ಯಾಸದೊಂದಿಗೆ ಪ್ರಮುಖ ಆಕರ್ಷಣೆಯಾಗಲಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಮಾರುತಿ ಸುಜುಕಿಯು ಹೊಸ ಕಾರನ್ನು ಬಲೆನೊ ಮಾದರಿಗಿಂತಲೂ ಹೆಚ್ಚು ಮತ್ತು ವಿಟಾರಾ ಬ್ರೆಝಾಗಿಂತಲೂ ಕೆಳಗಿನ ಸ್ಥಾನದಲ್ಲಿರಿಸಿದ್ದು, ಇತ್ತೀಚೆಗೆ ಬಿಡುಗಡೆಯಾಗಿ ಭಾರೀ ಜನಪ್ರಿಯತೆ ಗಳಿಸುತ್ತಿರುವ ನಿಸ್ಸಾನ್ ಮ್ಯಾಗ್ನೈಟ್, ಕಿಯಾ ಸೊನೆಟ್ ಕಾರು ಮಾದರಿಗಳಿಗೆ ಪೈಪೋಟಿಯಾಗಿ ರಸ್ತೆಗಿಳಿಯಲಿದೆ. ಹೊಸ ಕಾರು ಬಲೆನೊ ಮಾದರಿಯಲ್ಲೇ 1.2-ಲೀಟರ್ ಡ್ಯುಯಲ್ ಜೆಟ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದ್ದು, ಹೊಸ ಕಾರಿನ ಬೆಲೆಯು ರೂ.6 ಲಕ್ಷದಿಂದ ರೂ. 8 ಲಕ್ಷ ಅಂತರದಲ್ಲಿ ನಿಗದಿಯಾಗುವ ಸಾಧ್ಯತೆಗಳಿವೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಹೊಸ ಕಾರಿನ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡಲು ಯತ್ನಿಸುತ್ತಿರುವ ಮಾರುತಿ ಸುಜಕಿಯು ಪ್ರಯಾಣಿಕರ ಸುರಕ್ಷಿತ ವಿಚಾರವಾಗಿಯೂ ಹೊಸ ಕಾರು ಉತ್ಪನ್ನಗಳಲ್ಲಿ ಮಹತ್ವದ ಬದಲಾವಣೆ ತರುತ್ತಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಮಾರುತಿ ಸುಜುಕಿ ಕಾರುಗಳ ಪ್ರಮುಖ ಪ್ರತಿಸ್ಪರ್ಧಿಗಳು ಪ್ರಯಾಣಿಕರ ಸುರಕ್ಷಾ ವಿಚಾರವಾಗಿ ಸಾಕಷ್ಟು ಸುಧಾರಣೆ ಕಂಡಿದ್ದು, ಮಾರುತಿ ಸುಜುಕಿಯು ಸಹ ಸಂಪೂರ್ಣ ಹೊಸ ಕಾರು ಮಾದರಿಗಳ ಮೂಲಕ ಕಾರು ಮಾರಾಟದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳಲು ಯತ್ನಿಸುತ್ತಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಇದಕ್ಕಾಗಿಯೇ ಕಾರುಗಳ ಉತ್ಪಾದನಾ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಉತ್ಪಾದನಾ ಘಟಕವನ್ನು ವಿಸ್ತರಣೆ ಮಾಡುತ್ತಿದ್ದು, ಹೊಸ ವಾಹನ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಘಟಕಗಳ ವಿಸ್ತರಣೆಗಾಗಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಮಾರುತಿ ಸುಜುಕಿಯು ಮನೆಸಾರ್, ಗುರುಗ್ರಾಮ್‌ ಮತ್ತು ಹನ್ಸಲ್‌ಪುರ್‌ನಲ್ಲಿ ಒಟ್ಟು ಮೂರು ವಾಹನ ಉತ್ಪಾದನಾ ಘಟಕಗಳನ್ನು ಹೊಂದಿದ್ದು, ಕಾರ್ಪೊರೇಷನ್ ವ್ಯಾಪ್ತಿಯಲ್ಲಿರುವ ಗುರುಗ್ರಾಮ್ ಕಾರು ಉತ್ಪಾದನಾ ಘಟಕದಿಂದ ಹೊರಹೋಗಲು ನಿರ್ಧರಿಸಿದೆ.

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ನಗರೀಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾರು ಉತ್ಪಾದನಾ ಘಟಕ ವಿಸ್ತರಣೆಗೆ ಅವಕಾಶವಿಲ್ಲವಾಗಿದ್ದು, ಹೊಸ ಘಟಕ ನಿರ್ಮಾಣಕ್ಕಾಗಿ ಸ್ಥಳ ಬದಲಾವಣೆ ಮಾಡುತ್ತಿದೆ. ಗುರುಗ್ರಾಮ್ ಕಾರು ಉತ್ಪಾದನಾ ಘಟಕವು 300 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದು, ಈ ಘಟಕದಲ್ಲಿ ವಾರ್ಷಿಕವಾಗಿ 7 ಲಕ್ಷ ಕಾರುಗಳನ್ನು ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ಮಾರುತಿ ಸುಜುಕಿ

ಆದರೆ ಪ್ಯಾಸೆಂಜರ್ ವಾಹನಗಳ ಬೇಡಿಕೆ ಹೆಚ್ಚುತ್ತಿರುವುದರಿಂದ ಘಟಕ ವಿಸ್ತರಣೆಯು ಮಾರುತಿ ಸುಜುಕಿ ಕಂಪನಿಗೆ ಅನಿವಾರ್ಯವಾಗಿದ್ದು, ಮುಂಬರುವ ದಿನಗಳಲ್ಲಿ ಹೊಸ ವಾಹನಗಳ ಬಿಡುಗಡೆಗೆ ಪೂರಕವಾಗಿ ಘಟಕ ವಿಸ್ತರಣೆ ಮೂಲಕ ಕಾರು ಮಾರಾಟದಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಲಿದೆ.

Article Published On: Thursday, December 17, 2020, 13:48 [IST]
English summary
Maruti Suzuki To Launch A New Sub Compact SUV In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+