ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಭರ್ಜರಿ ಯಶಸ್ಸು ಕಂಡಿರುವ ಮಾರುತಿ ಸುಜುಕಿ ಬ್ರೆಝಾ ಆವೃತ್ತಿಯು ಅತಿ ಕಡಿಮೆ ಅವಧಿಯಲ್ಲಿ ದಾಖಲೆ ಪ್ರಮಾಣದ ಮಾರಾಟ ದಾಖಲೆ ಕಂಡಿದ್ದು, ಬಿಡುಗಡೆಯಾದ 46 ತಿಂಗಳ ಅವಧಿಯಲ್ಲಿ 5 ಲಕ್ಷ ಯುನಿಟ್ ಮಾರಾಟವಾಗಿವೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಮಾರಾಟವಾದ ಕಾರುಗಳ ಪೈಕಿ ಮಾರುತಿ ಸುಜುಕಿ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿ ಕೂಡಾ ಒಂದಾಗಿದ್ದು, ಬಿಡುಗಡೆಯಾದ ನಾಲ್ಕು ವರ್ಷಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಾರಾಟಗೊಳ್ಳುವ ಮೂಲಕ ಅಗ್ಗಸ್ಥಾನಕ್ಕೇರಿದೆ. 2016ರ ಮಾರ್ಚ್ 8ರಂದು ಭಾರತೀಯ ಮಾರುಕಟ್ಟೆ ಪ್ರವೇಶಿಸಿದ್ದ ವಿಟಾರಾ ಬ್ರೆಝಾ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಪ್ರತಿ ತಿಂಗಳು ಸರಾಸರಿ 13 ಸಾವಿರದಿಂದ 15 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ ಇದೀಗ 5 ಲಕ್ಷ ಯುನಿಟ್ ಮಾರಾಟ ಗುರಿತಲುಪಿದೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಸದ್ಯ ಮಾರುಕಟ್ಟೆಯಲ್ಲಿ ಬ್ರೆಝಾ ಆವೃತ್ತಿಯು ಕೇವಲ ಡೀಸೆಲ್ ಎಂಜಿನ್‌ನಲ್ಲಿ ಮಾತ್ರವೇ ಮಾರಾಟಗೊಳ್ಳುತ್ತಿದ್ದು, ಬ್ರೆಝಾ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.86 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10.77 ಲಕ್ಷ ಬೆಲೆ ಪಡೆದುಕೊಂಡಿದೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಗ್ರಾಹಕರ ಬೇಡಿಕೆಯೆಂತೆ ಒಟ್ಟು ಒಂಬತ್ತು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಬ್ರೆಝಾ ಕಾರು 1.3-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯವನ್ನು ಪಡೆದುಕೊಂಡಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿದೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಮುಂಬರುವ ದಿನಗಳಲ್ಲಿ ಬಿಡುಗಡೆ ಸಿದ್ದವಾಗಿರುವ ಪೆಟ್ರೋಲ್ ಆವೃತ್ತಿಯು ಬ್ರೆಝಾ ಮಾರಾಟದಲ್ಲಿ ಮತ್ತಷ್ಟು ಹೆಚ್ಚಳವಾಗುವ ನೀರಿಕ್ಷೆಯಲ್ಲಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ಹೊಸ ನಿಯಮದಂತೆ ಬ್ರೆಝಾ ಡೀಸೆಲ್ ಎಂಜಿನ್‌ನಲ್ಲೂ ಮಹತ್ವದ ಬದಲಾವಣೆಗೆ ಯೋಜನೆ ರೂಪಿಸಿದೆ. ಬ್ರೆಝಾ ಮಾತ್ರವಲ್ಲದೇ ಮಾರುತಿ ಸುಜುಕಿ ನಿರ್ಮಾಣದ ಬಹುತೇಕ ಡೀಸೆಲ್ ಎಂಜಿನ್ ಕಾರುಗಳನ್ನು ಪ್ರಸ್ತುತ ಎಂಜಿನ್ ಆಯ್ಕೆಯನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಪೆಟ್ರೋಲ್, ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮೇಲೆ ಹೆಚ್ಚು ಗಮನಹರಿಸಲಾಗುತ್ತಿದೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಫೆಬ್ರುವರಿ 5ರಿಂದ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಿದ ನಂತರವಷ್ಟೇ ಬ್ರೆಝಾ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡುವುದಾಗಿ ಮಾರುತಿ ಸುಜುಕಿ ಸಂಸ್ಥೆಯು ಸುಳಿವು ನೀಡಿದ್ದು, ಹೊಸ ಕಾರು ಬಿಎಸ್-6 ಪ್ರೇರಣೆಯ 1.5 ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 105-ಬಿಹೆಚ್‍ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಇನ್ನು ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಈ ಬದಲಾವಣೆಗೆ ಪ್ರಮುಖ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದಿವೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ನಿರ್ಮಾಣದ ಬಿಎಸ್-4 ಡೀಸೆಲ್ ಎಂಜಿನ್‌ಗಳನ್ನು ಬಿಎಸ್-6 ನಿಯಮಕ್ಕೆ ಉನ್ನತೀಕರಣವು ಅಸಾಧ್ಯ ಎನ್ನಲಾಗುತ್ತಿದ್ದು, ಆರ್ಥಿಕವಾಗಿ ಹೊರೆಯಾಗಲಿರುವ ಉನ್ನತೀಕರಣ ಪ್ರಕ್ರಿಯೆಯಿಂದ ಹಿಂದೆ ಸರಿದಿರುವ ಮಾರುತಿ ಸುಜುಕಿಯು ಡೀಸೆಲ್ ಎಂಜಿನ್‌ಗೆ ಪರ್ಯಾಯವಾಗಿ ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಹೆಚ್ಚಿಸುತ್ತಿದೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಈಗಾಗಲೇ ಮಾರುಕಟ್ಟೆಯಲ್ಲಿ ವ್ಯಾಗನ್‌ಆರ್, ಸೆಲೆರಿಯೊ, ಆಲ್ಟೋ 800 ಮತ್ತು ಎರ್ಟಿಗಾ ಮಾದರಿಗಳಲ್ಲಿ ಸಿಎನ್‌ಜಿ ಆಯ್ಕೆಯನ್ನು ಪರಿಚಯಿಸಿರುವ ಮಾರುತಿ ಸುಜುಕಿ ಸಂಸ್ಥೆಯು ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಹೊಸ ಹೊಸ ಪ್ರಯತ್ನಗಳನ್ನು ಕೈಗೊಳ್ಳುತ್ತಿದೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಈ ಮೂಲಕ ಡೀಸೆಲ್ ಎಂಜಿನ್‌ನಲ್ಲಿ ದೊರೆಯುತ್ತಿದ್ದ ಮೈಲೇಜ್ ಪ್ರಮಾಣವನ್ನೇ ಪೆಟ್ರೋಲ್ ಹೈಬ್ರಿಡ್ ಮತ್ತು ಪೆಟ್ರೋಲ್ ಸಿಎನ್‌ಜಿ ವರ್ಷನ್‌ಗಳ ಮೂಲಕ ಒದಗಿಸಲು ಪ್ರಯತ್ನಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಬಿಎಸ್-6 ಜಾರಿಯಾಗುವುದಕ್ಕೂ ಮುನ್ನವೇ ಗ್ರಾಹಕರನ್ನು ಹೊಸ ಕಾರುಗಳತ್ತ ಸೆಳೆಯುವ ವಿಶ್ವಾಸದಲ್ಲಿದೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಹೀಗಾಗಿ ರೂ.10 ಲಕ್ಷದೊಳಗಿನ ಕಾರುಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯ ಬಗೆಗೆ ಹೆಚ್ಚು ತೆಲೆಕೆಡಿಸಿಕೊಳ್ಳದೇ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಆವೃತ್ತಿಗಳಿಗೆ ವಿಶೇಷ ಗಮನಹರಿಸಲು ನಿರ್ಧರಿಸಲಾಗಿದ್ದು, ಎಂಟ್ರಿ ಲೆವೆಲ್ ಕಾರುಗಳಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ಮಾತ್ರವೇ ಸಿಗಲಿದೆ.

ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಮಾರುತಿ ಸುಜುಕಿ ಬ್ರೆಝಾ

ಎಂಟ್ರಿ ಲೆವಲ್ ಕಾರುಗಳಲ್ಲಿ 1.0-ಲೀಟರ್, 1.2-ಲೀಟರ್, 1.4-ಲೀಟರ್ ಟರ್ಬೋ, 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಮತ್ತು ಹೈ ಎಂಡ್ ಮಾದರಿಗಳಲ್ಲಿ ಮಾತ್ರವೇ 1.5-ಲೀಟರ್, 1.6-ಲೀಟರ್ ಸಾಮರ್ಥ್ಯದ ಡೀಸೆಲ್ ಎಂಜಿನ್ ಬಿಡುಗಡೆ ಮಾಡಲಿರುವ ಮಾರುತಿ ಸುಜುಕಿ ಸಂಸ್ಥೆಯು, ಬಿಎಸ್-6 ನಂತರ ಬೆಲೆ ಹೆಚ್ಚಿದರೂ ಕೂಡಾ ಹೊಸ ಬದಲಾವಣೆಯೊಂದಿಗೆ ಕಾರು ಮಾರಾಟವು ಕುಸಿಯದಂತೆ ಎಂಜಿನ್ ಆಯ್ಕೆಗಳನ್ನು ಸಿದ್ದಪಡಿಸುತ್ತಿದೆ.

Article Published On: Tuesday, January 7, 2020, 11:09 [IST]
English summary
Maruti Suzuki India announced that its compact SUV - Vitara Brezza has marked another milestone by achieving 5 lakh sales in a record time of just 46 months since its launch.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+