ಹೊಸ ಅರ್ಬನ್ ಕ್ರೂಸರ್ ಕಾರು ಬಿಡುಗಡೆಗೆ ಸಿದ್ದವಾದ ಟೊಯೊಟಾ-ಮಾರುತಿ ಸುಜುಕಿ
ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಈಗಾಗಲೇ ಸಹಭಾಗಿತ್ವದ ಯೋಜನೆ ಅಡಿ ಹೊಸ ಮಾದರಿಗಳ ಮಾರಾಟಕ್ಕೆ ಅಧಿಕೃತವಾಗಿಯೇ ಚಾಲನೆ ನೀಡಿದ್ದು, ಶೀಘ್ರದಲ್ಲೇ ಹೊಸ ಅರ್ಬನ್ ಕ್ರೂಸರ್ ಕಾರು ಮಾದರಿಯನ್ನು ಸಹ ಬಿಡುಗಡೆ ಮಾಡಲಿವೆ.

ಮಾರುತಿ ಸುಜುಕಿ ನಿರ್ಮಾಣದ ಬಲೆನೊ ಕಾರನ್ನು ಗ್ಲಾಂಝಾ ಎನ್ನುವ ಹೆಸರಿನೊಂದಿಗೆ ರೀಬ್ಯಾಡ್ಜ್ ಆವೃತ್ತಿಯಾಗಿ ಮಾರಾಟ ಮಾಡುತ್ತಿರುವ ಟೊಯೊಟಾ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ರೀಬ್ಯಾಡ್ಜ್ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಕ್ರೆಟಾ ಮತ್ತು ಸೆಲ್ಟೊಸ್ ಕಾರಿಗೆ ಪೈಪೋಟಿಯಾಗಿ ಅರ್ಬನ್ ಕ್ರೂಸರ್ ಹೆಸರಿನ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಶೀಘ್ರದಲ್ಲೇ ಮಾರಾಟಕ್ಕೆ ಲಭ್ಯವಾಗಲಿದೆ.

ರೀಬ್ಯಾಡ್ಜ್ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಅರ್ಬನ್ ಕ್ರೂಸರ್ ಬಿಡುಗಡೆಗಾಗಿ ಮೂಲ ರೂಪದ ವಿಟಾರಾ ಬ್ರೆಝಾ ಕಾರನ್ನು ಟೊಯೊಟಾ ಕಂಪನಿಗೆ ಪೂರೈಕೆ ಮಾಡುವ ಮಾರುತಿ ಸುಜುಕಿ ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಹೊಸ ಕಾರು ಅಗಸ್ಟ್ ಅಥವಾ ಸೆಪ್ಟೆಂಬರ್ ಹೊತ್ತಿಗೆ ಖರೀದಿಗೆ ಲಭ್ಯವಾಗಲಿದೆ.

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ವಿಟಾರಾ ಬ್ರೆಝಾ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿರಲಿದ್ದು, ಆರಂಭಿಕವಾಗಿ ರೂ.9 ಲಕ್ಷದಿಂದ ರೂ.12 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಮಾಹಿತಿಗಳ ಪ್ರಕಾರ, ಹೊಸ ಕಾರು ಅರ್ಬನ್ ಕ್ರೂಸರ್ ಎನ್ನುವ ಹೆಸರಿನೊಂದಿಗೆ ಬಿಡುಗಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದ್ದು, 1.5-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಹೈಬ್ರಿಡ್ ತಂತ್ರಜ್ಞಾನವನ್ನು ಪಡೆದುಕೊಳ್ಳಲಿದೆ.

ಇತ್ತೀಚೆಗೆ ಜಪಾನ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿರುವ ಟೊಯೊಟಾ ರೈಜ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕೂಡಾ ಬಹುತೇಕ ವಿಟಾರಾ ಬ್ರೆಝಾ ಮಾದರಿ ಹೊಲಿಕೆಯನ್ನು ಪಡೆದುಕೊಂಡಿದ್ದು, ಅದೇ ಕಾರು ಮಾದರಿಯ ವಿನ್ಯಾಸಗಳನ್ನು ಇದೀಗ ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ರೀಬ್ಯಾಡ್ಜ್ ಕಾರಿನಲ್ಲೂ ಅಳವಡಿಸಿಕೊಳ್ಳುವ ಸಾಧ್ಯತೆಗಳಿವೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಸೆಲ್ಟೊಸ್, ಕ್ರೆಟಾ ಮತ್ತು ಎಂಜಿ ಹೆಕ್ಟರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ನಿರ್ಮಾಣದ ಹೊಸ ಕಾರು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದೆ.

ಇನ್ನು ಸಹಭಾಗಿತ್ವದ ಯೋಜನೆ ಅಡಿ ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಹೊಸ ವಾಹನಗಳ ಉತ್ಪಾದನಾ ವೆಚ್ಚ ತಗ್ಗಿಸುವ ಯೋಜನೆ ರೂಪಿಸಿದ್ದು, ಪ್ರೀಮಿಯಂ ಕಾರುಗಳ ಉತ್ಪಾದನಾ ವೆಚ್ಚವನ್ನು ತಗ್ಗಿಸುವ ಉದ್ದೇಶದಿಂದ ಮಾರುತಿ ಸುಜುಕಿ ಬಳಕೆ ಮಾಡುವ ಬಿಡಿಭಾಗಗಳನ್ನು ಟೊಯೊಟಾ ಕಾರುಗಳನ್ನು ಬಳಕೆ ಮಾಡುವ ಯೋಜನೆ ರೂಪಿಸಲಾಗುತ್ತಿದೆ.
MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಹೊಸ ಯೋಜನೆಯಿಂದ ಕಾರುಗಳ ಉತ್ಪಾದನಾ ವೆಚ್ಚವನ್ನು ಗಣನೀಯವಾಗಿ ತಗ್ಗಿಸಬಹುದಾದ ಬಗ್ಗೆ ಚಿಂತನೆ ನಡೆಸಿರುವ ಟೊಯೊಟಾ ಕಂಪನಿಯು ಗುಣಮಟ್ಟವನ್ನು ಸಹ ಕಾಯ್ದುಕೊಳ್ಳುವಲ್ಲಿ ಎಚ್ಚರ ವಹಿಸುತ್ತಿದ್ದು, ಸಾಧ್ಯವಷ್ಟು ಮಟ್ಟಿಗೆ ವೆಚ್ಚ ಕಡಿತಗೊಳಿಸುವಂತಹ ಬಿಡಿಭಾಗಗಳನ್ನು ಮಾತ್ರವೇ ಮಾರುತಿ ಸುಜುಕಿ ಬಿಡಿಭಾಗಗಳ ಪೂರೈಕೆದಾರರಿಂದ ಪಡೆದುಕೊಳ್ಳುವ ಯೋಜನೆಯಲ್ಲಿದೆ.


Click it and Unblock the Notifications








