ಬಿಎಸ್-6 ಎಂಜಿನ್ ಪ್ರೇರಿತ ವ್ಯಾಗನ್‌ಆರ್ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಸಂಸ್ಥೆಯು ಈಗಾಗಲೇ ತನ್ನ ಪ್ರಮುಖ ಪೆಟ್ರೋಲ್ ಕಾರು ಮಾದರಿಗಳನ್ನು ಬಿಎಸ್-4 ನಿಂದ ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸಿ ಬಿಡುಗಡೆಗೊಳಿಸಿದ್ದು, ಇದೀಗ ಸಿಎನ್‌ಜಿ ಆವೃತ್ತಿಗಳನ್ನು ಸಹ ಹೊಸ ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿ ಬಿಡುಗಡೆ ಮಾಡುತ್ತಿದೆ.

ಬಿಎಸ್-6 ಎಂಜಿನ್ ಪ್ರೇರಿತ ವ್ಯಾಗನ್‌ಆರ್ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ವ್ಯಾಗನ್‌ಆರ್, ಆಲ್ಟೋ 800, ಆಲ್ಟೋ ಕೆ10, ಸೆಲೆರಿಯೊ ಮತ್ತು ಎರ್ಟಿಗಾ ಕಾರುಗಳಲ್ಲಿ ಸಿಎನ್‌ಜಿ ವರ್ಷನ್‌ಗಳನ್ನು ಮಾರಾಟಗೊಳಿಸುತ್ತಿರುವ ಮಾರುತಿ ಸುಜುಕಿ ಸಂಸ್ಥೆಯು ಇದೀಗ ಹೊಸ ಕಾರುಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸಿ ಬಿಡುಗಡೆಗೊಳಿಸಿದ್ದು, ವ್ಯಾಗನ್ಆರ್ ಸಿಎನ್‌ಜಿ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.25 ಲಕ್ಷ ಬೆಲೆ ಪಡೆದುಕೊಂಡಿದೆ.

ಬಿಎಸ್-6 ಎಂಜಿನ್ ಪ್ರೇರಿತ ವ್ಯಾಗನ್‌ಆರ್ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಗ್ರಾಹಕರ ಬೇಡಿಕೆ ಮೇರೆಗೆ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ವ್ಯಾಗನ್ಆರ್ ಸಿಎನ್‌ಜಿ ಆವೃತ್ತಿಯಲ್ಲಿ ಆರಂಭಿಕ ಆವೃತ್ತಿಗಾಗಿ ಎಲ್ಎಕ್ಸ್ಐ(ರೂ. 5.25 ಲಕ್ಷ) ಮತ್ತು ಹೈ ಎಂಡ್ ಆವೃತ್ತಿಯಾಗಿ ಎಲ್ಎಕ್ಸ್ಐ ಆಪ್ಷನ್(ರೂ. 5.32 ಲಕ್ಷ) ಮಾರಾಟಗೊಳ್ಳಲಿದೆ.

ಬಿಎಸ್-6 ಎಂಜಿನ್ ಪ್ರೇರಿತ ವ್ಯಾಗನ್‌ಆರ್ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಸಿಎನ್‌ಜಿ ಕಿಟ್ ಹೊಂದಿರುವ ಹೊಸ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಅತ್ಯುತ್ತಮ ಮೈಲೇಜ್ ಹೊಂದಿದೆ. ಪ್ರತಿ ಕೆಜಿ ಸಿಎನ್‌ಜಿಗೆ ಗರಿಷ್ಠ 32.52 ಕಿ.ಮೀ ಮೈಲೇಜ್ ನೀಡಲಿದ್ದು, ಅತ್ಯುತ್ತಮ ಹ್ಯಾಚ್‌ಬಾಕ್ಸ್ ಮಾದರಿಗಳಲ್ಲಿ ವ್ಯಾಗನ್‌ಆರ್ ಅಗ್ರಸ್ಥಾನದಲ್ಲಿದೆ.

ಬಿಎಸ್-6 ಎಂಜಿನ್ ಪ್ರೇರಿತ ವ್ಯಾಗನ್‌ಆರ್ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಇನ್ನು ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮಕ್ಕೆ ಅನುಗುಣವಾಗಿ ಮಾರುತಿ ಸುಜುಕಿಯು ತನ್ನ ಜನಪ್ರಿಯ ಕಾರುಗಳನ್ನು ಉನ್ನತೀಕರಿಸಿ ಮಾರಾಟ ಮಾಡುತ್ತಿದ್ದು, ಹೊಸ ನಿಯಮ ಜಾರಿಗೂ ಮುನ್ನವೇ 11 ತಿಂಗಳ ಅವಧಿಯಲ್ಲಿ ಬಿಎಸ್-6 ಎಂಜಿನ್ ಪ್ರೇರಿತ 5 ಲಕ್ಷಕ್ಕೂ ಹೆಚ್ಚು ಪೆಟ್ರೋಲ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಹೊಸ ದಾಖಲೆಗೆ ಕಾರಣವಾಗಿದೆ.

ಬಿಎಸ್-6 ನಿಯಮ ಜಾರಿಗೂ ಮುನ್ನವೇ ಹೊಸ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಹುತೇಕ ಕಾರು ಮಾದರಿಗಳ ಪೆಟ್ರೋಲ್ ಎಂಜಿನ್ ಆವೃತ್ತಿಗಳನ್ನು ಹೊಸ ನಿಯಮ ಅನುಸಾರ ಉನ್ನತೀಕರಿಸಿದೆ.

ಬಿಎಸ್-6 ಎಂಜಿನ್ ಪ್ರೇರಿತ ವ್ಯಾಗನ್‌ಆರ್ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಸದ್ಯ ಮಾರುಕಟ್ಟೆಯಲ್ಲಿ ಬಲೆನೊ, ಆಲ್ಟೋ 800, ಸೆಲೆರಿಯೊ, ಇಕೋ, ವ್ಯಾಗನ್‌ಆರ್, ಸ್ವಿಫ್ಟ್, ಡಿಜೈರ್, ಎರ್ಟಿಗಾ, ಎಕ್ಸ್ಎಲ್ 6 ಮತ್ತು ಎಸ್-ಪ್ರೆಸ್ಸೊ ಕಾರುಗಳ ಪೆಟ್ರೋಲ್ ಮಾದರಿಗಳನ್ನು ಬಿಎಸ್-6 ನಿಯಮದಂತೆ ಉನ್ನತೀಕರಿಸಲಾಗಿದ್ದು, ಬಿಎಸ್-4 ಕಾರುಗಳಿಂತೂ ತುಸು ಭಿನ್ನವಾಗಿರುವ ಹೊಸ ಕಾರುಗಳು ಮಾಲಿನ್ಯ ಹೊರಸೂಸುವಿಕೆ ಮತ್ತು ಮೈಲೇಜ್ ಪ್ರಮಾಣದಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

ಬಿಎಸ್-6 ಎಂಜಿನ್ ಪ್ರೇರಿತ ವ್ಯಾಗನ್‌ಆರ್ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಇದರಲ್ಲಿ ಡೀಸೆಲ್ ಕಾರುಗಳ ಉನ್ನತೀಕರಣವು ತುಸು ಸವಾಲಾಗಿದ್ದು, ಬಿಎಸ್-6 ಡೀಸೆಲ್ ಎಂಜಿನ್‌ಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಿಎಸ್-4 ಡೀಸೆಲ್ ಎಂಜಿನ್‌ಗಿಂತಲೂ ಸಾಕಷ್ಟು ಸುಧಾರಣೆಯೊಂದಿಗೆ ಮಾಲಿನ್ಯ ಹೊರಸೂಸುವಿಕೆಯಲ್ಲಿ ಮಹತ್ವದ ಬದಲಾವಣೆ ಪಡೆದುಕೊಳ್ಳುತ್ತಿವೆ.

ಬಿಎಸ್-6 ಎಂಜಿನ್ ಪ್ರೇರಿತ ವ್ಯಾಗನ್‌ಆರ್ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಮಾರುತಿ ಸುಜುಕಿ ಸೇರಿದಂತೆ ಹಲವು ಕಾರು ಉತ್ಪಾದನಾ ಸಂಸ್ಥೆಗಳು ಸದ್ಯಕ್ಕೆ ಪೆಟ್ರೋಲ್ ಎಂಜಿನ್ ಕಾರುಗಳನ್ನು ಮಾತ್ರವೇ ಬಿಎಸ್-6 ನಿಯಮಕ್ಕೆ ಉನ್ನತೀಕರಿಸಿ ಮಾರಾಟ ಮಾಡುತ್ತಿವೆ. ಮುಂಬರುವ ಏಪ್ರಿಲ್ ನಂತರವಷ್ಟೇ ಡೀಸೆಲ್ ಕಾರುಗಳನ್ನು ಹೊಸ ನಿಯಮದಂತೆ ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳು ತುಸು ದುಬಾರಿ ಬೆಲೆ ಪಡೆದುಕೊಳ್ಳಲಿವೆ.

ಬಿಎಸ್-6 ಎಂಜಿನ್ ಪ್ರೇರಿತ ವ್ಯಾಗನ್‌ಆರ್ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಬಿಎಸ್-6 ಪೆಟ್ರೋಲ್ ಕಾರುಗಳು ಬಿಎಸ್-4 ಕಾರುಗಳಿಂತಲೂ ರೂ.15 ಸಾವಿರದಿಂದ ರೂ.20 ಸಾವಿರದಷ್ಟು ದುಬಾರಿಯಾಗಿದ್ದರೆ ಡೀಸೆಲ್ ಎಂಜಿನ್ ಮಾತ್ರ ಪ್ರಸ್ತುತ ಮಾರುಕಟ್ಟೆಯಲ್ಲಿನ ಬಿಎಸ್-4 ಕಾರುಗಳಿಂತಲೂ ರೂ.90 ಸಾವಿರದಿಂದ ರೂ.1.50 ಲಕ್ಷದಷ್ಟು ದುಬಾರಿಯಾಗಲಿವೆ.

ಬಿಎಸ್-6 ಎಂಜಿನ್ ಪ್ರೇರಿತ ವ್ಯಾಗನ್‌ಆರ್ ಸಿಎನ್‌ಜಿ ಬಿಡುಗಡೆ ಮಾಡಿದ ಮಾರುತಿ ಸುಜುಕಿ

ಇದೇ ಕಾರಣಕ್ಕೆ ಮಾರುತಿ ಸುಜುಕಿ ಸಂಸ್ಥೆಯು ಅಗ್ಗದ ಬೆಲೆಯ ಕಾರುಗಳಲ್ಲಿ ಡೀಸೆಲ್ ಎಂಜಿನ್‌ಗಳನ್ನು ಉನ್ನತೀಕರಿಸುವ ಯೋಜನೆಯನ್ನು ಕೈಬಿಟ್ಟಿದ್ದು, ಕೇವಲ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದೆ.

Article Published On: Friday, February 14, 2020, 17:53 [IST]
English summary
Maruti Suzuki WagonR S-CNG Launched, Price details. Read in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+