ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಎಕ್ಸ್‌ಎಲ್6

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯು ತನ್ನ ಬಿಎಸ್-6 ಎಕ್ಸ್‌ಎಲ್6 ಎಂಪಿವಿಯ ಒಂದನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಮಾರುತಿ ಸುಜುಕಿ ಎಕ್ಸ್‌ಎಲ್6 ಎಂಪಿವಿಯು ಕಳೆದ ಒಂದು ವರ್ಷದ ಮಾರಾಟದಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಎಕ್ಸ್‌ಎಲ್6

ಕಳೆದ ಒಂದು ವರ್ಷದಲ್ಲಿ ಮಾರುತಿ ಸುಜುಕಿ ಎಕ್ಸ್‌ಎಲ್6 ಎಂಪಿವಿಯ 25 ಸಾವಿರಕ್ಕೂ ಹೆಚ್ಚು ಯುನಿ‍ಟ್‍ಗಳು ಮಾರಾಟವಾಗಿವೆ. ಇದು ಎರ್ಟಿಗಾ ಮಾದರಿಗಿಂತ ಕಡಿಮೆ ಆದರೂ, ಭಾರತದಲ್ಲಿ ಹೆಚ್ಚು ಮಾರಾಟವಾಗುವ ಎಂಪಿವಿಗಳ ಪಟ್ಟಿಯಲ್ಲಿ ಮಾರುತಿ ಎಕ್ಸ್‌ಎಲ್6 ಸ್ಥಾನವನ್ನು ಪಡೆದುಕೊಂಡಿದೆ. ಈ ಮಾರುತಿ ಸುಜುಕಿ ಎಕ್ಸ್‌ಎಲ್6 ಕಳೆದ ವರ್ಷದ ಅಗಸ್ಟ್ ತಿಂಗಳಲ್ಲಿ ಬಿಡುಗಡೆಗೊಳಿಸಿತು. ಈ ಮಾರುತಿ ಸುಜುಕಿ ಎಕ್ಸ್‌ಎಲ್6 ಎಂಪಿವಿಯು ಎರ್ಟಿಗಾ ಮಾದರಿಯನ್ನು ಆಧರಿಸಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಎಕ್ಸ್‌ಎಲ್6

ಎಕ್ಸ್‌ಎಲ್6 ಎಂಪಿವಿಯನ್ನು ನೆಕ್ಸಾ ಡೀಲರ್ ಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಮಾರುತಿ ಸುಜುಕಿ ಎಕ್ಸ್‌ಎಲ್6 ಮಾದರಿಯು ಪ್ರೀಮಿಯಂ ಎಂಪಿವಿ ವಿಭಾಗದಲ್ಲಿ ಶೇ.14 ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಎಕ್ಸ್‌ಎಲ್6

ಮಾರುತಿ ಸುಜುಕಿ ಕಂಪನಿಯು ಎರ್ಟಿಗಾ ಮಾದರಿಗಿಂತ ಹೆಚ್ಚು ಪ್ರೀಮಿಯಂ ಎಂಪಿವಿಯನ್ನು ಬಯಸುವವರಿಗೆ ಮಾರುತಿ ಸುಜುಕಿ ಎಕ್ಸ್‌ಎಲ್6 ಎಂಪಿವಿಯನ್ನು ಪರಿಚಯಿಸಿದ್ದರು. ಮಾರುತಿ ಸುಜುಕಿ ಎಕ್ಸ್‌ಎಲ್6 ಎಂಪಿವಿಯಲ್ಲಿ ಹಲವು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಎಕ್ಸ್‌ಎಲ್6

ಮಾರುತಿ ಸುಜುಕಿ ಎಕ್ಸ್‌ಎಲ್6 ಎಂಪಿವಿಯು ಎಲ್‌ಇಡಿ ಹೆಡ್‌ಲ್ಯಾಂಪ್‌ಗಳಂತಹ ಪ್ರೀಮಿಯಂ ಫೀಚರ್ ಗಳೊಂದಿಗೆ 6 ಸೀಟುಗಳನ್ನು ಕ್ಯಾಬಿನ್ ಹೊಂದಿದೆ. ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟುಗಳ ಸೆಟಪ್ ಅನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಎಕ್ಸ್‌ಎಲ್6

ಎಕ್ಸ್‌ಎಲ್6 ಎಂಪಿವಿಯ ಕ್ಯಾಬಿನ್‌ನಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಒಳಗೊಂಡಿರುವ ಸ್ಮಾರ್ಟ್‌ಪ್ಲೇ ಸ್ಟುಡಿಯೋ 2.0, ಕ್ರೂಸ್ ಕಂಟ್ರೋಲ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್ ಮತ್ತು ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೊಂದಿದೆ. ಇದರೊಂದಿಗೆ ಬ್ಲೂಟೂತ್, ಆಡಿಯೋ, ಕ್ರೂಸ್ ಕಂಟ್ರೋಲ್ ಮತ್ತು ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಮೌಂಟೆಡ್ ಕಂಟ್ರೋಲ್ ಅನ್ನು ಸಹ ಹೊಂದಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಎಕ್ಸ್‌ಎಲ್6

ಮಾರುತಿ ಸುಜುಕಿ ಎಕ್ಸ್‌ಎಲ್6 ಎಂಪಿವಿಯಲ್ಲಿ 1.5-ಲೀಟರ್ ಕೆ15 ಪೆಟ್ರೋಲ್ ಎಂಜಿನ್‌ನೊಂದಿಗೆ ಎಸ್‌ಹೆಚ್‌ವಿಎಸ್ (ಸ್ಮಾರ್ಟ್ ಹೈಬ್ರಿಡ್ ವೆಹಿಕಲ್ ಬೈ ಸುಜುಕಿ) ಮೈಲ್ಡ್-ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಲಿ-ಐಯಾನ್ ಬ್ಯಾಟರಿಯನ್ನು ಹೊಂದಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಎಕ್ಸ್‌ಎಲ್6

ಈ ಎಂಜಿನ್ 6000 ಆರ್‌ಪಿಎಂನಲ್ಲಿ 103 ಬಿಹೆಚ್‌ಪಿ ಪವರ್ ಮತ್ತು 4400 ಆರ್‌ಪಿಎಂನಲ್ಲಿ 138 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 4-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ ಎಕ್ಸ್‌ಎಲ್6

ಮಾರುತಿ ಸುಜುಕಿ ಎಕ್ಸ್‌ಎಲ್6 ಎಂಪಿವಿಯಲ್ಲಿ ಸುರಕ್ಷತೆಗಾಗಿ ಸ್ಪೀಡ್ ವಾರ್ನಿಂಗ್ ಸಿಸ್ಟಂ, ಕೀ ಲೆಸ್ ಎಂಟ್ರಿ, ಆಟೋಮ್ಯಾಟಿಕ್ ವೈಪರ್‌ಗಳು, ಸೀಟ್ ಬೆಲ್ಟ್ ರಿಮೈಂಡರ್, ರೇರ್ ಪಾರ್ಕಿಂಗ್ ಸೆನ್ಸಾರ್, ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಮತ್ತು ಎಬಿಎಸ್ ಮತ್ತು ಇಬಿಡಿ ಫೀಚರ್ ಗಳನ್ನು ಹೊಂದಿವೆ.

Most Read Articles

Kannada
English summary
25000 Units Of The Maruti Suzuki XL6 Sold In One Year. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X