Just In
Don't Miss!
- News
ಕೇಂದ್ರ ಸರ್ಕಾರ ಎನ್ಐಎ ನೋಟಿಸ್ ಮೂಲಕ ಕಿರುಕುಳ ನೀಡುತ್ತಿದೆ:ರೈತರ ಆರೋಪ
- Movies
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಮಾರುತಿ ಸುಜುಕಿ ಸ್ವಿಫ್ಟ್
ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿರುವ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಯಶಸ್ವಿಯಾಗಿ 15 ವರ್ಷ ಪೂರೈಸಿದ ಸಂಭ್ರಮದಲ್ಲಿದ್ದು, ಬಿಡುಗಡೆಯಾದ ಸಂದರ್ಭದಲ್ಲಿನ ಬೇಡಿಕೆಯನ್ನು ಈಗಲೂ ಹಾಗಯೇ ಉಳಿಸಿಕೊಂಡಿರುವ ಕೆಲವೇ ಕೆಲವು ಕಾರುಗಳಲ್ಲಿ ಸ್ವಿಫ್ಟ್ ಕೂಡಾ ಒಂದಾಗಿದೆ.

ಕಳೆದ ವರ್ಷ ಸ್ವಿಫ್ಟ್ ಕಾರಿನಲ್ಲಿ ಡೀಸೆಲ್ ಮಾದರಿಯನ್ನು ತೆಗೆದುಹಾಕಿದ ನಂತರ ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ಸ್ವಿಫ್ಟ್ ಕಾರಿನಲ್ಲಿ ಗ್ರಾಹಕರ ಬೇಡಿಕೆ ಅನುಸಾರವಾಗಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಜೋಡಣೆ ಮಾಡುವ ಯೋಜನೆಯಲ್ಲಿದೆ.

ಸ್ವಿಫ್ಟ್ ಕಾರಿನಲ್ಲಿ ಡೀಸೆಲ್ ಎಂಜಿನ್ ಅನ್ನು ಸಾಧ್ಯತೆಗಳಿಲ್ಲದಿರುವುದರಿಂದ ಡೀಸೆಲ್ ಮಾದರಿಯನ್ನು ಖರೀದಿಗೆ ಬಯಸುವ ಗ್ರಾಹಕರಿಗೆ ಹೊಸ ಆವೃತ್ತಿಯು ಉತ್ತಮ ಆಯ್ಕೆಯಾಗಲಿದ್ದು, ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಮೈಲೇಜ್ ವಿಚಾರದಲ್ಲೂ ಗಮನಸೆಳೆಯಲಿದೆ.

ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಈಗಾಗಲೇ ನ್ಯೂ ಜನರೇಷನ್ ಬಲೆನೊ ಮತ್ತು ಡಿಜೈರ್ ಕಾರುಗಳಲ್ಲೂ ಅಳವಡಿಸಲಾಗಿದ್ದು, ಹೊಸ ಎಂಜಿನ್ ಮಾದರಿಯು 89-ಬಿಎಚ್‌ಪಿ ಮತ್ತು 113-ಬಿಎಚ್‌ಪಿ ಉತ್ಪಾದನೆ ಮಾಡಲಿದೆ.

ಸದ್ಯ ಸ್ವಿಫ್ಟ್ ಕಾರಿನಲ್ಲಿ ಬಳಕೆ ಮಾಡಲಾಗುತ್ತಿರುವ 1.2-ಲೀಟರ್ ವಿವಿಟಿ ಪೆಟ್ರೋಲ್ ಎಂಜಿನ್ ಮಾದರಿಯು 82-ಬಿಎಚ್‌ಪಿ ಮತ್ತು 113-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದು, ಹೊಸದಾಗಿ ಜೋಡಣೆ ಮಾಡಲು ನಿರ್ಧರಿಸಿರುವ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಮಾದರಿಯು ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಹೊಂದಿದೆ.

ಹೊಸ ಎಂಜಿನ್ ಜೋಡಣೆ ನಂತರ ಸ್ವಿಫ್ಟ್ ಕಾರಿನ ಬೆಲೆಯಲ್ಲಿ ತುಸು ಹೆಚ್ಚಳವಾಗಲಿದ್ದು, ಸದ್ಯ ಮಾರುಕಟ್ಟೆಯಲ್ಲಿ ಸ್ವಿಫ್ಟ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.19 ಲಕ್ಷದಿಂದ ರೂ. 8.02 ಲಕ್ಷ ಬೆಲೆ ಹೊಂದಿದೆ.
MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.2-ಲೀಟರ್ ಡ್ಯುಯಲ್‌ಜೆಟ್ ಪೆಟ್ರೋಲ್ ಎಂಜಿನ್ ಜೋಡಣೆ ನಂತರ ಕಾರಿನಲ್ಲಿ ಬೆಲೆ ರೂ.25 ಸಾವಿರದಿಂದ ರೂ.40 ಸಾವಿರದಷ್ಟು ಹೆಚ್ಚಳವಾಗಬಹುದಾಗಿದ್ದು, ಹೊಸ ಎಂಜಿನ್ ಮಾದರಿಯು ಮೈಲೇಜ್ ವಿಚಾರದಲ್ಲಿ ಗ್ರಾಹಕರ ಗಮನಸೆಳೆಯಲಿದೆ.

ಇನ್ನು ಬಿಎಸ್-6 ಹೊಸ ಎಮಿಷನ್ ಪ್ರಕಾರ ಡೀಸೆಲ್ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತಂದಿರುವ ಮಾರುತಿ ಸುಜುಕಿ ಕಂಪನಿಯು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟಕ್ಕೆ ಗುಡ್‌ಬೈ ಹೇಳಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಮಾಲಿನ್ಯ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು ಹಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿರುವುದೇ ಡೀಸೆಲ್ ಎಂಜಿನ್ ಮಾರಾಟದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಮಾರುತಿ ಸುಜುಕಿ ಸೇರಿದಂತೆ ಬಹುತೇಕ ಕಾರು ಉತ್ಪಾದನಾ ಸಂಸ್ಥೆಗಳು ಕಡಿಮೆ ಸಾಮರ್ಥ್ಯದ ಡೀಸೆಲ್ ಕಾರುಗಳ ಮಾರಾಟವನ್ನು ಸ್ಥಗಿತಗೊಳಿಸಿವೆ.

ಮಾರುತಿ ಸುಜುಕಿ ಸಹ ಹಲವು ಕಾರು ಮಾದರಿಗಳಲ್ಲಿ ಡೀಸೆಲ್ ಎಂಜಿನ್ ಆಯ್ಕೆಯನ್ನು ಸ್ಥಗಿತಗೊಳಿಸಿದ್ದು, 800 ಸಿಸಿ, 1.0-ಲೀಟರ್, 1.2-ಲೀಟರ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್‌ಗಳನ್ನು ಮಾತ್ರವೇ ಮಾರಾಟ ಮಾಡುತ್ತಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಸದ್ಯ ಮಾರುತಿ ಸುಜುಕಿ ಕಾರುಗಳಲ್ಲಿ ಡೀಸೆಲ್ ಎಂಜಿನ್ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಹೈ ಎಂಡ್ ಮಾದರಿಗಳಾದ ಎರ್ಟಿಗಾ, ಎರ್ಟಿಗಾ ಎಕ್ಸ್6, ವಿಟಾರಾ ಬ್ರೆಝಾ, ಎಸ್-ಕ್ರಾಸ್ ಮತ್ತು ಸಿಯಾಜ್ ಕಾರುಗಳಿಗೆ ಮಾತ್ರವೇ ಮುಂಬರುವ ದಿನಗಳಲ್ಲಿ ಹೊಸದಾಗಿ ಅಭಿವೃದ್ದಿಗೊಳಿಸಲಾಗಿ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಬಹುದಾದ ಸಾಧ್ಯತೆಗಳಿವೆ.