Just In
Don't Miss!
- News
ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾ ಖಾನ್ ವಿಧಿವಶ
- Movies
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೆಲ್ಟೊಸ್, ಕ್ರೆಟಾಗೆ ಪೈಪೋಟಿಯಾಗಿ ಬಿಡುಗಡೆಯಾಗಲಿದೆ ಮಾರುತಿ ಸುಜುಕಿ ಮತ್ತು ಟೊಯೊಟಾ ನಿರ್ಮಾಣದ ಹೊಸ ಕಾರು
ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳು ಯಶಸ್ವಿಯಾಗಿ ಮಾರಾಟಗೊಳ್ಳುತ್ತಿದ್ದು, ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಇದೀಗ ಸಹಭಾಗಿತ್ವದ ಯೋಜನೆ ಅಡಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯೊಂದನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿವೆ.

ಮಾರುತಿ ಸುಜುಕಿ ಬಲೆನೊ ಕಾರನ್ನು ಈಗಾಗಲೇ ಗ್ಲಾಂಝಾ ಎನ್ನುವ ಹೆಸರಿನೊಂದಿಗೆ ರೀಬ್ಯಾಡ್ಜ್ ಆವೃತ್ತಿಯನ್ನು ಮಾರಾಟ ಮಾಡುತ್ತಿರುವ ಟೊಯೊಟಾ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ರೀಬ್ಯಾಡ್ಜ್ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಸಹಭಾಗಿತ್ವದ ಯೋಜನೆ ಅಡಿ ಉಭಯ ಕಂಪನಿಗಳು ಕ್ರೆಟಾ ಮತ್ತು ಸೆಲ್ಟೊಸ್ ಕಾರಿಗೆ ಪೈಪೋಟಿಯಾಗಿ ಹೊಸ ಕಾರು ಮಾದರಿಯೊಂದಿಗೆ ಸಿದ್ದಪಡಿಸುತ್ತಿರುವುದು ಬಹುತೇಕ ಖಚಿತವಾಗಿದೆ.

ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ವಿಟಾರಾ ಬ್ರೆಝಾ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿರಲಿದ್ದು, ರೂ.9 ಲಕ್ಷದಿಂದ ರೂ.15 ಲಕ್ಷ ಬೆಲೆ ಅಂತರದಲ್ಲಿ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾರುಕಟ್ಟೆ ಪ್ರವೇಶಿಸಲಿದೆ.

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಸೆಲ್ಟೊಸ್, ಕ್ರೆಟಾ ಮತ್ತು ಎಂಜಿ ಹೆಕ್ಟರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ನಿರ್ಮಾಣದ ಹೊಸ ಕಾರು ಟೊಯೊಟಾ ಬ್ಯಾಡ್ಜ್ ಪಡೆದುಕೊಳ್ಳಲಿದೆ.

ಇನ್ನು ಸಹಭಾಗಿತ್ವದ ಯೋಜನೆ ಅಡಿ ಮಾರುತಿ ಸುಜುಕಿ ಮತ್ತು ಯೊಟೊಟಾ ಕಂಪನಿಗಳು ಈಗಾಗಲೇ ಹೊಸ ಕಾರುಗಳ ಉತ್ಪಾದನಾ ಯೋಜನೆಯನ್ನು ಈಗಾಗಲೇ ಚಾಲನೆ ನೀಡಿರುವುದಲ್ಲದೇ ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆಗೆ ಸಿದ್ದಗೊಳ್ಳುತ್ತಿದ್ದು, ಹೊಸ ವಾಹನಗಳ ಉತ್ಪಾದನಾ ವೆಚ್ಚ ತಗ್ಗಿಸಲು ಟೊಯೊಟಾ ಕಂಪನಿಯು ಹೊಸ ಪ್ಲ್ಯಾನ್‌ಗೆ ಮುಂದಾಗಿದೆ. ಪ್ರೀಮಿಯಂ ಕಾರುಗಳ ಉತ್ಪಾದನಾ ವೆಚ್ಚವನ್ನು ತಗ್ಗಿಸಿ ಬೆಲೆ ಹೆಚ್ಚಳವನ್ನು ತಗ್ಗಿಸುವುದರೊಂದಿಗೆ ಬೇಡಿಕೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಮುಂದಾಗಿದ್ದು, ಬಿಡಿಭಾಗಗಳ ಬಳಕೆಯಲ್ಲಿ ಕೆಲವು ಬದಲಾವಣೆಗಳನ್ನು ತರಲು ನಿರ್ಧರಿಸಿದೆ.

ಮಾಹಿತಿಗಳ ಪ್ರಕಾರ, ಮಾರುತಿ ಸುಜುಕಿ ಕಂಪನಿಗೆ ಪೂರೈಕೆ ಮಾಡುವ ಬಿಡಿಭಾಗಗಳ ಉತ್ಪಾದನಾ ಕಂಪನಿಗಳಿಂದಲೇ ಟೊಯೊಟಾ ಕೂಡಾ ಬಿಡಿಭಾಗಗಳನ್ನು ಪಡೆದುಕೊಳ್ಳಲು ಮುಂದಾಗಿದ್ದು, ಮುಂಬರುವ ಹೊಸ ಬಜೆಟ್ ಬೆಲೆಯ ಕಾರುಗಳಲ್ಲಿ ಹೊಸ ಮಾದರಿಯ ಬಿಡಿಭಾಗಳನ್ನು ಬಳಸಿಕೊಳ್ಳಲು ಮುಂದಾಗಿದೆ.

ಹೊಸ ಯೋಜನೆಯಿಂದ ಕಾರುಗಳ ಉತ್ಪಾದನಾ ವೆಚ್ಚವನ್ನು ಗಣನೀಯವಾಗಿ ತಗ್ಗಿಸಬಹುದಾದ ಬಗ್ಗೆ ಚಿಂತನೆ ನಡೆಸಿರುವ ಟೊಯೊಟಾ ಸಂಸ್ಥೆಯು ಗುಣಮಟ್ಟವನ್ನು ಸಹ ಕಾಯ್ದುಕೊಳ್ಳುವಲ್ಲಿ ಎಚ್ಚರ ವಹಿಸುತ್ತಿದ್ದು, ಸಾಧ್ಯವಷ್ಟು ಮಟ್ಟಿಗೆ ವೆಚ್ಚ ಕಡಿತಗೊಳಿಸುವಂತಹ ಬಿಡಿಭಾಗಗಳನ್ನು ಮಾರುತಿ ಸುಜುಕಿ ಬಿಡಿಭಾಗಗಳ ಪೂರೈಕೆದಾರರಿಂದ ಪಡೆದುಕೊಳ್ಳುವ ಯೋಜನೆಯಲ್ಲಿದೆ.

ಹೊಸ ಯೋಜನೆಯಿಂದ ಕಾರು ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಸಾಕಷ್ಟು ಅನುಕೂರವಾಗಿದ್ದು, ಹೊಸ ಯೋಜನೆ ಕುರಿತು ಮುಂಬರುವ ದಿನಗಳಲ್ಲಿ ಮತ್ತಷ್ಟು ಮಾಹಿತಿಗಳು ಲಭ್ಯವಾಗಲಿದೆ.

ಒಂದು ವೇಳೆ ಹೊಸ ರೀಬ್ಯಾಡ್ಜ್ ಕಾರುಗಳಲ್ಲಿ ಟೊಯೊಟಾ ಪೂರೈಕೆದಾರರು ಪೂರೈಸುವ ಬಿಡಿಭಾಗಗಳನ್ನು ಉಪಯೋಗಿಸಿದ್ದಲ್ಲಿ ಮೂಲ ಕಾರುಗಳ ಬೆಲೆಗಳಿಂತಲೂ ದುಬಾರಿಯಾಗಲಿದ್ದು, ಈ ಹಿನ್ನಲೆಯಲ್ಲಿ ಮೂಲ ಕಾರುಗಳ ಬೆಲೆಯಲ್ಲೇ ರೀಬ್ಯಾಡ್ಜ್ ಕಾರುಗಳನ್ನು ಪರಿಚಯಿಸಲು ಯೋಜಿಸಲಾಗಿದೆ.

ಇದಕ್ಕಾಗಿಯೇ ಬಲೆನೊ ಕಾರನ್ನು ಗ್ಲಾಂಝಾ ಹೆಸರಿನೊಂದಿಗೆ ಬಿಡುಗಡೆಯ ನಂತರ ಯಾವುದೇ ಹೊಸ ರೀಬ್ಯಾಜ್ಡ್ ಕಾರನ್ನು ಬಿಡುಗಡೆ ಮಾಡದ ಟೊಯೊಟಾ ಸಂಸ್ಥೆಯು ಕಾರುಗಳ ಬಿಡಿಭಾಗಗಳ ವೆಚ್ಚದ ಕುರಿತು ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಿದೆ.

ಜೊತೆಗೆ ರೀಬ್ಯಾಡ್ಜ್ ಕಾರುಗಳಲ್ಲಿ ವಿಶೇಷವಾಗಿ ಹೈಬ್ರಿಡ್ ತಂತ್ರಜ್ಞಾನವನ್ನು ಬಳಕೆ ಮಾಡುತ್ತಿರುವುದು ಕೂಡಾ ಉತ್ಪಾದನಾ ವೆಚ್ಚವು ಹೆಚ್ಚಳವಾಗುವುದಕ್ಕೆ ಪ್ರಮುಖ ಕಾರಣವಾಗಿದ್ದು, ಇದರಿಂದ ಕೈಗೆಟುಕುವ ಬೆಲೆ ಮತ್ತು ಉತ್ತಮ ಮೈಲೇಜ್‌ನೊಂದಿಗೆ ಗ್ರಾಹಕರನ್ನು ಸೆಳೆಯುವುದಕ್ಕಾಗಿ ಬಿಡಿಭಾಗಗಳ ಬಳಕೆಯಲ್ಲಿ ಬದಲಾವಣೆ ತರುತ್ತಿದೆ.