ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ಮಾರುತಿ ಸುಜುಕಿ ಸಂಸ್ಥೆಯು ತನ್ನ ಬಹುನೀರಿಕ್ಷಿತ ವಿಟಾರಾ ಬ್ರೆಝಾ ಪೆಟ್ರೋಲ್ ಮಾದರಿಯನ್ನು ಬಿಡುಗಡೆಗೊಳಿಸಿದೆ. ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ಹೊಸ ಕಾರು ಇದೀಗ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಿದ್ದು, ಹೊಸ ಕಾರಿನ ಬೆಲೆಗಳು ಆಕರ್ಷಕವಾಗಿವೆ.

ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ಹೊಸ ವಿಟಾರಾ ಬ್ರೆಝಾ ಕಾರು ಇದೀಗ ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರುತ್ತಿರುವ ಬಿಎಸ್-6 ನಿಯಮದಿಂದಾಗಿ ಈ ಹಿಂದಿನ 1.3-ಲೀಟರ್ ಡೀಸೆಲ್ ಕಾರು ಮಾದರಿಯ ಮಾರಾಟವು ಶೀಘ್ರದಲ್ಲೇ ಸ್ಥಗಿತಗೊಳ್ಳುತ್ತಿದೆ. ಹೀಗಾಗಿ ಹೊಸ ಕಾರಿನಲ್ಲಿ ಮೊದಲ ಹಂತವಾಗಿ ಪೆಟ್ರೋಲ್ ಮಾದರಿಯನ್ನು ಮಾತ್ರವೇ ಪರಿಚಯಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಡೀಸೆಲ್ ಮಾದರಿಯನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.

ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ಸದ್ಯ ಬಿಡುಗಡೆಯಾಗಿರುವ ಹೊಸ ವಿಟಾರಾ ಬ್ರೆಝಾ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.34 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.40 ಲಕ್ಷ ಬೆಲೆ ಪಡೆದುಕೊಂಡಿದೆ.

ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ಹೊಸ ಪೆಟ್ರೋಲ್ ಕಾರಿನ ಬೆಲೆಯು ಈ ಹಿಂದಿನ ಡೀಸೆಲ್ ಮಾದರಿಯ ಬೆಲೆಗಳಿಗೆ ಸಮನಾಗಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ ಎಟಿ, ಜೆಡ್ಎಕ್ಸ್ಐ, ಜೆಡ್ಎಕ್ಸ್ಐ ಎಟಿ, ಜೆಡ್ಎಕ್ಸ್ಐ ಪ್ಲಸ್, ಜೆಡ್ಎಕ್ಸ್ಐ ಪ್ಲಸ್ ಎಟಿ, ಜೆಡ್ಎಕ್ಸ್ಐ ಪ್ಲಸ್ ಎಟಿ ಡ್ಯುಯಲ್ ಕಲರ್ ವೆರಿಯೆಂಟ್ ಆಯ್ಕೆ ಮಾಡಬಹುದಾಗಿದೆ.

ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ವೆರಿಯೆಂಟ್ ಮತ್ತು ಬೆಲೆಗಳು(ಎಕ್ಸ್‌ಶೋರೂಂ ಪ್ರಕಾರ)

ಎಲ್ಎಕ್ಸ್ಐ ರೂ. 7.34 ಲಕ್ಷ
ವಿಎಕ್ಸ್ಐ ರೂ. 8.35 ಲಕ್ಷ
ವಿಎಕ್ಸ್ಐ (ಆಟೋಮ್ಯಾಟಿಕ್) ರೂ. 9.75 ಲಕ್ಷ
ಜೆಡ್ಎಕ್ಸ್ಐ ರೂ. 9.10 ಲಕ್ಷ
ಜೆಡ್ಎಕ್ಸ್ಐ (ಆಟೋಮ್ಯಾಟಿಕ್) ರೂ. 10.50 ಲಕ್ಷ
ಜೆಡ್ಎಕ್ಸ್ಐ ಪ್ಲಸ್ ರೂ. 9.75 ಲಕ್ಷ
ಜೆಡ್ಎಕ್ಸ್ಐ ಪ್ಲಸ್ (ಆಟೋಮ್ಯಾಟಿಕ್) ರೂ. 11.15 ಲಕ್ಷ
ಜೆಡ್ಎಕ್ಸ್ಐ ಪ್ಲಸ್ ಡ್ಯುಯಲ್ ಕಲರ್ (ಆಟೋಮ್ಯಾಟಿಕ್) ರೂ. 11.40 ಲಕ್ಷ
ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

2017ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ವಿಟಾರಾ ಬ್ರೆಝಾ ಕಾರು ಆವೃತ್ತಿಯಲ್ಲಿ ಇದುವರೆಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ಮಾರಾಟ ಮಾಡುತ್ತಿದ್ದ ಮಾರುತಿ ಸುಜುಕಿ ಇದೀಗ ಮೊದಲ ಬಾರಿಗೆ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪರಿಚಯಿಸಿದೆ.

ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ಫಿಯೆಟ್‌ನಿಂದ ಎರವಲು ಪಡೆಯಲಾಗುತ್ತಿದ್ದ 1.3-ಲೀಟರ್ ಬೂಸ್ಟರ್ ಜೆಟ್ ಡೀಸೆಲ್ ಎಂಜಿನ್‌‌ಗೆ ಗುಡ್‌ಬೈ ಹೇಳಲಾಗಿದ್ದು, ಇದೀಗ ತನ್ನದೇ ನಿರ್ಮಾಣದ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್‌ನೊಂದಿಗೆ ಹೊಸ ವಿಟಾರಾ ಬ್ರೆಝಾ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ಹೊಸ ವಿಟಾರಾ ಬ್ರೆಝಾದಲ್ಲಿ ಬಳಕೆ ಮಾಡಿರುವ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್‌ ಮಾದರಿಯನ್ನು ಈಗಾಗಲೇ ಎರ್ಟಿಗಾ ಎಕ್ಸ್ಎಲ್6 ಮತ್ತು ಸಿಯಾಜ್ ಕಾರುಗಳಲ್ಲಿ ಬಳಕೆ ಮಾಡಲಾಗುತ್ತಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆವೃತ್ತಿಗಳಲ್ಲಿ ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದೆ.

ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ಈ ಮೂಲಕ ಹೊಸ ಪೆಟ್ರೋಲ್ ಎಂಜಿನ್ ಮಾದರಿಯು 105-ಬಿಎಚ್‌ಪಿ ಮತ್ತು 138-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 4-ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದುಕೊಂಡಿದೆ.

ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ಜೊತೆಗೆ ಹೊಸ ಪೆಟ್ರೋಲ್ ಕಾರಿನಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಆವೃತ್ತಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಮುಂಭಾಗ ಡಿಸೈನ್‌ನಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ.

ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ಹೊಸ ಕಾರಿನ ಅಂಚುಗಳಲ್ಲಿ ಶಾರ್ಪ್ ಡಿಸೈನ್ ನೀಡಲಾಗಿದ್ದು, ಮರುವಿನ್ಯಾಸಗೊಳಿಸಲಾದ ಕ್ರೋಮ್, ಹೆಡ್‌ಲ್ಯಾಂಪ್ ಕ್ಲಸ್ಟರ್, ದೊಡ್ಡದಾದ ಡಿಆರ್‌ಎಲ್ಎಸ್‌ಗಳು ಮತ್ತು ಹೊಸ ಮಾದರಿಯ ಅಲಾಯ್ ವೀಲ್ಹ್ ಸೌಲಭ್ಯವು ಪೆಟ್ರೋಲ್ ಎಂಜಿನ್ ಬ್ರೆಝಾ ಕಾರಿಗೆ ಮತ್ತಷ್ಟು ಪ್ರೀಮಿಯಂ ಲುಕ್ ನೀಡಿದೆ.

ಬಹುನೀರಿಕ್ಷಿತ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಪೆಟ್ರೋಲ್ ವರ್ಷನ್ ಬಿಡುಗಡೆ

ಹಾಗೆಯೇ ಹೊಸ ಬ್ರೆಝಾ ಪೆಟ್ರೋಲ್ ಕಾರಿನಲ್ಲಿ ಈ ಬಾರಿ ಮೂರು ಹೊಸ ಡ್ಯುಯಲ್ ಟೋನ್ ಬಣ್ಣದೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಸಿಜ್ಲಿಂಗ್ ರೆಡ್ ಜೊತೆ ಮಿಡ್‌ನೈಟ್ ಬ್ಲ್ಯಾಕ್ ರೂಫ್, ಟಾರ್ಕ್ ಬ್ಲ್ಯೂ ಜೊತೆ ಮಿಡ್‌ನೈಟ್ ಬ್ಲ್ಯಾಕ್ ರೂಫ್ ಮತ್ತು ಗ್ರಾನೈಟ್ ಗ್ರೇ ಜೊತೆ ಅಟಮ್ ಆರೇಂಜ್ ಡ್ಯುಯಲ್ ಟೋನ್ ಖರೀದಿಸಬಹುದಾಗಿದೆ.

More from DriveSpark

Article Published On: Monday, February 24, 2020, 13:36 [IST]
English summary
New Maruti Suzuki Vitara Brezza Launched in India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+