ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ ಅನಾವರಣಕ್ಕೆ ಸಜ್ಜುಗೊಂಡ ಮರ್ಸಿಡಿಸ್ ಬೆಂಝ್

ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಅನಾವರಣಕ್ಕೆ ಸಜ್ಜಾದ ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. 2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ಮತ್ತಷ್ಟು ಇವಿ ಮಾರಾಟವನ್ನು ಹೆಚ್ಚಿಸಲು ಸಜ್ಜಾಗೊಳ್ಳುತ್ತಿವೆ.

ಅನಾವರಣಕ್ಕೆ ಸಜ್ಜಾದ ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ

ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‌ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ದುಬಾರಿ ಬೆಲೆ ನಡುವೆಯು ಹೊಸ ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಅನಾವರಣಕ್ಕೆ ಸಜ್ಜಾದ ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ

ಈ ನಿಟ್ಟಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಬಿಡುಗಡೆ ಸಿದ್ದವಾಗಿದ್ದು, ಶೀಘ್ರದಲ್ಲೇ ತನ್ನ ಐಷಾರಾಮಿ ಕಂಪ್ಯಾಕ್ಟ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಜಾಗತಿಕ ಮಾರುಕಟ್ಟೆಗಾಗಿ ಅನಾವರಣಗೊಳಿಸುತ್ತಿದೆ.

ಅನಾವರಣಕ್ಕೆ ಸಜ್ಜಾದ ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ

2021ರ ಜನವರಿ 20ರಂದು ಹೊಸ ಇಕ್ಯೂಎ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಅನಾವರಣಗೊಳಿಸಲು ಸಜ್ಜಾಗುತ್ತಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಮೊದಲ ಬಾರಿಗೆ ಹೊಸ ಕಾರಿನ ಉತ್ಪಾದನಾ ಆವೃತ್ತಿಯೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದೆ. ಆದರೂ ಹೊಸ ಕಾರಿನ ಮೇಲೆ ವ್ಯಾರ್ಪ್ ಬಳಕೆಯು ಕಾರಿನ ಪ್ರಮುಖ ಡಿಸೈನ್ ಮರೆಮಾಚಿದ್ದು, ಜನವರಿ 20ರಂದು ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ.

ಅನಾವರಣಕ್ಕೆ ಸಜ್ಜಾದ ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಇವಿ ಕಾರು ಮಾದರಿಯು ಬ್ಯಾಟರಿ ಸಾಮರ್ಥ್ಯದ ಕುರಿತಾದ ಸ್ಪಷ್ಟ ಮಾಹಿತಿಗಳಿಲ್ಲವಾದರೂ ಹೊಸ ಕಾರು 267-ಬಿಎಚ್‌ಪಿ ಉತ್ಪಾದನೆ ಮಾಡುವ ಎಲೆಕ್ಟ್ರಿಕ್ ಮೋಟಾರ್ ಹೊಂದಿದೆ ಎನ್ನಲಾಗಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 400 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಅನಾವರಣಕ್ಕೆ ಸಜ್ಜಾದ ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ

ಚಾರ್ಜಿಂಗ್ ಸಮಸ್ಯೆಯನ್ನು ಬಗೆಹರಿಸಲು ಹೊಸ ಕಾರಿನಲ್ಲಿ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಜನವರಿ 20ರಂದು ಹೊಸ ಕಾರಿನ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅನಾವರಣಕ್ಕೆ ಸಜ್ಜಾದ ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಹಲವು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಕಾನ್ಸೆಪ್ಟ್ ಆವೃತ್ತಿಯೊಂದಿಗೆ ರೋಡ್ ಟೆಸ್ಟಿಂಗ್ ಕೈಗೊಂಡಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಮುಂಬರುವ 2023ರ ವೇಳೆಗೆ ಒಟ್ಟು 6 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟ ಹೊಂದಿರುವ ಗುರಿಹೊಂದಿದ್ದು, ಇದಕ್ಕೆ ಪೂರಕವಾಗಿ ಮಾರುಕಟ್ಟೆ ಅಧ್ಯಯನ ನಡೆಸುವ ಮೂಲಕ ಗ್ರಾಹಕರ ಬೇಡಿಕೆಯೆಂತೆ ಹೊಸ ತಂತ್ರಜ್ಞಾನ ಸೌಲಭ್ಯದೊಂದಿಗೆ ಹೊಸ ಕಾರುಗಳನ್ನು ಸಿದ್ದಪಡಿಸುತ್ತಿದೆ.

ಅನಾವರಣಕ್ಕೆ ಸಜ್ಜಾದ ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ

ಬಿಡುಗಡೆಯಾಗಲಿರುವ ಮರ್ಸಿಡಿಸ್ ಬೆಂಝ್ ಹೊಸ ಎಲೆಕ್ಟ್ರಿಕ್ ಕಾರುಗಳ ಪಟ್ಟಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಸೂಪರ್ ಕಾರು ಮಾದರಿಗಳು ಸಹ ಒಳಗೊಂಡಿದ್ದು, ಹೊಸ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಇಕ್ಯೂಸಿ 400 ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಅನಾವರಣಕ್ಕೆ ಸಜ್ಜಾದ ಇಕ್ಯೂಎ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ

ಮರ್ಸಿಡಿಸ್ ನಿರ್ಮಾದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯಾಗಿರುವ ಇಕ್ಯೂಸಿ 400 ಆವೃತ್ತಿಯ ಹಲವು ವಿಶೇಷತೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‍ಯುವಿಯು ಒಂದು ಬಾರಿ ಚಾರ್ಜ್ ಮಾಡಿದಲ್ಲಿ ಗರಿಷ್ಠ 470 ಕಿ.ಮೀ ಮೈಲೇಜ್ ಹಿಂದಿರುಗಿಸುವ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ನೀಡುತ್ತದೆ.

Most Read Articles

Kannada
English summary
Mercedes-Benz EQA Electric SUV Global Debut Date Revealed. Read in Kannada.
Story first published: Wednesday, December 23, 2020, 21:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X