ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮರ್ಸಿಡಿಸ್ ಬೆಂಝ್

ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿ 400 ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‍ಯುವಿಯ ಹೆಸರನ್ನು ಮರ್ಸಿಡಿಸ್ ಬೆಂಝ್ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸೇರಿಸಲಾಗಿದೆ.

ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮರ್ಸಿಡಿಸ್ ಬೆಂಝ್

ಈ ಇಕ್ಯೂಸಿ ಎಸ್‍ಯುವಿಯು ಭಾರತದಲ್ಲಿ ಈಗಾಗಲೇ ಬಿಡುಗಡೆಯಾಗಬೇಕಾಗಿತ್ತು. ಆದರೆ ಕರೋನಾ ವೈರಸ್ ಭೀತಿಯಿಂದಾಗಿ ಈ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಬಿಡುಗಡೆಯನ್ನು ಮುಂದೂಡಿದ್ದರು. ಆದರೆ ಶೀಘ್ರದಲ್ಲೇ ಮರ್ಸಿಡಿಸ್ ಬೆಂಝ್ ಕಂಪನಿಯು ಈ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ.

ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮರ್ಸಿಡಿಸ್ ಬೆಂಝ್

ಮರ್ಸಿಡಿಸ್ ಬೆಂಝ್ ಕಂಪನಿಯು ಬಿಡುಗಡೆಯಾಗಲಿರುವ ಇಕ್ಯೂಸಿ ಎಸ್‍ಯುವಿಯ ಸಣ್ಣ ಟೀಸರ್ ವೀಡಿಯೋವನ್ನು ಬಿಡುಗಡೆಗೊಳಿಸಿದೆ. ಟೀಸರ್ ವೀಡಿಯೋದಲ್ಲಿ ಇಕ್ಯೂಸಿ ಬ್ಯಾಡ್ಜಿಂಗ್, ಎಲ್ಇಡಿ ಹೆಡ್ ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ ಮತ್ತು ಕೆಲವು ಇಂಟಿರಿಯರ್ ನಲ್ಲಿರುವ ಫೀಚರ್ ಗಳನ್ನು ಪ್ರದರ್ಶಿಸಿದ್ದಾರೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮರ್ಸಿಡಿಸ್ ಬೆಂಝ್

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತಕ್ಕೆ ಸಿಬಿಯು ಮಾರ್ಗದ ಮೂಲಕ ತರಲಾಗುತ್ತಿದೆ. ಈ ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ 80 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕನ್ನು ಅಳವಡಿಸಲಾಗಿದೆ.ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 445-471 ಕಿ.ಮೀಗಳವರೆಗೆ ಚಲಿಸುತ್ತದೆ.

ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮರ್ಸಿಡಿಸ್ ಬೆಂಝ್

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ. ಒಂದು ಮೋಟಾರ್ ಈ ಎಲೆಕ್ಟ್ರಿಕ್ ಎಸ್‍ಯುವಿಯು ಮುಂಭಾಗದ ಆಕ್ಸಲ್ ಅನ್ನು ಚಾಲನೆ ಮಾಡುತ್ತದೆ ಮತ್ತು ಇನ್ನೊಂದು ಮೋಟಾರ್ ಹಿಂಭಾಗದ ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿರುತ್ತದೆ. ಈ ಸಂಯೋಜಿತ ಎಲೆಕ್ಟ್ರಿಕ್ ಮೋಟಾರ್ 407 ಬಿಹೆಚ್‍ಪಿ ಪವರ್ ಮತ್ತು 765ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮರ್ಸಿಡಿಸ್ ಬೆಂಝ್

ಜರ್ಮನ್ ಐಷಾರಾಮಿ ಕಾರು ತಯಾರಕರು ಇಕ್ಯೂಸಿಯನ್ನು ಅಭಿವೃದ್ಧಿಪಡಿಸುವಾಗ ಸಾಕಷ್ಟು ಚಿಂತನೆ ನಡೆಸಿದ್ದಾರೆ. ಮರ್ಸಿಡಿಸ್ ಬೆಂಝ್ ಕಂಪನಿಯ ಮೊದಲ ಆಲ್-ಎಲೆಕ್ಟ್ರಿಕ್ ಸರಣಿ ಉತ್ಪಾದನಾ ಮಾದರಿಯಾಗಿದೆ.

ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮರ್ಸಿಡಿಸ್ ಬೆಂಝ್

2016ರ ಪ್ಯಾರಿಸ್ ಮೋಟಾರ್ ಶೋದಲ್ಲಿ ಪ್ರದರ್ಶಿಸಲಾದ ಜನರೇಷನ್ ಇಕ್ಯೂ ಕಾನ್ಸೆಪ್ಟ್‌ನ ವಿನ್ಯಾಸವನ್ನು ಹೊಸ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‍ಯುವಿಯು ಹೊಂದಿದೆ. ಇನ್ನು ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಕ್ಯಾಬಿನ್ ನಲ್ಲಿ ಹೊಸ ಪ್ರೀಮಿಯಂ ವಿನ್ಯಾಸವನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮರ್ಸಿಡಿಸ್ ಬೆಂಝ್ ಕಂಪನಿಯು ಈ ಹೊಸ ಐಷಾರಾಮಿ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯನ್ನು ಬಹಿರಂಗಪಡಿಸಿಲ್ಲ. ಆದರೆ ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.5 ಕೋಟಿಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಎಸ್‍ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮರ್ಸಿಡಿಸ್ ಬೆಂಝ್

ಈ ಎಲೆಕ್ಟ್ರಿಕ್ ಎಸ್‍ಯುವಿಯು ಕೇವಲ 5.1 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 180 ಕಿ.ಮೀಗಳಾಗಿದೆ. ಈ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಎಸ್‍ಯುವಿಗೆ ಯಾವುದೇ ನೇರ ಪ್ರತಿಸ್ಪರ್ಧಿಗಳಿಲ್ಲ, ಆದರೆ ಮುಂದಿನ ದಿನಗಳಲ್ಲಿ ಆಡಿ ಕಂಪನಿಯು ಇ-ಟ್ರಾನ್ ಅನ್ನು ಭಾರತದಲ್ಲಿ ಬಿಡುಗಡೆಗೊಂಡರೆ ಇಕ್ಯೂಸಿ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Monday, August 31, 2020, 18:48 [IST]
English summary
Mercedes-Benz EQC 400 Listed On India Website Ahead Of Expected Launch. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+