ಆಫ್ ರೋಡಿಂಗ್ ಕೌಶಲ್ಯ ಪ್ರದರ್ಶನದಲ್ಲಿ ಗಮನಸೆಳೆದ ಮರ್ಸಿಡಿಸ್ ಬೆಂಝ್ ಇಕ್ಯೂಸಿ 4x4 ವರ್ಷನ್

ಜರ್ಮನ್ ಕಾರು ಉತ್ಪಾದನಾ ಕಂಪನಿ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಇಕ್ಯೂಸಿ 400 ಎಸ್‌ಯುವಿ ಮಾದರಿಯಲ್ಲಿ ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟ ಮಾಡುತ್ತಿದ್ದು, ಹೊಸ ಕಾರು ಐಷಾರಾಮಿ ಪ್ರಯಾಣ ಒದಗಿಸುವುದಲ್ಲದೆ ಆಫ್ ರೋಡ್ ಪ್ರದರ್ಶನದಲ್ಲೂ ಗಮನಸೆಳೆಯುತ್ತಿದೆ.

ಆಫ್ ರೋಡಿಂಗ್ ಕೌಶಲ್ಯ ಪ್ರದರ್ಶನದಲ್ಲಿ ಗಮನಸೆಳೆದ ಮರ್ಸಿಡಿಸ್ ಬೆಂಝ್ ಇಕ್ಯೂಸಿ 4x4 ವರ್ಷನ್

ಹೊಸ ಇಕ್ಯೂಸಿ 400 ಕಾರು ಮಾದರಿಯು ಐಷಾರಾಮಿ ಪ್ರಯಾಣ ಒದಗಿಸುವುದರ ಜೊತೆಗೆ ಆಫ್ ರೋಡ್ ಕೌಶಲ್ಯ ಪ್ರದರ್ಶನದಲ್ಲೂ ಗಮನಸೆಳೆಯಲಿದ್ದು, ಮರ್ಸಿಡಿಸ್ ಬೆಂಝ್ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರಿನ ಮೊದಲ ಆಫ್ ರೋಡ್ ಕೌಶಲ್ಯದ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ. ಆಫ್ ರೋಡ್ ಮಾದರಿಯು ಸಾಮಾನ್ಯ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಗ್ರೌಂಡ್ ಕ್ಲಿಯೆರೆನ್ಸ್ ಮತ್ತು ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದ್ದು, ಸಾಮಾನ್ಯ ಆವೃತ್ತಿಗಿಂತಲೂ ಆಫ್ ರೋಡ್ ಮಾದರಿಯು ಭಾರೀ ಬದಲಾವಣೆ ಪಡೆದುಕೊಂಡಿದೆ.

ಆಫ್ ರೋಡಿಂಗ್ ಕೌಶಲ್ಯ ಪ್ರದರ್ಶನದಲ್ಲಿ ಗಮನಸೆಳೆದ ಮರ್ಸಿಡಿಸ್ ಬೆಂಝ್ ಇಕ್ಯೂಸಿ 4x4 ವರ್ಷನ್

ಮರ್ಸಿಡಿಸ್ ಕಂಪನಿಯು ಸದ್ಯ ಇಕ್ಯೂಸಿ 400 ಮಾದರಿಯ ಸಾಮಾನ್ಯ ಆವೃತ್ತಿಯನ್ನು ಮಾತ್ರ ಮಾಡುತ್ತಿದ್ದು, ಮುಂಬರುವ ಕೆಲವೇ ದಿನಗಳಲ್ಲಿ 4x4 ವರ್ಷನ್ ಸಹ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಆಫ್ ರೋಡಿಂಗ್ ಕೌಶಲ್ಯ ಪ್ರದರ್ಶನದಲ್ಲಿ ಗಮನಸೆಳೆದ ಮರ್ಸಿಡಿಸ್ ಬೆಂಝ್ ಇಕ್ಯೂಸಿ 4x4 ವರ್ಷನ್

ಎಲೆಕ್ಟ್ರಿಕ್ ಕಾರುಗಳು ಕೇವಲ ನಗರ ಪ್ರದೇಶಗಳಲ್ಲಿ ಪ್ರಯಾಣಕ್ಕೆ ಮಾತ್ರ ಸೀಮಿತ ಎನ್ನುವ ಅಭಿಪ್ರಾಯವನ್ನು ಬದಲಾಯಿಸುತ್ತಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಎಲೆಕ್ಟ್ರಿಕ್ ಕಾರು ಮಾದರಿಯ ಮೂಲಕ ಸಾಮಾನ್ಯ ಕಾರು ಮಾದರಿಗಳಂತೆಯೇ ಆಫ್ ರೋಡ್ ಕೌಶಲ್ಯ ಪ್ರದರ್ಶಿಸುವ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಆಫ್ ರೋಡಿಂಗ್ ಕೌಶಲ್ಯ ಪ್ರದರ್ಶನದಲ್ಲಿ ಗಮನಸೆಳೆದ ಮರ್ಸಿಡಿಸ್ ಬೆಂಝ್ ಇಕ್ಯೂಸಿ 4x4 ವರ್ಷನ್

ಹೊಸ ಆಫ್ ರೋಡ್ ಮಾದರಿಯು ಒರಟು ಭೂಪ್ರದೇಶಗಳಲ್ಲಿ ಸರಾಗವಾಗಿ ನುಗ್ಗಲು ಅನುಕೂಲಕರವಾಗುವಂತೆ ಜಿ-ಕ್ಲಾಸ್ ಮಾದರಿಗಿಂತ 23-ಎಂಎಂ ಎತ್ತರ, 140 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಅನ್ನು 293-ಎಂಎಂ ಗೆ ಎತ್ತರಿಸಲಾಗಿದ್ದು, ಯಾವುದೇ ಮಾದರಿಯ ರಸ್ತೆಗಳಲ್ಲೂ ಸುಲಭವಾಗಿ ಮುನ್ನುಗ್ಗುವ ಶಕ್ತಿ ಹೊಂದಿದೆ. ವಿಡಿಯೋದಲ್ಲಿ ಕಾಣುತ್ತಿರುವಂತೆ ವೆಕ್‌ಬೋರ್ಡ್ ಚಾಂಪಿಯನ್‌ಶಿಫ್ ಸನ್ನಿ ಮೇಜರ್ ಜೊತೆಗಿನ ಸರ್ಫಿಂಗ್ ಕೌಶಲ್ಯಕ್ಕೆ ಪೂರಕವಾಗಿ ಇಕ್ಯೂಸಿ ಕಾರಿನ ಪ್ರದರ್ಶನವು ಅಧ್ಬುತವಾಗಿದೆ.

ಇಕ್ಯೂಸಿ 4x4 ಪರಿಕಲ್ಪನೆ ಚಾಲನೆ ಸುಲಭಗೊಳಿಸುವಲ್ಲಿ 20 ಇಂಚಿನ ಆಫ್-ರೋಡ್ ಟೈರ್ಗಳು ನಿರ್ಣಾಯಕ ಪಾತ್ರ ವಹಿಸಲಿದ್ದು, ಆಫ್ ರೋಡ್‌ಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಂದ ಪರ್ಫಾಮೆನ್ಸ್ ಸಾಧ್ಯವಿಲ್ಲ ಎನ್ನುವ ಅನುಮಾನಗಳಿಗೆ ಈ ವಿಡಿಯೋ ಉತ್ತಮ ಉದಾಹರಣೆಯಾಗಿದೆ.

ಆಫ್ ರೋಡಿಂಗ್ ಕೌಶಲ್ಯ ಪ್ರದರ್ಶನದಲ್ಲಿ ಗಮನಸೆಳೆದ ಮರ್ಸಿಡಿಸ್ ಬೆಂಝ್ ಇಕ್ಯೂಸಿ 4x4 ವರ್ಷನ್

ಇನ್ನು ಮರ್ಸಿಡಿಸ್ ಬೆಂಝ್ ನಿರ್ಮಾಣದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯಾಗಿರುವ ಇಕ್ಯೂಸಿ 400 ಆವೃತ್ತಿಯ ಹಲವು ವಿಶೇಷತೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‍ಯುವಿಯು ಒಂದು ಬಾರಿ ಚಾರ್ಜ್ ಮಾಡಿದಲ್ಲಿ ಗರಿಷ್ಠ 470 ಕಿ.ಮೀ ಮೈಲೇಜ್ ಹಿಂದಿರುಗಿಸುವ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ನೀಡುತ್ತದೆ.

ಆಫ್ ರೋಡಿಂಗ್ ಕೌಶಲ್ಯ ಪ್ರದರ್ಶನದಲ್ಲಿ ಗಮನಸೆಳೆದ ಮರ್ಸಿಡಿಸ್ ಬೆಂಝ್ ಇಕ್ಯೂಸಿ 4x4 ವರ್ಷನ್

ಇಕ್ಯೂಸಿಯಲ್ಲಿನ ಫುಲ್ ಎಲೆಕ್ಟ್ರಿಕ್ ಪವರ್‌ಟ್ರೇನ್ ಮಾದರಿಯು 405-ಬಿಹೆಚ್‌ಪಿ ಪವರ್ ಮತ್ತು 765-ಎನ್ಎ ಟಾರ್ಕ್ ಉತ್ಪಾದಿಸಲಿದ್ದು, ಕೇವಲ 5.1 ಸೆಕೆಂಡುಗಳಲ್ಲಿ ಸೊನ್ನೆಯಿಂದ ನೂರು ಕಿ.ಮೀ ವೇಗದಲ್ಲಿ ಕ್ರಮಿಸುತ್ತದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಆಫ್ ರೋಡಿಂಗ್ ಕೌಶಲ್ಯ ಪ್ರದರ್ಶನದಲ್ಲಿ ಗಮನಸೆಳೆದ ಮರ್ಸಿಡಿಸ್ ಬೆಂಝ್ ಇಕ್ಯೂಸಿ 4x4 ವರ್ಷನ್

ಜೊತೆಗೆ 4x4 ಡ್ರೈವ್ ಸಿಸ್ಟಂ ಹೊಂದಿರುವ ಹೊಸ ಕಾರು ಮಾದರಿಯು ಇಕೋ, ಕಂಫರ್ಟ್, ಡೈನಾಮಿಕ್ ಮತ್ತು ಇಂಡಿವಿಚ್ಯೂಲ್ ಎಂಬ ಡ್ರೈವಿಂಗ್ ಮೋಡ್ ಗಳನ್ನು ಒಳಗೊಂಡಿದ್ದು, ಚಾರ್ಜಿಂಗ್ ಸೌಲಭ್ಯಕ್ಕಾಗಿ ಇಕ್ಯೂಸಿ 400 ಮಲ್ಟಿಪಲ್ ಚಾರ್ಜಿಂಗ್ ಆಯ್ಕೆಗಳನ್ನು ಹೊಂದಿದೆ.

ಆಫ್ ರೋಡಿಂಗ್ ಕೌಶಲ್ಯ ಪ್ರದರ್ಶನದಲ್ಲಿ ಗಮನಸೆಳೆದ ಮರ್ಸಿಡಿಸ್ ಬೆಂಝ್ ಇಕ್ಯೂಸಿ 4x4 ವರ್ಷನ್

ಈ ಮೂಲಕ ಎಲೆಕ್ಟ್ರಿಕ್ ಎಸ್‌ಯುವಿ ಕಾರುಗಳಲ್ಲೇ ಹಲವಾರು ಐಷಾರಾಮಿ ಫೀಚರ್ಸ್ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌‌ಶೋರೂಂ ಪ್ರಕಾರ ರೂ. 99.30 ಲಕ್ಷ ಬೆಲೆ ಹೊಂದಿದ್ದು, ಈ ಇವಿ ಎಸ್‍ಯುವಿಗೆ ಭಾರತದಲ್ಲಿ ಯಾವುದೇ ಪ್ರತಿಸ್ಪರ್ಧಿಗಳಿಲ್ಲ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆಫ್ ರೋಡಿಂಗ್ ಕೌಶಲ್ಯ ಪ್ರದರ್ಶನದಲ್ಲಿ ಗಮನಸೆಳೆದ ಮರ್ಸಿಡಿಸ್ ಬೆಂಝ್ ಇಕ್ಯೂಸಿ 4x4 ವರ್ಷನ್

ಆದರೆ ಶೀಘ್ರದಲ್ಲೇ ಬಿಡುಗಡೆಗೆ ಸಿದ್ದವಾಗಿರುವ ಆಡಿ ಇ-ಟ್ರಾನ್ ಎಸ್‌ಯುವಿ ಕಾರು ಮರ್ಸಿಡಿಸ್ ಇಕ್ಯೂಸಿ ಜೊತೆ ಪ್ರತಿಸ್ಪರ್ಧಿಯಾಗಲಿದ್ದು, ಮಾಲಿನ್ಯ ತಡೆ ಉದ್ದೇಶದಿಂದ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮೇಲೆ ನಿರ್ಬಂಧ ಹೇರುತ್ತಿರುವುದೇ ಎಲೆಕ್ಟ್ರಿಕ್ ವಾಹನ ಮಾರಾಟವು ನಿಧಾನವಾಗಿ ಬೆಳವಣಿಗೆ ಕಾಣಲು ಪ್ರಮುಖ ಕಾರಣವಾಗಿದೆ.

Most Read Articles

Kannada
English summary
Mercedes Benz EQC 4x4 Off Road Capabilities Showcased. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X