ಹೊಸ ಅಪ್‌ಡೇಟ್ ಪಡೆದುಕೊಂಡ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಮೊದಲ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯಾದ ಇಕ್ಯೂಸಿ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಹೊಸ ಅಪ್ಡೇಟ್ ಗಳನ್ನು ಪಡೆದುಕೊಂಡಿದೆ.

ಹೊಸ ಅಪ್‌ಡೇಟ್ ಪಡೆದುಕೊಂಡ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ವಾಟರ್-ಕೂಲ್ಡ್ ಆನ್-ಬೋರ್ಡ್ ಚಾರ್ಜರ್ ಅನ್ನು ನೀಡಲಾಗುತ್ತದೆ. ಈ ಐಷಾರಾಮಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಮನೆಯಲ್ಲಿ ಹೆಚ್ಚು ವೇಗವಾಗಿ ಚಾರ್ಜ್ ಮಾಡಬಹುದು. ಈ ಕಾರಿನ 80 ಕಿಲೋವ್ಯಾಟ್ ಬ್ಯಾಟರಿಯನ್ನು ಈಗ 7 ಗಂಟೆ 30 ನಿಮಿಷಗಳಲ್ಲಿ ಶೇ.10 ರಿಂದ ಶೇ.100 ರಷ್ಟು ಚಾರ್ಜ್ ಮಾಡಬಹುದು. ಈ ಹಿಂದೆ ಪೂರ್ಣ ಪ್ರಮಾಣದ ಚಾರ್ಜ್ ಆಗಲು 11 ಗಂಟೆಗಳ ಸಮಯವನ್ನು ತೆಗೆದುಕೊಳ್ಳುತ್ತಿತ್ತು. ಹೊಸ ಅಪ್ಡೇಟ್ ನಿಂದ ವೇಗವಾಗಿ ಚಾರ್ಜ್ ಮಾಡಬಹುದಾಗಿದೆ.

ಹೊಸ ಅಪ್‌ಡೇಟ್ ಪಡೆದುಕೊಂಡ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಇನ್ನು ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರ ಸ್ಟೈಲಿಂಗ್ ತುಂಬಾ ವಿಭಿನ್ನವಾಗಿದೆ. ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಮುಂಭಾಗದಲ್ಲಿ ಮಲ್ಟಿ-ಸ್ಲ್ಯಾಟ್ ಗ್ರಿಲ್ ದೊಡ್ಡದಾಗಿದೆ ಮತ್ತು ಯು-ಆಕಾರದ ಕ್ರೋಮ್ ಸುತ್ತುವರೆದಿರುವ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್ ಗಳನ್ನು ಒಳಗೊಂಡಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಅಪ್‌ಡೇಟ್ ಪಡೆದುಕೊಂಡ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಇನ್ನು ಈ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‍ಯುವಿಯ ಕ್ಯಾಬಿನ್ ನಲ್ಲಿ ಡ್ಯುಯಲ್ 10.3-ಇಂಚಿನ ಡಿಸ್ ಪ್ಲೇಯನ್ನು ಅಳವಡಿಸಲಾಗಿದೆ. ಇನ್ನು ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್ ಮತ್ತು ಟ್ರ್ಯಾಕ್‌ಪ್ಯಾಡ್‌ನೊಂದಿಗೆ ಸಿಗ್ನೇಚರ್ ಸೆಂಟರ್ ಕನ್ಸೋಲ್ ನೊಂದಿಗೆ ಎಂಬಿಎಕ್ಸ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಅಳವಡಿಸಿದೆ.

ಹೊಸ ಅಪ್‌ಡೇಟ್ ಪಡೆದುಕೊಂಡ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯನ್ನು ಭಾರತಕ್ಕೆ ಸಿಬಿಯು ಮಾರ್ಗದ ಮೂಲಕ ತರಲಾಗುತ್ತಿದೆ. ಈ ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ 80 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕನ್ನು ಅಳವಡಿಸಲಾಗಿದೆ.ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 471 ಕಿ.ಮೀಗಳವರೆಗೆ ಚಲಿಸುತ್ತದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಹೊಸ ಅಪ್‌ಡೇಟ್ ಪಡೆದುಕೊಂಡ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಹೊಸ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯಲ್ಲಿ ಎರಡು ಎಲೆಕ್ಟ್ರಿಕ್ ಮೋಟಾರ್ ಅನ್ನು ಹೊಂದಿದೆ. ಒಂದು ಮೋಟಾರ್ ಈ ಎಲೆಕ್ಟ್ರಿಕ್ ಎಸ್‍ಯುವಿಯು ಮುಂಭಾಗದ ಆಕ್ಸಲ್ ಅನ್ನು ಚಾಲನೆ ಮಾಡುತ್ತದೆ ಮತ್ತು ಇನ್ನೊಂದು ಮೋಟಾರ್ ಹಿಂಭಾಗದ ಫ್ಹೋರ್ ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಹೊಂದಿರುತ್ತದೆ.

ಹೊಸ ಅಪ್‌ಡೇಟ್ ಪಡೆದುಕೊಂಡ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಸಂಯೋಜಿತ ಎಲೆಕ್ಟ್ರಿಕ್ ಮೋಟಾರ್ 405 ಬಿಹೆಚ್‍ಪಿ ಮತ್ತು 765 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಜರ್ಮನ್ ಐಷಾರಾಮಿ ಕಾರು ತಯಾರಕರು ಇಕ್ಯೂಸಿಯನ್ನು ಅಭಿವೃದ್ಧಿಪಡಿಸುವಾಗ ಸಾಕಷ್ಟು ಚಿಂತನೆ ನಡೆಸಿದ್ದಾರೆ. ಮರ್ಸಿಡಿಸ್ ಬೆಂಝ್ ಕಂಪನಿಯ ಮೊದಲ ಆಲ್-ಎಲೆಕ್ಟ್ರಿಕ್ ಸರಣಿ ಉತ್ಪಾದನಾ ಮಾದರಿಯಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಹೊಸ ಅಪ್‌ಡೇಟ್ ಪಡೆದುಕೊಂಡ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

2016ರ ಪ್ಯಾರಿಸ್ ಮೋಟಾರ್ ಶೋದಲ್ಲಿ ಪ್ರದರ್ಶಿಸಲಾದ ಜನರೇಷನ್ ಇಕ್ಯೂ ಕಾನ್ಸೆಪ್ಟ್‌ನ ವಿನ್ಯಾಸವನ್ನು ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿಯು ಹೊಂದಿದೆ. ಇನ್ನು ಈ ಹೊಸ ಎಲೆಕ್ಟ್ರಿಕ್ ಎಸ್‍ಯುವಿಯ ಕ್ಯಾಬಿನ್ ನಲ್ಲಿ ಹೊಸ ಪ್ರೀಮಿಯಂ ವಿನ್ಯಾಸವನ್ನು ಒಳಗೊಂಡಿದೆ.

ಹೊಸ ಅಪ್‌ಡೇಟ್ ಪಡೆದುಕೊಂಡ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಎಲೆಕ್ಟ್ರಿಕ್ ಎಸ್‍ಯುವಿಯು ಕೇವಲ 5.1 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 180 ಕಿ.ಮೀಗಳಾಗಿದೆ. ಈ ಎಸ್‍ಯುವಿಗೆ ಯಾವುದೇ ನೇರ ಪ್ರತಿಸ್ಪರ್ಧಿಗಳಿಲ್ಲ, ಆದರೆ ಮುಂದಿನ ದಿನಗಳಲ್ಲಿ ಆಡಿ ಕಂಪನಿಯು ಇ-ಟ್ರಾನ್ ಅನ್ನು ಭಾರತದಲ್ಲಿ ಬಿಡುಗಡೆಗೊಂಡರೆ ಇಕ್ಯೂಸಿ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Wednesday, November 18, 2020, 20:36 [IST]
English summary
Mercedes upgrades EQC SUV's On-Board Charger To 11kW For Faster Power Up. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+