ಮರ್ಸಿಡಿಸ್ ಬೆಂಝ್ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಜರ್ಮನಿ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಮರ್ಸಿಡಿಸ್ ಬೆಂಝ್ ತನ್ನ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಮುಂದಿನ ಮಾರ್ಚ್ 3ಕ್ಕೆ ಈ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ.

ಮರ್ಸಿಡಿಸ್ ಬೆಂಝ್ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಕಳೆದ ವರ್ಷದ ಆರಂಭದಲ್ಲಿ ಮರ್ಸಿಡಿಸ್ ಜಿ‍ಎ‍ಲ್‍ಸಿ ಫೇಸ್‍‍ಲಿಫ್ಟ್ ಅನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಭಾರತದಲ್ಲಿ ಬಿಡುಗಡೆಗೊಳಿಸುವ ಬೆಂಝ್ ಜಿಎಲ್‍ಸಿ ಫೇಸ್‍‍ಲಿಫ್ಟ್ ಕೊಪೆಯ ಹೊರಭಾಗದಲ್ಲಿ ಮತ್ತು ಒಳಾಂಗಣದಲ್ಲಿ ಹಲವಾರು ಬದಲಾವಣೆ ಬಿಡುಗಡೆಗೊಳಿಸಲಾಗುವುದು ಎಂದು ಕಂಪನಿ ಖಚಿತಪಡಿಸಿದೆ. ಹೊಸ ಮರ್ಸಿಡಿಸ್ ಬೆಂಝ್ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರು ಹಲವು ಅತ್ಯಾಧುನಿಕ ಫೀಚರ್‍‍ಗಳನ್ನು ಹೊಂದಿರುತ್ತದೆ.

ಮರ್ಸಿಡಿಸ್ ಬೆಂಝ್ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಮರ್ಸಿಡಿಸ್ ಬೆಂಝ್ ಜಿ‍ಎಲ್‍‍ಸಿ ಕೊಪೆ ಕಾರಿನಲ್ಲಿ ಸಾಫ್ಟ್‌ವೇರ್ 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು 10.25 ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍‍ಮೆಂಟ್ ಡಿಸ್‍‍ಪ್ಲೇಯನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

ಮರ್ಸಿಡಿಸ್ ಬೆಂಝ್ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಹೊಸ ಕಾರಿನ ಕ್ಯಾಬಿನ್‍‍‍ಗೆ ಪ್ರೀಮಿಯಂ ಅನುಭವವನ್ನು ನೀಡುವುದಕ್ಕಾಗಿ ಇಂಟಿರಿಯರ್‍‍ನಲ್ಲಿ ಕ್ಲೈಮೆಟ್ ಕಂಟ್ರೋಲ್ ಯುನಿಟ್, ಮರುವಿನ್ಯಾಸಗೊಳಿಸಲಾದ ಏರ್ ಕಂಡೀಷನಿಂಗ್ ವೆಂಟ್‍‍ಗಳಿವೆ. ಇದರೊಂದಿಗೆ ಟಚ್‍‍‍ಸ್ಕ್ರೀನ್, ಸೆಂಟ್ರಲ್ ಕನ್ಸೋಲ್‍‍ನಲ್ಲಿ ಟಚ್‍‍ಪ್ಯಾಡ್, ಸ್ಟೀಯರಿಂಗ್ ಮೌಂಡಡ್ ಕಂಟ್ರೋಲ್ ಮತ್ತು ವಾಯ್ಸ್ ಕಮಾಂಡ್ ಅನ್ನು ಹೊಂದಿದೆ.

ಮರ್ಸಿಡಿಸ್ ಬೆಂಝ್ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಮರ್ಸಿಡಿಸ್ ಬೆಂಝ್ ಕೊಪೆ ಫೇಸ್‍ಲಿಫ್ಟ್ ಕಾರಿನಲ್ಲಿ 2.0 ಲೀಟರಿನ ಟರ್ಬೋಚಾರ್ಜ್ಡ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 255 ಬಿ‍‍ಹೆಚ್‍‍ಪಿ ಪವರ್ ಮತ್ತು 370 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮರ್ಸಿಡಿಸ್ ಬೆಂಝ್ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಇನ್ನು 2.0 ಲೀಟರಿನ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ. ಈ ಎಂಜಿನ್ 245 ಬಿ‍‍ಹೆಚ್‍ಪಿ ಪವರ್ ಮತ್ತು 500 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಎಂಜಿನ್‍‍ಗಳೊಂದಿಗೆ 9 ಸ್ಪೀಡ್ 9ಜಿ ಟ್ರಾನಿಕ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಅಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಮರ್ಸಿಡಿಸ್ ಬೆಂಝ್ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಎಂಜಿ ಜಿಎಲ್‍ಸಿ ಕಾರಿನಲ್ಲಿ 3.0 ಲೀಟರ್ ಟರ್ಬೊ ವಿ6 ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 362 ಬಿ‍‍ಹೆಚ್‍‍ಪಿ ಪವರ್ ಮತ್ತು 520 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 9 ಸ್ಪೀಡ್ 9ಜಿ ಟ್ರಾನಿಕ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್‍‍ನೊಂದಿಗೆ 4 ಮ್ಯಾಟಿಕ್ ಎಡಬ್ಲ್ಯೂಡಿ ಸಿಸ್ಟಂ ಅನ್ನು ಅಳವಡಿಸಲಾಗಿದೆ. ಈ ಕೊಪೆ ಕಾರು 250 ಟಾಪ್ ಸ್ಪೀಡ್ ಅನ್ನು ಹೊಂದಿದೆ.

ಮರ್ಸಿಡಿಸ್ ಬೆಂಝ್ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಹೊಸ ಜಿಎಲ್‍ಇ ಎಸ್‍ಯುವಿಯನ್ನು ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಗೊಳಿಸಲಾಗಿತ್ತು. 2020ರ ಬೆಂಝ್ ಜಿಎಲ್ಇ ಎಸ್‍ಯುವಿಯ ವಿತರಣೆನ್ನು ಕೂಡ ಪ್ರಾರಂಭಿಸಿದೆ.

ಮರ್ಸಿಡಿಸ್ ಬೆಂಝ್ ಜಿಎಲ್‍‍ಸಿ ಕೊಪೆ ಫೇಸ್‍‍ಲಿಫ್ಟ್ ಕಾರು ಬಿಡುಗಡೆ ದಿನಾಂಕ ಬಹಿರಂಗ

ಹೊಸ ಮರ್ಸಿಡಿಸ್ ಬೆಂಝ್ ಕೊಪೆ ಫೇಸ್‍‍ಲಿಫ್ಟ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.60-65 ಲಕ್ಷಗಳಿರಬಹುದು ಎಂದು ಅಂದಾಜಿಸಲಾಗಿದೆ. ಈ ಕಾರು ಭಾರತದಲ್ಲಿ ಬಿಡುಗಡೆಯಾದ ಬಳಿಕ ಪೋರ್ಷೆ ಮೆಕಾನ್ ಮತ್ತು ಬಿ‍ಎಂಡಬ್ಲ್ಯೂ ಎಕ್ಸ್4 ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Saturday, February 22, 2020, 15:39 [IST]
English summary
Mercedes-Benz GLC Coupe facelift India launch on March 3. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+