ಬಿಡುಗಡೆಯಾಗಲಿದೆ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್
ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿ ಮರ್ಸಿಡಿಸ್ ಬೆಂಝ್ ತನ್ನ ಹೊಸ ಎಸ್-ಕ್ಲಾಸ್ ಕಾರನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಈ ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನ ಇಂಟಿರಿಯರ್‍ನ ಟೀಸರ್ ಅನ್ನು ಬಿಡುಗಡೆಗೊಳಿಸಿದೆ.

ಈ ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರಿನಲ್ಲಿ ಅತ್ಯಾಕರ್ಷಕ ಹೈಟಕ್ ಫೀಚರುಗಳನ್ನು ಹೊಂದಿರಲಿದೆ. ಈ ಹೊಸ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಎಂಬಿಯುಎಕ್ಸ್ ಇನ್ಫೋಟೇನೆಮೆಂಟ್ ಸಿಸ್ಟಂ ಅನ್ನು ಹೊಂದಿದೆ.ಇನ್ನು ಈ ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಮುಂದಿನ ವರ್ಷದಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ಮರ್ಸಿಡಿಸ್ ಬೆಂಝ್ ಎಸ್-ಕ್ರಾಸ್ ಉನ್ನತ ಮಟ್ಟದ ಐಷಾರಾಮಿ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಕಾರು ಇದಾಗಿದೆ.

ಇನ್ನು ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಭಾರತದಲ್ಲಿ ಬ್ರ್ಯಾಂಡ್ ನ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ರಾಸ್ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಈ ಕಾರಿನಲ್ಲಿ ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ಎಲ್ಇಡಿ ಡಿಆರ್ಎಲ್ ಗಳನ್ನು ಅಳವಡಿಸಲಾಗಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಪ್ರಸ್ತುತ ತಲೆಮಾರಿನ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ (ಡಬ್ಲ್ಯು 222) ಭಾರತದಿಂದ 2014ರಿಂದ ಮಾರಾಟವಾಗುತ್ತಿದೆ. ಈ ಹೊಸ ತಲೆಮಾರಿನ ಎಸ್-ಕ್ಲಾಸ್ ಡ್ಯಾಶ್ ಬೋರ್ಡ್ ನಲ್ಲಿ ದೊಡ್ಡ ಇನ್ಫೋಟೇನೆಮೆಂಟ್ ಡಿಸ್ ಪ್ಲೇಯನ್ನು ಹೊಂದಿದೆ.

ಈ ಐಷಾರಾಮಿ ಕಾರಿನ ಹಿಂಭಾಗದ ಪ್ರಯಾಣಿಕರ ಮನುರಂಜನೆಗಾಗಿ ಹಿಂಭಾಗದಲ್ಲಿ ರೇರ್ ಸೆಂಟರ್ ಕನ್ಸೋಲ್, ಅರ್ಮ್ ರೇಸ್ಟ್, ಮಸಾಜ್ ಫಂಕ್ಷನ್ ಮತ್ತು ದೊಡ್ಡ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಡ್ಯಾಶ್‌ಬೋರ್ಡ್ ಹೊಸ ವಿನ್ಯಾಸವನ್ನು ಹೊಂದಿರಲಿದೆ. ಈ ಹೊಸ ಎಸ್-ಕ್ಲಾಸ್ ಕಾರಿನಲ್ಲಿ ಮೌಂಟಡ್ ಕಂಟ್ರೋಲ್ ನೊಂದಿಗೆ ಹೊಸ ಸ್ಟೀಯರಿಂಗ್ ವ್ಜೀಲ್ ಅನ್ನು ಅಳವಡಿಸಲಾಗಿದೆ.

ಹೊಸ ತಲೆಮಾರಿನ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ರೇಡಾರ್ ಗೈಡೆಡ್ ಕ್ರೂಸ್ ಕಂಟ್ರೋಲ್, ಮಲ್ಟಿಪಲ್ ಏರ್‌ಬ್ಯಾಗ್, 360 ಡಿಗ್ರಿ ಕ್ಯಾಮೆರಾ, ನೈಟ್ ವಿಷನ್ ಕ್ಯಾಮೆರಾ ಮತ್ತು ಇತರ ಫೀಚರ್ ಗಳನ್ನು ಹೊಂದಿರಲಿದೆ.
MOST READ: ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್

ಹೊಸ ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಪೆಟ್ರೋಲ್, ಡೀಸೆಲ್, ಮೈಲ್ಡ್-ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇನ್ನು ಮರ್ಸಿಡಿಸ್ ಬೆಂಝ್ ಎಸ್600 ರ ಕೂಪೆ ಮತ್ತು ಕ್ಯಾಬ್ರಿಯೊಲೆಟ್ ಆವೃತ್ತಿಗಳನ್ನು ಕಂಪನಿಯು ಸ್ಥಗಿತಗೊಳಿಸಲಿದೆ ಎಂಬ ವದಂತಿಗಳಿವೆ.

ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್ ಕಾರು ಬಿಡುಗಡೆಯಾದ ಬಳಿಕ ಬಿಎಂಡಬ್ಲ್ಯು 7 ಸೀರಿಸ್, ಜಾಗ್ವಾರ್ ಎಕ್ಸ್‌ಜೆ, ಆಡಿ ಎ8, ಪೋರ್ಷೆ ಪನಾಮೆರಾ ಮತ್ತು ಮೆಸಾರಟಿ ಕಾರು ಕ್ವಾಟ್ರೊಪೋರ್ಟ್ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.


Click it and Unblock the Notifications








