ಕರೋನಾ ವೈರಸ್ ಎಫೆಕ್ಟ್- ಆನ್‌ಲೈನ್ ಮೂಲಕವೇ ಕಾರು ಮಾರಾಟ ಆರಂಭಿಸಿದ ಬೆಂಝ್

ಕರೋನಾ ವೈರಸ್ ಅಟ್ಟಹಾಸದಿಂದಾಗಿ ಇಡೀ ವಿಶ್ವವೇ ಆತಂಕದಲ್ಲಿದ್ದು, ವೈರಸ್ ಹತೋಟಿಗಾಗಿ ಎಲ್ಲಾ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರಿಂದ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಆಟೋ ಉದ್ಯಮದ ಮೇಲೂ ಭಾರೀ ಪರಿಣಾಮ ಬೀರಿದೆ.

ಆನ್‌ಲೈನ್ ಮೂಲಕವೇ ಕಾರು ಮಾರಾಟ ಆರಂಭಿಸಿದ ಬೆಂಝ್

ಸದ್ಯ ವೈರಸ್ ಹೊಡೆದೊಡಿಸಲು ಹಾಕಲಾಗಿರುವ ಲಾಕ್‌‌ಡೌನ್ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದ್ದು, ಹಸಿರು ವಲಯದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಷರತ್ತುಬದ್ದ ಅವಕಾಶ ನೀಡಲಾಗುತ್ತಿದೆ. ಇದರಿಂದ ಕೆಲವು ಸುರಕ್ಷಾ ಕ್ರಮಗಳೊಂದಿಗೆ ವಾಣಿಜ್ಯ ವ್ಯಾಪಾರವನ್ನು ಪುನಾರಂಭಿಸುತ್ತಿರುವ ಉದ್ಯಮ ಸಂಸ್ಥೆಗಳು ರೋಗ ಹರಡದಂತೆ ಸಾಕಷ್ಟು ಎಚ್ಚರಿಕೆ ವಹಿಸುತ್ತಿದ್ದು, ಮರ್ಸಿಡಿಸ್ ಬೆಂಝ್ ಕೂಡಾ ಇದೀಗ ಆನ್‌ಲೈನ್ ಕಾರು ಮಾರಾಟ ಮಳಿಗೆಗೆ ಚಾಲನೆ ನೀಡಿದೆ.

ಆನ್‌ಲೈನ್ ಮೂಲಕವೇ ಕಾರು ಮಾರಾಟ ಆರಂಭಿಸಿದ ಬೆಂಝ್

ಡಿಜಿಟಲ್ ಪ್ಲ್ಯಾಟ್‌‌ಫಾರ್ಮ್ ಮೂಲಕವೇ ಕಾರು ಮಾರಾಟ ಪ್ರಕ್ರಿಯೆಗಳನ್ನು ಕೈಗೊಳ್ಳಲಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಗ್ರಾಹಕರ ಮನೆ ಬಾಗಿಲಿಗೆ ಕಾರು ಉತ್ಪನ್ನಗಳನ್ನು ತಲುಪಿಸಲಿದ್ದು, ಈ ವೇಳೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ತೆಗದುಕೊಳ್ಳಲಿದೆ.

ಆನ್‌ಲೈನ್ ಮೂಲಕವೇ ಕಾರು ಮಾರಾಟ ಆರಂಭಿಸಿದ ಬೆಂಝ್

ಹೊಸ ಸುರಕ್ಷಾ ನಿಯಮದಡಿ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಯೊಂದಿಗೆ ಉತ್ಪನ್ನಗಳನ್ನು ತಲುಪಿಸುವುದರ ಜೊತೆಗೆ ಉದ್ಯೋಗಿಗಳಿಗೂ ಗರಿಷ್ಠ ಸುರಕ್ಷತೆ ಒದಗಿಸಲಿರುವ ಬೆಂಝ್ ಕಂಪನಿಯು ಆರ್ಥಿಕ ಸಂಕಷ್ಟದಿಂದ ಹೊರಬರುವ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಆನ್‌ಲೈನ್ ಮೂಲಕವೇ ಕಾರು ಮಾರಾಟ ಆರಂಭಿಸಿದ ಬೆಂಝ್

ಇನ್ನು ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲೂ ಭಾಗಿಯಾಗಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಮುಂಬೈನಲ್ಲಿ ಆಸ್ಪತ್ರೆಯೊಂದರ ನಿರ್ಮಾಣದ ಹೊಣೆಹೊತ್ತಿದ್ದು, ಪಿಎಂ ಪರಿಹಾರ ನಿಧಿಗೂ ಭಾರೀ ಪ್ರಮಾಣದ ದೇಣಿಗೆ ನೀಡಿದೆ.

ಆನ್‌ಲೈನ್ ಮೂಲಕವೇ ಕಾರು ಮಾರಾಟ ಆರಂಭಿಸಿದ ಬೆಂಝ್

ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ವಿವಿಧ ರಾಜ್ಯ ಸರ್ಕಾರಗಳಿಗೆ ವಿತರಣೆ ಮಾಡುತ್ತಿವೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಆನ್‌ಲೈನ್ ಮೂಲಕವೇ ಕಾರು ಮಾರಾಟ ಆರಂಭಿಸಿದ ಬೆಂಝ್

ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತುನೀಡಿರುವ ಆಟೋ ಉತ್ಪಾದನಾ ಕಂಪನಿಗಳು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ‍್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಉತ್ಪಾದನೆ ಮಾಡುತ್ತಿವೆ.

ಆನ್‌ಲೈನ್ ಮೂಲಕವೇ ಕಾರು ಮಾರಾಟ ಆರಂಭಿಸಿದ ಬೆಂಝ್

ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಆನ್‌ಲೈನ್ ಮೂಲಕವೇ ಕಾರು ಮಾರಾಟ ಆರಂಭಿಸಿದ ಬೆಂಝ್

ಈ ಹಿನ್ನಲೆಯಲ್ಲಿ ಸದ್ಯ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಗರಿಷ್ಠ ಸಹಾಯ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕಾರಣವಾಗಿದೆ.

Most Read Articles

Kannada
English summary
Mercedes-Benz India Starts Selling Cars Online Amidst COVID-19. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X