ಮುಂದಿನ ಎರಡು ವರ್ಷಗಳಲ್ಲಿ ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಹೆಚ್ಚಿಸಲಾಗುತ್ತಿದೆ.

ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. 2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ಮತ್ತಷ್ಟು ಇವಿ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿವೆ.

ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‌ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ದುಬಾರಿ ಬೆಲೆ ನಡುವೆಯು ಹೊಸ ಇವಿ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ಈ ನಿಟ್ಟಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಬಿಡುಗಡೆ ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಯಲ್ಲಿರುವ ಪ್ರಮುಖ ಕಾರು ಮಾದರಿಗಳನ್ನು ಎಲೆಕ್ಟ್ರಿಕ್ ಆವೃತ್ತಿಗಳನ್ನಾಗಿ ಬಿಡುಗಡೆಗೊಳಿಸಲು ಯೋಜನೆ ರೂಪಿಸಲಾಗಿದೆ.

ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ಜೊತೆಗೆ ಹಲವು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳ ಕಾನ್ಸೆಪ್ಟ್ ಆವೃತ್ತಿಯೊಂದಿಗೆ ರೋಡ್ ಟೆಸ್ಟಿಂಗ್ ಕೈಗೊಂಡಿರುವ ಮರ್ಸಿಡಿಸ್ ಬೆಂಝ್ ಕಂಪನಿಯು ಮುಂಬರುವ 2023ರ ವೇಳೆಗೆ ಒಟ್ಟು 6 ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಮಾರಾಟ ಹೊಂದಿರುವ ಗುರಿಹೊಂದಿದ್ದು, ಇದಕ್ಕೆ ಪೂರಕವಾಗಿ ಮಾರುಕಟ್ಟೆ ಅಧ್ಯಯನ ನಡೆಸುವ ಮೂಲಕ ಗ್ರಾಹಕರ ಬೇಡಿಕೆಯೆಂತೆ ಹೊಸ ತಂತ್ರಜ್ಞಾನ ಸೌಲಭ್ಯದೊಂದಿಗೆ ಹೊಸ ಕಾರುಗಳನ್ನು ಸಿದ್ದಪಡಿಸುತ್ತಿದೆ.

ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ಬಿಡುಗಡೆಯಾಗಲಿರುವ ಮರ್ಸಿಡಿಸ್ ಬೆಂಝ್ ಹೊಸ ಎಲೆಕ್ಟ್ರಿಕ್ ಕಾರುಗಳ ಪಟ್ಟಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್‌ಯುವಿ, ಸೆಡಾನ್, ಎಂಪಿವಿ ಮತ್ತು ಸೂಪರ್ ಕಾರು ಮಾದರಿಗಳು ಸಹ ಒಳಗೊಂಡಿದ್ದು, ಹೊಸ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿರುವ ಇಕ್ಯೂಸಿ 400 ಮಾದರಿಗಿಂತಲೂ ಹೊಸ ಮಾದರಿಯ ತಂತ್ರಜ್ಞಾನ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ಇನ್ನು ಮರ್ಸಿಡಿಸ್ ನಿರ್ಮಾದ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯಾಗಿರುವ ಇಕ್ಯೂಸಿ 400 ಆವೃತ್ತಿಯ ಹಲವು ವಿಶೇಷತೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಇಕ್ಯೂಸಿ 400 ಎಲೆಕ್ಟ್ರಿಕ್ ಎಸ್‍ಯುವಿಯು ಒಂದು ಬಾರಿ ಚಾರ್ಜ್ ಮಾಡಿದಲ್ಲಿ ಗರಿಷ್ಠ 470 ಕಿ.ಮೀ ಮೈಲೇಜ್ ಹಿಂದಿರುಗಿಸುವ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ನೀಡುತ್ತದೆ.

ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ಇಕ್ಯೂಸಿಯಲ್ಲಿನ ಫುಲ್ ಎಲೆಕ್ಟ್ರಿಕ್ ಪವರ್‌ಟ್ರೇನ್ ಮಾದರಿಯು 405-ಬಿಹೆಚ್‌ಪಿ ಪವರ್ ಮತ್ತು 765-ಎನ್ಎ ಟಾರ್ಕ್ ಉತ್ಪಾದಿಸಲಿದ್ದು, ಕೇವಲ 5.1 ಸೆಕೆಂಡುಗಳಲ್ಲಿ ಸೊನ್ನೆಯಿಂದ ನೂರು ಕಿ.ಮೀ ವೇಗದಲ್ಲಿ ಕ್ರಮಿಸುತ್ತದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ಜೊತೆಗೆ 4x4 ಡ್ರೈವ್ ಸಿಸ್ಟಂ ಹೊಂದಿರುವ ಹೊಸ ಕಾರು ಮಾದರಿಯು ಇಕೋ, ಕಂಫರ್ಟ್, ಡೈನಾಮಿಕ್ ಮತ್ತು ಇಂಡಿವಿಚ್ಯೂಲ್ ಎಂಬ ಡ್ರೈವಿಂಗ್ ಮೋಡ್ ಗಳನ್ನು ಒಳಗೊಂಡಿದ್ದು, ಚಾರ್ಜಿಂಗ್ ಸೌಲಭ್ಯಕ್ಕಾಗಿ ಇಕ್ಯೂಸಿ 400 ಮಲ್ಟಿಪಲ್ ಚಾರ್ಜಿಂಗ್ ಆಯ್ಕೆಗಳನ್ನು ಹೊಂದಿದೆ.

ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ವಾಲ್ ಸಾಕೆಟ್ ಚಾರ್ಜರ್ ಮಾಡಬಹುದಾದರೆ ಸಂಪೂರ್ಣವಾಗಿ ಚಾರ್ಜ್ ಆಗಲು ಸುಮಾರು 20 ಗಂಟೆಗಳನ್ನು ತೆಗೆದುಕೊಳ್ಳಲಿದ್ದು, ಎಸಿ ಚಾರ್ಜರ್ ಮೂಲಕ ಚಾರ್ಜ್ ಮಾಡಿದಲ್ಲಿ ಕನಿಷ್ಠ 10 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಹಾಗೆಯೇ ಹೈ ಸ್ಪೀಡ್ ಚಾರ್ಜರ್ ಮೂಲಕ ಚಾರ್ಜ್ ಮಾಡಿದ್ದಲ್ಲಿ ಕನಿಷ್ಠ 90 ನಿಮಿಷ ತೆಗೆದುಕೊಳ್ಳಲಿದ್ದು, ಹೈಸ್ಪೀಡ್ ಚಾರ್ಜಿಂಗ್ ಸೌಲಭ್ಯಕ್ಕಾಗಿ ಹೆವಿ ಡ್ಯೂಟಿ ಲೈನ್ಸ್ ಪಡೆಯಬೇಕಾಗುತ್ತದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಆರು ಹೊಸ ಇವಿ ಕಾರು ಬಿಡುಗಡೆ ಮಾಡಲಿದೆ ಮರ್ಸಿಡಿಸ್ ಬೆಂಝ್

ಈ ಮೂಲಕ ಎಲೆಕ್ಟ್ರಿಕ್ ಎಸ್‌ಯುವಿ ಕಾರುಗಳಲ್ಲೇ ಹಲವಾರು ಐಷಾರಾಮಿ ಫೀಚರ್ಸ್ ಹೊಂದಿರುವ ಹೊಸ ಕಾರು ದೆಹಲಿ ಎಕ್ಸ್‌‌ಶೋರೂಂ ಪ್ರಕಾರ ರೂ. 99.30 ಲಕ್ಷ ಬೆಲೆ ಹೊಂದಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಕಾರುಗಳು ಮಧ್ಯಮ ಕ್ರಮಾಂಕದಲ್ಲೂ ಬಿಡುಗಡೆಯಾಗುವ ನೀರಿಕ್ಷೆಗಳಿವೆ.

Most Read Articles

Kannada
English summary
Mercedes Benz Planning To Launch 6 New EVs Within 2 Years. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X