ಭಾರತದಲ್ಲಿ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಕಾರು

ಜರ್ಮನಿಯ ಐಷಾರಾಮಿ ಕಾರು ತಯಾರಕ ಕಂಪನಿ ಮರ್ಸಿಡಿಸ್ ಬೆಂಝ್ ಹೊಸ 10 ಮಾದರಿಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದಾಗಿ ಹೇಳಿದರು. ಇದರಲ್ಲಿ ಬಹುನಿರೀಕ್ಷಿತ ಹೊಸ ಇಕ್ಯೂಸಿ ಎಲೆಕ್ಟ್ರಿಕ್ ಕಾರು ಕೂಡ ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಕಾರು

ಕರೋನಾ ವೈರಸ್ ಭೀತಿಯಿಂದ ಹಲವಾರು ಕಾರು ತಯಾರಕ ಕಂಪನಿಗಳು ತಮ್ಮ ಸರಣಿಯಲ್ಲಿರುವ ಕಾರುಗಳ ಬಿಡುಗಡೆಯನ್ನು ಮುಂದೂಡಲಾಗಿದೆ. ಆದರೆ ಐಷಾರಾಮಿ ಕಾರು ತಯಾರಕ ಕಂಪನಿ ಮರ್ಸಿಡಿಸ್ ಬೆಂಝ್ ಕಂಪನಿಯು ಮಾತ್ರ ಇಕ್ಯೂಸಿ ಎಲೆಕ್ಟ್ರಿಕ್ ಕಾರು ಬಿಡುಗಡೆಯನ್ನು ಮುಂದಿನ ವರ್ಷಕ್ಕೆ ಮುಂದೂಡಿಕೆ ಮಾಡವುದಿಲ್ಲವೆಂದು ಸ್ಪಷ್ಟಪಡಿಸಿದೆ. ಈ ವರ್ಷವೇ ಭಾರತದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮರ್ಸಿಡಿಸ್ ಬೆಂಝ್ ಕಂಪನಿಯು ಖಚಿತಪಡಿಸಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಕಾರು

ದೇಶಿಯ ಮಾರುಕಟ್ಟೆಯಲ್ಲಿರುವ ಐಷಾರಾಮಿ ಕಾರುಗಳ ಪೈಕಿ ಮರ್ಸಿಡಿಸ್ ಬೆಂಝ್ ಕಂಪನಿಯ ಕಾರುಗಳು ಅಗ್ರಸ್ಥಾನದಲ್ಲಿವೆ. ಇದರ ಜೊತೆಗೆ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮರ್ಸಿಡಿಸ್ ಬೆಂಝ್ ಕಂಪನಿಯೂ ಸಹ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುತ್ತಿದೆ.

MOST READ: ಬಿಎಸ್-6 ಮಹೀಂದ್ರಾ ಸ್ಕಾರ್ಪಿಯೋ ಎಸ್‍‍‍ಯುವಿಯ ಬೆಲೆ ಮಾಹಿತಿ ಬಹಿರಂಗ

ಭಾರತದಲ್ಲಿ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಕಾರು

ಮರ್ಸಿಡಿಸ್ ಬೆಂಝ್ ಕಂಪನಿಯು ತನ್ನ ಇಕ್ಯೂಸಿ ಎಲೆಕ್ಟ್ರಿಕ್ ಕಾರನ್ನು ಭಾರತದಲ್ಲಿ ಅನಾವರಣಗೊಳಿಸಿತ್ತು. ಇಕ್ಯೂಸಿ ಬ್ರಾಂಡ್‍‍ನಡಿಯಲ್ಲಿ ಕಂಪನಿಯು ಹಲವಾರು ಕಾರುಗಳನ್ನು ಮಾರಾಟ ಮಾಡಲಿದೆ. ಮತ್ತೊಂದು ಐಷಾರಾಮಿ ಕಾರು ತಯಾರಕ ಕಂಪನಿಯಾದ ಆಡಿ ಸಹ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಕಾರು

ಆದರೆ ಈ ಎಲೆಕ್ಟ್ರಿಕ್ ಕಾರುಗಳನ್ನು ಯಾವಾಗ ಬಿಡುಗಡೆಗೊಳಿಸಲಾಗುವುದು ಎಂಬುದನ್ನು ಆಡಿ ಕಂಪನಿಯು ಬಹಿರಂಗಪಡಿಸಿಲ್ಲ. ಮರ್ಸಿಡಿಸ್ ಬೆಂಝ್ ಕಂಪನಿಯು ಇಕ್ಯೂಸಿ ಎಲೆಕ್ಟ್ರಿಕ್ ಕಾರ್ ಅನ್ನು ಜಾಗತಿಕವಾಗಿ ಮೊದಲ ಬಾರಿಗೆ 2016ರ ಪ್ಯಾರಿಸ್ ಮೋಟಾರ್ ಶೋದಲ್ಲಿ ಅನಾವರಣಗೊಳಿಸಿತ್ತು.

MOST READ: ಭಾರತದಲ್ಲಿ ಬಿಡುಗಡೆಯಾಯ್ತು ಹೊಸ ಮರ್ಸಿಡಿಸ್ ಬೆಂಝ್ ಇ 350ಡಿ ಕಾರು

ಭಾರತದಲ್ಲಿ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಕಾರು

ಮರ್ಸಿಡಿಸ್ ಕಂಪನಿಯು ವಿವಿಧ ಎಲೆಕ್ಟ್ರಿಕ್ ಕಾರ್ ಟೆಕ್ನಾಲಜಿಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇಕ್ಯೂಸಿ ಎಲೆಕ್ಟ್ರಿಕ್ ಕಾರ್ ಅನ್ನು ಮರ್ಸಿಡಿಸ್ ಬೆಂಝ್ ಕಂಪನಿಯ ಜಿ‍ಎಲ್‍‍ಸಿ ಕಾರಿನ ಆಧಾರದ ಮೇಲೆ ತಯಾರಿಸಲಾಗಿದೆ. ಈ ಕಾರಿನಲ್ಲಿರುವ ಎಲೆಕ್ಟ್ರಿಕ್ ಮೋಟರ್ 402 ಬಿ‍‍‍ಹೆಚ್‍‍ಪಿ ಪವರ್ ಹಾಗೂ 760 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಕಾರು

ಇಕ್ಯೂಸಿ ಎಲೆಕ್ಟ್ರಿಕ್ ಕಾರಿನಲ್ಲಿ 80 ಕಿ.ವ್ಯಾ ಬ್ಯಾಟರಿಯನ್ನು ಅಳವಡಿಸಲಾಗಿದೆ. ಈ ಬ್ಯಾಟರಿಯನ್ನು ಪೂರ್ತಿಯಾಗಿ ಚಾರ್ಜ್ ಮಾಡಿದರೆ 400 ಕಿ.ಮೀಗಳವರೆಗೆ ಚಲಿಸುತ್ತದೆ. ಈ ಕಾರು ಕೇವಲ 5.1 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 180 ಕಿ.ಮೀಗಳಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಭಾರತದಲ್ಲಿ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಕಾರು

ಇಕ್ಯೂಸಿ ಎಲೆಕ್ಟ್ರಿಕ್ ಕಾರಿನ ಬಿಡುಗಡೆಯ ನಂತರ ಮರ್ಸಿಡಿಸ್ ಬೆಂಝ್ ಕಂಪನಿಯು ಜಿ ಕ್ಲಾಸಿನ ಎಲೆಕ್ಟ್ರಿಕ್ ಲಗ್ಷುರಿ ಎಸ್‍‍ಯುವಿ ಹಾಗೂ ವಿ ಕ್ಲಾಸ್ ಐಷಾರಾಮಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಮರ್ಸಿಡಿಸ್ ಬೆಂಝ್ ಇಕ್ಯೂಸಿ ಎಲೆಕ್ಟ್ರಿಕ್ ಕಾರು

ಇದರ ಜೊತೆಗೆ ಕಂಪನಿಯು ತನ್ನ ಜನಪ್ರಿಯ ಎಸ್ ಕ್ಲಾಸ್ ಕಾರ್ ಅನ್ನು ಸಹ ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಬಿಡುಗಡೆಗೊಳಿಸಲಿದೆ. ಜರ್ಮನ್ ಮೂಲದ ಮರ್ಸಿಡಿಸ್ ಬೆಂಝ್ ಕಂಪನಿಯು ಭಾರತದಲ್ಲಿ ಶೀಘ್ರದಲ್ಲೇ ಇಕ್ಯೂಸಿ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲಿದೆ.

More from DriveSpark

Article Published On: Tuesday, April 28, 2020, 19:12 [IST]
English summary
Mercedes EQC Launch Unaffected By The Coronavirus Crisis. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+