Just In
Don't Miss!
- News
ಮತ್ತೊಂದು ದಾಖಲೆಯ ಮಟ್ಟವನ್ನ ತಲುಪಿದ ಪೆಟ್ರೋಲ್, ಡೀಸೆಲ್ ದರ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Movies
ರೈತರ ಪ್ರತಿಭಟನೆ: ಕೆಂಪುಕೋಟೆ ಮೇಲೆ ಭಾವುಟ ಹಾರಿಸಿದ್ದು ಸಿನಿಮಾ ನಟ ದೀಪ್ ಸಿಧು?
- Lifestyle
ಹೊಟ್ಟೆಯ ಬಲಭಾಗದಲ್ಲಿ ನೋವು, ಈ ತೊಂದರೆಗಳಿರಬಹುದು
- Sports
ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನಪ್ರಿಯ ಎಂಜಿ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ
ಭಾರತೀಯ ಮಾರುಕಟ್ಟೆಯಲ್ಲಿ ಎಂಜಿ ಮೋಟಾರ್ ಸಂಸ್ಥೆಯು ಬಿಡುಗಡೆಗೊಳಿಸಿದ ಮೊದಲ ಹೆಕ್ಟರ್ ಮಾದರಿಯು ಮಿಡ್ ಎಸ್‍ಯುವಿ ವಿಭಾಗದಲ್ಲಿ ಹೊಸ ಸಂಚಲನವನ್ನು ಮೂಡಿಸಿತು. ಹೆಕ್ಟರ್ ಬಳಿಕ ಎಂಜಿ ಸಂಸ್ಥೆಯು ತನ್ನ ಇತರ ಜನಪ್ರಿಯ ಎಸ್‍ಯುವಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು.

ಬ್ರಿಟಿಷ್ ಕಾರು ತಯಾರಕ ಕಂಪನಿಯಾದ ಎಂಜಿ ತನ್ನ ಹೆಕ್ಟರ್ ಎಸ್‍ಯುವಿಯ ಬಳಿಕ ಭಾರತದಲ್ಲಿ ತನ್ನ ಪೋರ್ಟ್ಫೋಲಿಯೊದಲ್ಲಿರುವ ಹೆಕ್ಟರ್ ಪ್ಲಸ್, ಝಡ್ಎಸ್ ಇವಿ ಮತ್ತು ಗ್ಲೋಸ್ಟರ್ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಿದರು. ಇದೀಗ ಎಂಜಿ ಮೋಟಾರ್ ಕಂಪನಿಯುತನ್ನ ಗ್ಲೋಸ್ಟರ್ ಎಸ್‍ಯುವಿಯನ್ನು ಹೊರತುಪಡಿಸಿ ಉಳಿದ ಮೂರು ಮಾದರಿಗಳ ಮೇಲೆ ಭರ್ಜರಿ ಆಫರ್ ಅನ್ನು ಘೋಷಿಸಿದೆ. ಎಂಜಿ ಕಾರುಗಳ ಮೇಲಿನ ಆಫರ್ ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ.

ಎಂಜಿ ಹೆಕ್ಟರ್ ಮತ್ತು ಹೆಕ್ಟರ್ ಪ್ಲಸ್ ಎಸ್‍ಯುವಿಗಳ ಮೇಲೆ ರೂ. 25 ಸಾವಿರಗಳವರೆಗೆ ಎಕ್ಸ್‌ಚೆಂಜ್ ಬೋನಸ್ ಅನ್ನು ನೀಡಲಾಗುತ್ತಿದೆ. ಇನ್ನು ಈ ಎಸ್‍ಯುವಿಗಳಿಗೆ 3 ವರ್ಷಗಳ ಅನ್ಯೂವಲ್ ಮೈಂಟೇನಸ್ ಪ್ಯಾಕೇಜ್‌ಗಳನ್ನು (ಕ್ಲಾಸಿಕ್, ಕ್ಲಾಸಿಕ್ 360, ಪ್ರೀಮಿಯಂ ಮತ್ತು ಪ್ರೀಮಿಯಂ 360) ಒಳಗೊಂಡಿರುವ ಎಂಜಿ ಶೀಲ್ಡ್ ಯೋಜನೆಯ ಪ್ರಯೋಜನಗಳನ್ನು ಸಹ ಗ್ರಾಹಕರು ಪಡೆಯಬಹುದು.
MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಇನ್ನು ಎಂಜಿ ಝಡ್ಎಸ್ ಎಲೆಕ್ಟ್ರಿಕ್ ಕಾರಿನ ಮೇಲೆ ರೂ.40,000 ರಿಯಾಯಿತಿಯೊಂದಿಗೆ ರೂ.25 ಸಾವಿರಗಳ ಎಕ್ಸ್‌ಚೆಂಜ್ ಬೋನಸ್ ಮತ್ತು 3 ವರ್ಷಗಳ ಅನ್ಯೂವಲ್ ಮೈಂಟೇನಸ್ ಪ್ಯಾಕೇಜ್‌ಗಳನ್ನು ಒಳಗೊಂಡಿರುವ ಎಂಜಿ ಶೀಲ್ಡ್ ಯೋಜನೆಯ ಪ್ರಯೋಜನಗಳನ್ನು ಸಹ ಗ್ರಾಹಕರು ಪಡೆಯಬಹುದು.

ಇನ್ನು ಭಾರತೀಯ ಮಾರುಕಟ್ಟೆಯಲ್ಲಿ 2020ರ ಅಕ್ಟೋಬರ್ ತಿಂಗಳ ಮಾರಾಟದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದೆ ಎಂದು ಎಂಜಿ ಮೋಟಾರ್ ಇಂಡಿಯಾ ಕಂಪನಿ ಮಾಸಿಕ ವರದಿ ಪ್ರಕಟಿಸಿದೆ. ಭಾರತೀಯ ಮಾರುಕಟ್ಟೆಯಲ್ಲಿ ಎಂಜಿ ಎಸ್‍ಯುವಿಗಳು ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರಾಟ ವರದಿ ಪ್ರಕಾರ, ಕಂಪನಿಯು 2020ರ ಅಕ್ಟೋಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ 3,750 ಯುನಿಟ್‌ಗಳನ್ನು ಮಾರಾಟ ಮಾಡಿಗೊಳಿಸಿವೆ. ಮಾಸಿಕ ಮಾರಾಟದ ದೃಷ್ಟಿಯಿಂದ ಇದು ಶೇ.48 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಎಂಜಿ ಮೋಟಾರ್ 2,537 ಯುನಿಟ್‌ಗಳನ್ನು ಮಾರಾಟ ಗೊಳಿಸಿತ್ತು.

2019ರ ಅಕ್ಟೋಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎಂಜಿ ಕಂಪನಿಯು 3,536 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಕಳೆದ ವರ್ಷದ ಅಕ್ಟೋಬರ್ ತಿಂಗಳ ಮಾರಾಟವನ್ನು ಈ ವರ್ಷದ ಮಾರಾಟಕ್ಕೆ ಹೋಲಿಸಿದರೆ ಶೇ.6 ರಷ್ಟು ಕನಿಷ್ಠ ಬೆಳವಣಿಗೆಯನ್ನು ದಾಖಲಿಸಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ. ಜೆಡ್ಎಸ್ ಎಲೆಕ್ಟ್ರಿಕ್ ಜೊತೆಗೆ ಜೆಡ್ಎಸ್ ಪೆಟ್ರೋಲ್ ಮಾದರಿಯನ್ನು ಬಿಡುಗಡೆಗೊಳಿಸಲು ಎಂಜಿ ಸಜ್ಜಾಗುತ್ತಿದೆ.

ಎಂಜಿ ಮೋಟಾರ್ ಇಂಡಿಯಾ ತನ್ನ ಎಲ್ಲಾ ಮಾದರಿಗಳಿಗೆ ಭಾರತೀಯ ಮಾರುಕಟ್ಟೆಯ ಗ್ರಾಹಕರಿಂದ ಅತ್ಯಂತ ಸಕಾರಾತ್ಮಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಕಂಪನಿಯು ಮಾರಾಟದಲ್ಲಿ ಈಗ ತಿಂಗಳಿಗೊಮ್ಮೆ ಸುಧಾರಿಸುತ್ತಿದೆ