ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್

ಎಂಜಿ ಮೋಟಾರ್ ಕಂಪನಿಯು ಮುಂಬರುವ ನವೆಂಬರ್ ಹೊತ್ತಿಗೆ ಬಹುನೀರಿಕ್ಷಿತ ಎಸ್‌ಯುವಿ ಕಾರು ಮಾದರಿಯಾದ ಗ್ಲೊಸ್ಟರ್ ಆವೃತ್ತಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಕಾರು ಬಲಿಷ್ಠ ಎಂಜಿನ್ ಆಯ್ಕೆಯೊಂದಿಗೆ ರಸ್ತೆಗಿಳಿಯಲಿದೆ.

ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಗ್ಲೊಸ್ಟರ್

ಮಾಹಿತಿಗಳ ಪ್ರಕಾರ, ಹೊಸ ಎಂಜಿ ಗ್ಲೊಸ್ಟರ್ ಎಸ್‌ಯುವಿ ಮಾದರಿಯು ಜೆಡ್ಎಫ್ ನಿರ್ಮಾಣದ 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 2.0-ಲೀಟರ್ ಟ್ವಿನ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದೆ. ಹೊಸ ಎಂಜಿನ್ ಮಾದರಿಯು 215-ಬಿಎಚ್‌ಪಿ, 480-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಯಲ್ಲೇ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದ್ದು, ಹೊಸ ಕಾರಿನಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುತ್ತಿಲ್ಲ ಎನ್ನಲಾಗಿದೆ.

ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಗ್ಲೊಸ್ಟರ್

ಹಾಗೆಯೇ ಗ್ಲೊಸ್ಟರ್ ಎಸ್‌ಯುವಿ ಕಾರು ಮಾದರಿಯು ಹೊಸ ತಲೆಮಾರಿನ ಆಟೋ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಳಿಸುತ್ತಿದ್ದು, ಆಟೋ ಪಾರ್ಕ್ ಅಸಿಸ್ಟ್, ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೇರಿದಂತೆ ಹಲವಾರು ಸುಧಾರಿತ ತಾಂತ್ರಿಕ ಅಂಶಗಳನ್ನು ಹೊಂದಿದೆ.

ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಗ್ಲೊಸ್ಟರ್

360 ಡಿಗ್ರಿ ಕ್ಯಾಮೆರಾ ಸೌಲಭ್ಯದೊಂದಿಗೆ ಸೆನ್ಸಾರ್ ಮೂಲಕ ಆಟೋ ಪಾರ್ಕ್ ಅಸಿಸ್ಟ್ ಸೌಲಭ್ಯವನ್ನು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಎಂಜಿ ಗ್ಲೊಸ್ಟರ್ ಕಾರು ಮಾದರಿಯು ಎಸ್‌ಯುವಿ ಪ್ರಿಯರ ಆಯ್ಕೆ ಮುಂಚೂಣಿ ಸಾಧಿಸಲಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಗ್ಲೊಸ್ಟರ್

ಹೊಸ ಕಾರಿನಲ್ಲಿ ಐಷಾರಾಮಿ ಟೊಯೊಟಾ ಪ್ರಾಡೋ ಮತ್ತು ವೊಲ್ವೋ ಎಕ್ಸ್‌ಸಿ 90 ಕಾರುಗಳಲ್ಲಿ ಕಂಡುಬರುವ ಅಡ್ವಾನ್ಸ್ ಫ್ರಂಟ್ ಕುಲಿಷನ್ ಡಿಟೆಕ್ಟ್ ತಂತ್ರಜ್ಞಾನವನ್ನು ಸಹ ಜೋಡಣೆ ಮಾಡಲಾಗಿದೆ ಎನ್ನಲಾಗಿದ್ದು, ಮುಂಬರುವ ಅಕ್ಟೋಬರ್‌ ಕೊನೆಯಲ್ಲಿ ಅಥವಾ ನವೆಂಬರ್ ಆರಂಭದಲ್ಲಿ ಗ್ಲೊಸ್ಟರ್ ಕಾರು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಗ್ಲೊಸ್ಟರ್

ಹೆಕ್ಟರ್, ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹೆಕ್ಟರ್ ಪ್ಲಸ್ ನಂತರ ಬಿಡುಗಡೆಯಾಗುತ್ತಿರುವ ಗ್ಲೊಸ್ಟರ್ ಕಾರು ಮೊದಲ ಮೂರು ಕಾರುಗಳಿಂತಲೂ ಐಷಾರಾಮಿ ಫೀಚರ್ಸ್‌ನೊಂದಿಗೆ ದುಬಾರಿ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಗ್ರಾಹಕರ ಬೇಡಿಕೆ ಆಧಾರದ ಮೇಲೆ ಅಡ್ವಾನ್ಸ್ 4x4 ಡ್ರೈವ್ ಸಿಸ್ಟಂ ಜೋಡಣೆ ಹೊಂದಿರಲಿದೆ.

ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಗ್ಲೊಸ್ಟರ್

ಗ್ಲೊಸ್ಟರ್ ಕಾರು ಟೊಯೊಟಾ ಐಷಾರಾಮಿ ಕಾರು ಆವೃತ್ತಿಯಾಗಿರುವ ಲ್ಯಾಂಡ್ ಕ್ರೂಸರ್ 200 ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಗಾತ್ರ ಹೊಂದಿದ್ದು, 5,100-ಎಂಎಂ ಉದ್ದ, 1,932-ಎಂಎಂ ಅಗಲ, 1,875-ಎಂಎಂ ಎತ್ತರ, 2,950-ಎಂಎಂ ವೀಲ್ಹ್ ಬೆಸ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಗ್ಲೊಸ್ಟರ್

ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಲ್ಯಾಡರ್ ಫ್ರೇಮ್ ಚಾರ್ಸಿ ಮೇಲೆ ನಿರ್ಮಾಣವಾಗಿರುವ ಹೊಸ ಕಾರಿನಲ್ಲಿ ಸಂಜ್ಞೆ ಮೂಲಕ ನಿಯಂತ್ರಣ ಮಾಡಬಹುದಾದ ಡ್ಯಾಶ್‌ಬೋರ್ಡ್ ಮತ್ತು ಟೈಲ್‌ಗೆಟ್, ಆ್ಯಂಬಿಯೆಂಟ್ ಲೈಟಿಂಗ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೊಲ್, 8-ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, 12.3-ಇಂಚಿನ ಟಚ್ ‌ಸ್ಕ್ರೀನ್ ಇನ್ಪೊಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಗ್ಲೊಸ್ಟರ್

ಹಾಗೆಯೇ ವೆಂಟಿಲೆಟೆಡ್ ಲೆದರ್ ಸೀಟುಗಳು, ಹಿಟೆಡ್ ವಿಂಗ್ ಮಿರರ್, ಪನೊರಮಿಕ್ ಸನ್‌ರೂಫ್, 64 ಬಣ್ಣಗಳ ಆ್ಯಂಬಿಯೆಂಟ್ ಲೈಟಿಂಗ್ಸ್, 12-ಸ್ಪೀಕರ್ಸ್, ಕ್ವಾಡ್ ಎಕ್ಸಾಸ್ಟ್ ಸಿಸ್ಟಂ ಮತ್ತು 19-ಇಂಚಿನ ಅಲಾಯ್ ವೀಲ್ಹ್ ಪಡೆದುಕೊಂಡಿದ್ದು, ಸ್ನೋ, ಸ್ಯಾಂಡ್, ಇಕೋ, ರಾಕ್ ಮತ್ತು ಸ್ಪೋರ್ಟ್ ಡ್ರೈವಿಂಗ್ ಮೋಡ್ ಹೊಂದಿದೆ.

ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಗ್ಲೊಸ್ಟರ್

6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಗ್ಲೊಸ್ಟರ್ ಕಾರಿನಲ್ಲಿ 2+2+2 ಮತ್ತು 2+2+3 ಮಾದರಿಯಲ್ಲಿ ಆಸನ ಸೌಲಭ್ಯವನ್ನು ಜೋಡಿಸಲಾಗಿದ್ದು, ಮಧ್ಯದಲ್ಲಿರುವ ಕ್ಯಾಪ್ಟನ್ ಆಸನದಲ್ಲಿ ಹಲವಾರು ಕಾರ್ ಕನೆಕ್ಟೆಡ್ ಸೌಲಭ್ಯಗಳೊಂದಿಗೆ ಅರಾಮಾದಾಯಕ ಪ್ರಯಾಣಕ್ಕಾಗಿ ಮಸಾಜ್ ಫೀಚರ್ಸ್ ನೀಡಲಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಟ್ವಿನ್ ಟರ್ಬೋ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ಗ್ಲೊಸ್ಟರ್

ಅಂದಾಜು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಮಾಹಿತಿಗಳ ಪ್ರಕಾರ, ಗ್ಲೊಸ್ಟರ್ ಎಸ್‌ಯುವಿ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.30 ಲಕ್ಷದಿಂದ ರೂ.35 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
English summary
MG Gloster Engine Specs Revealed Ahead Of Launch. Read in Kannada.
Story first published: Saturday, September 5, 2020, 13:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X