Just In
- 11 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 12 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 14 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 15 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್ಯುವಿ
ಎಂಜಿ ಗ್ಲೊಸ್ಟರ್ ಎಸ್ಯುವಿ ಆವೃತ್ತಿಯು ಭಾರತದಲ್ಲಿ ಬಿಡುಗಡೆಗಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು ಹೊಸ ಕಾರು ಈ ವರ್ಷದ ಅಗಸ್ಟ್ ಅಥವಾ ನವೆಂಬರ್ ಅಂತ್ಯಕ್ಕೆ ಬಿಡುಗಡೆಗೊಳ್ಳುವುದು ಬಹುತೇಕ ಖಚಿತವಾಗಿದೆ.
ಕಾರು ಮಾರಾಟದಲ್ಲಿ ಹೊಸ ಬದಲಾವಣೆಗೆ ಕಾರಣವಾಗಿರುವ ಎಂಜಿ ಮೋಟಾರ್ ಸಂಸ್ಥೆಯು ದೆಹಲಿ ಆಟೋ ಎಕ್ಸ್ಪೋದಲ್ಲಿ ಸುಮಾರು 14 ಹೊಸ ಕಾರು ಮಾದರಿಗಳನ್ನು ಪ್ರದರ್ಶನಗೊಳಿಸುವ ಮೂಲಕ ಹೊಸ ಸಂಚಲನ ಸೃಷ್ಠಿಸಿದ್ದು, ಇದರಲ್ಲಿ ಗ್ಲೊಸ್ಟರ್ ಎಸ್ಯುವಿ ಕೂಡಾ ಒಂದಾಗಿದೆ. ಫುಲ್ ಸೈಜ್ ಎಸ್ಯುವಿ ಮಾದರಿಗಳಿಂತಲೂ ಬಲಿಷ್ಠ ವಿನ್ಯಾಸ ಹೊಂದಿರುವ ಹೊಸ ಕಾರು ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯ ಸುಳಿವು ನೀಡಿದೆ.
ಹೊಸ ಗ್ಲೊಸ್ಟರ್ ಕಾರಿನ ಗಾತ್ರವು ಟೊಯೊಟಾ ಐಷಾರಾಮಿ ಕಾರು ಆವೃತ್ತಿಯಾಗಿರುವ ಲ್ಯಾಂಡ್ ಕ್ರೂಸರ್ 200 ಆವೃತ್ತಿಗಿಂತಲೂ ಹೆಚ್ಚಿದ್ದು, ಬರೋಬ್ಬರಿ 5,100 ಎಂಎಂ ಉದ್ದಳತೆ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.
ಸದ್ಯ ಅನಾವರಣಗೊಂಡಿರುವ ಗ್ಲೊಸ್ಟರ್ ಕಾರು ಚೀನಿ ಮಾರುಕಟ್ಟೆಯಲ್ಲಿ ಮ್ಯಾಕ್ಸಸ್ ಡಿ90 ಹೆಸರಿನೊಂದಿಗೆ ಮಾರಾಟವಾಗುತ್ತಿದ್ದು, ಎಂಜಿ ಮಾತೃಸಂಸ್ಥೆಯಾಗಿರುವ ಸೈಕ್ ಇದೀಗ ಮ್ಯಾಕ್ಸಸ್ ಡಿ90 ಕಾರು ಮಾದರಿಯನ್ನು ಹೊಸ ಹೆಸರಿನೊಂದಿಗೆ ಭಾರತದಲ್ಲಿ ಬಿಡುಗಡೆ ಮಾಡುತ್ತಿದೆ.
MOST READ: ಲಾಕ್ ಡೌನ್ ವೇಳೆ ಜಾಲಿ ರೈಡ್ ಮಾಡುತ್ತಿದ್ದ ಬೈಕ್ ಸವಾರನಿಗೆ ಕೊನೆಗೆ ಶಾಕ್..!
ಚೀನಿ ಮಾರುಕಟ್ಟೆಯಲ್ಲಿ ಮ್ಯಾಕ್ಸಸ್ ಸಂಸ್ಥೆಯು ಕೂಡಾ ಸೈಕ್ ಸಂಸ್ಥೆಯ ಅಡಿಯಲ್ಲೇ ಕಾರ್ಯನಿರ್ವಹಣೆ ಮಾಡುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗಳನ್ನು ಅರಿತಿರುವ ಸೈಕ್ ಸಂಸ್ಥೆಯು ಎಂಜಿ ಬ್ಯಾಡ್ಜ್ನೊಂದಿಗೆ ಕೆಲವು ಬದಲಾವಣೆಗಳನ್ನು ಮಾಡಿ ಗ್ಲೊಸ್ಟರ್ ಕಾರನ್ನು ಬಿಡುಗಡೆ ಮಾಡುತ್ತಿದೆ. ಫುಲ್ ಸೈಜ್ ಎಸ್ಯುವಿ ಆವೃತ್ತಿಯಾಗಿರುವ ಗ್ಲೊಸ್ಟರ್ ಕಾರು ಇದೇ ವರ್ಷ ನವೆಂಬರ್ನಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ಕಾರಿನ ಗಾತ್ರಕ್ಕೆ ತಕ್ಕಂತೆ ಬಲಿಷ್ಠ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳಲಿದೆ.
ಸದ್ಯ ಮಾರುಕಟ್ಟೆಯಲ್ಲಿರುವ ಮಾಕ್ಸಸ್ ಡಿ90 ಕಾರು 2.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ನೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಗ್ಲೊಸ್ಟರ್ ಕಾರು ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.
MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!
ಇದಲ್ಲದೇ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ನೀಡಲಾಗಿದ್ದು, ಲ್ಯಾಡರ್ ಫ್ರೇಮ್ ಚಾರ್ಸಿ ಮೇಲೆ ನಿರ್ಮಾಣವಾಗಿರುವ ಹೊಸ ಕಾರಿನಲ್ಲಿಹಾಗೆಯೇ ಹೊಸ ಕಾರಿನ ಒಳಭಾಗದಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್ಗಳಿದ್ದು, ಸಂಜ್ಞೆ ಮೂಲಕ ನಿಯಂತ್ರಣ ಮಾಡಬಹುದಾದ ಡ್ಯಾಶ್ಬೋರ್ಡ್ ಮತ್ತು ಟೈಲ್ಗೆಟ್, ಆ್ಯಂಬಿಯೆಂಟ್ ಲೈಟಿಂಗ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೊಲ್, 8-ಇಂಚಿನ ಮಲ್ಟಿ ಇನ್ಫಾರ್ಮೆಷನ್ ಡಿಸ್ಪ್ಲೇ, 12.3-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್ಮೆಂಟ್ ಸಿಸ್ಟಂ, ವೆಂಟಿಲೆಟೆಡ್ ಲೆದರ್ ಸೀಟುಗಳು, ಹಿಟೆಡ್ ವಿಂಗ್ ಮಿರರ್, ಪನೊರಮಿಕ್ ಸನ್ರೂಫ್ ಮತ್ತು ಕ್ವಾಡ್ ಎಕ್ಸಾಸ್ಟ್ ಸಿಸ್ಟಂ ಪಡೆದುಕೊಂಡಿದೆ.
7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಗ್ಲೊಸ್ಟರ್ ಕಾರಿನಲ್ಲಿ 2+2+3 ಮಾದರಿಯಲ್ಲಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಮಧ್ಯದಲ್ಲಿರುವ ಕ್ಯಾಪ್ಟನ್ ಆಸನದಲ್ಲಿ ಹಲವಾರು ಕಾರ್ ಕನೆಕ್ಟೆಡ್ ಸೌಲಭ್ಯಗಳೊಂದಿಗೆ ಅರಾಮಾದಾಯಕ ಪ್ರಯಾಣಕ್ಕಾಗಿ ಮಸಾಜ್ ಫೀಚರ್ಸ್ ನೀಡಲಾಗಿದೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು
ಅಂದಾಜು ಬೆಲೆ(ಎಕ್ಸ್ಶೋರೂಂ ಪ್ರಕಾರ)
ಮಾಹಿತಿಗಳ ಪ್ರಕಾರ, ಗ್ಲೊಸ್ಟರ್ ಎಸ್ಯುವಿ ಆವೃತ್ತಿಯು ಇದೇ ವರ್ಷ ಅಗಸ್ಟ್ ಅಥವಾ ನವೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 30 ಲಕ್ಷದಿಂದ ರೂ.35 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದೆ.
ಇನ್ನು ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಎಸ್ಯುವಿ, ಎಂಪಿವಿ, ಸೆಡಾನ್ ಮತ್ತು ಎಲೆಕ್ಟ್ರಿಕ್ ಕಾರನ್ನು ಪ್ರದರ್ಶನಗೊಳಿಸಿರುವ ಎಂಜಿ ಮೋಟಾರ್ಸ್ ಸಂಸ್ಥೆಯು ಇದೇ ವರ್ಷದಲ್ಲಿ ಮೂರು ಹೊಸ ಕಾರುಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ಹೆಕ್ಟರ್ ಪ್ಲಸ್ ಮತ್ತು 7 ಸೀಟರ್ ಎಂಪಿವಿ ಕಾರೊಂದು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿವೆ.