ಬಹುನೀರಿಕ್ಷಿತ ಎಂಜಿ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಲಾಕ್‌ಡೌನ್ ವಿನಾಯ್ತಿ ನಂತರ ಕಾರು ಮಾರಾಟವನ್ನು ಪುನಾರಂಭಿಸಿರುವ ಎಂಜಿ ಮೋಟಾರ್ ಕಂಪನಿಯು ಶೀಘ್ರದಲ್ಲೇ ಹೆಕ್ಟರ್ ಪ್ಲಸ್ ಎಸ್‌ಯುವಿ ಬಿಡುಗಡೆಯ ಸಿದ್ದತೆ ನಡೆಸಿದ್ದು, ಹೆಕ್ಟರ್ ಪ್ಲಸ್ ನಂತರ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಂಜಿ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಿಡುಗಡೆ

ಹೊಚ್ಚ ಹೊಸ ಗ್ಲೊಸ್ಟರ್ ಎಸ್‌ಯುವಿ ಕಾರು ಇದೇ ವರ್ಷ ಸೆಪ್ಟೆಂಬರ್ ಕೊನೆಯಲ್ಲಿ ಇಲ್ಲವೆ ಅಕ್ಟೋಬರ್‌ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಫುಲ್ ಸೈಜ್ ಎಸ್‌ಯುವಿ ಮಾದರಿಗಳಿಂತಲೂ ಬಲಿಷ್ಠ ವಿನ್ಯಾಸ ಹೊಂದಿರುವ ಹೊಸ ಕಾರು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಎಂಜಿ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಿಡುಗಡೆ

ಗ್ಲೊಸ್ಟರ್ ಕಾರಿನ ಗಾತ್ರವು ಟೊಯೊಟಾ ಐಷಾರಾಮಿ ಕಾರು ಆವೃತ್ತಿಯಾಗಿರುವ ಲ್ಯಾಂಡ್ ಕ್ರೂಸರ್ 200 ಆವೃತ್ತಿಗಿಂತಲೂ ಹೆಚ್ಚಿದ್ದು, 5,100-ಎಂಎಂ ಉದ್ದ, 1,932-ಎಂಎಂ ಅಗಲ, 1,875-ಎಂಎಂ ಎತ್ತರ, 2,950-ಎಂಎಂ ವೀಲ್ಹ್ ಬೆಸ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಎಂಜಿ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಿಡುಗಡೆ

ಸದ್ಯ ಚೀನಿ ಮಾರುಕಟ್ಟೆಯಲ್ಲಿರುವ ಮ್ಯಾಕ್ಸಸ್ ಡಿ90 ಮಾದರಿಯನ್ನೇ ಭಾರತದಲ್ಲಿ ಗ್ಲೊಸ್ಟರ್ ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿರುವ ಎಂಜಿ ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆ ಅನುಸಾರವಾಗಿ ಹಲವು ಬದಲಾವಣೆಗಳನ್ನು ಪರಿಚಯಿಸಿದೆ.

ಎಂಜಿ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಿಡುಗಡೆ

ಚೀನಿ ಮಾರುಕಟ್ಟೆಯಲ್ಲಿ ಮ್ಯಾಕ್ಸಸ್ ಕೂಡಾ ಎಂಜಿ ಮಾತೃಸಂಸ್ಥೆಯಾದ ಸೈಕ್ ಅಡಿಯಲ್ಲೇ ಕಾರ್ಯನಿರ್ವಹಣೆ ಮಾಡುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗಳನ್ನು ಅರಿತಿರುವ ಸೈಕ್ ಕಂಪನಿಯು ಎಂಜಿ ಬ್ಯಾಡ್ಜ್‌ನೊಂದಿಗೆ ಕೆಲವು ಬದಲಾವಣೆಗಳನ್ನು ಮಾಡಿ ಗ್ಲೊಸ್ಟರ್ ಹೆಸರಿನಲ್ಲಿ ಬಿಡುಗಡೆ ಮಾಡುತ್ತಿದೆ. ಫುಲ್ ಸೈಜ್ ಎಸ್‌ಯುವಿ ಆವೃತ್ತಿಯಾಗಿರುವ ಗ್ಲೊಸ್ಟರ್ ಕಾರು ಗಾತ್ರಕ್ಕೆ ತಕ್ಕಂತೆ ಬಲಿಷ್ಠ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳಲಿದೆ.

ಎಂಜಿ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಿಡುಗಡೆ

ಮಾಕ್ಸಸ್ ಡಿ90 ಕಾರು ಸದ್ಯ 2.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಗ್ಲೊಸ್ಟರ್ ಕಾರಿನ ಎಂಜಿನ್ ಮಾಹಿತಿಯು ಇದುವರೆಗೂ ಬಹಿರಂಗವಾಗಿಲ್ಲ.

ಎಂಜಿ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಿಡುಗಡೆ

ಇನ್ನು ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಲ್ಯಾಡರ್ ಫ್ರೇಮ್ ಚಾರ್ಸಿ ಮೇಲೆ ನಿರ್ಮಾಣವಾಗಿರುವ ಹೊಸ ಕಾರಿನಲ್ಲಿಹಾಗೆಯೇ ಹೊಸ ಕಾರಿನ ಒಳಭಾಗದಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳಿದ್ದು, ಸಂಜ್ಞೆ ಮೂಲಕ ನಿಯಂತ್ರಣ ಮಾಡಬಹುದಾದ ಡ್ಯಾಶ್‌ಬೋರ್ಡ್ ಮತ್ತು ಟೈಲ್‌ಗೆಟ್, ಆ್ಯಂಬಿಯೆಂಟ್ ಲೈಟಿಂಗ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೊಲ್, 8-ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, 12.3-ಇಂಚಿನ ಟಚ್ ‌ಸ್ಕ್ರೀನ್ ಇನ್ಪೊಟೈನ್‌ಮೆಂಟ್ ಸಿಸ್ಟಂ, ವೆಂಟಿಲೆಟೆಡ್ ಲೆದರ್ ಸೀಟುಗಳು, ಹಿಟೆಡ್ ವಿಂಗ್ ಮಿರರ್, ಪನೊರಮಿಕ್ ಸನ್‌ರೂಫ್ ಮತ್ತು ಕ್ವಾಡ್ ಎಕ್ಸಾಸ್ಟ್ ಸಿಸ್ಟಂ ಪಡೆದುಕೊಂಡಿದೆ.

ಎಂಜಿ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಿಡುಗಡೆ

7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಗ್ಲೊಸ್ಟರ್ ಕಾರಿನಲ್ಲಿ 2+2+3 ಮಾದರಿಯಲ್ಲಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಮಧ್ಯದಲ್ಲಿರುವ ಕ್ಯಾಪ್ಟನ್ ಆಸನದಲ್ಲಿ ಹಲವಾರು ಕಾರ್ ಕನೆಕ್ಟೆಡ್ ಸೌಲಭ್ಯಗಳೊಂದಿಗೆ ಅರಾಮಾದಾಯಕ ಪ್ರಯಾಣಕ್ಕಾಗಿ ಮಸಾಜ್ ಫೀಚರ್ಸ್ ನೀಡಲಾಗಿದೆ.

ಎಂಜಿ ಗ್ಲೊಸ್ಟರ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಿಡುಗಡೆ

ಅಂದಾಜು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಮಾಹಿತಿಗಳ ಪ್ರಕಾರ, ಗ್ಲೊಸ್ಟರ್ ಎಸ್‌ಯುವಿ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.30 ಲಕ್ಷದಿಂದ ರೂ.35 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Article Published On: Friday, June 5, 2020, 8:45 [IST]
English summary
MG Gloster India Launch Timeline Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+