Just In
- 7 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 8 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 9 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 10 hrs ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
Don't Miss!
- Movies Srirasthu Shubhamasthu ; ಶಾರ್ವರಿ ಹಿನ್ನೆಲೆ ಹೇಳಿದ ಮಹೇಶ : ಅತ್ತೆಯನ್ನು ಅನಾಥೆ ಎಂದ ದೀಪಿಕಾ..!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಎಂಜಿ ಗ್ಲೊಸ್ಟರ್ ಎಸ್ಯುವಿ
ಎಂಜಿ ಮೋಟಾರ್ ಕಂಪನಿಯು ತನ್ನದೇ ನಾಲ್ಕನೇ ಕಾರು ಮಾದರಿಯಾಗಿ ಗ್ಲೊಸ್ಟರ್ ಎಸ್ಯುವಿ ಕಾರನ್ನು ಬಿಡುಗಡೆಗೆ ಸಜ್ಜುಗೊಳ್ಳುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ದೇಶದ ಪ್ರಮುಖ ನಗರಗಳಲ್ಲಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ಕೈಗೊಂಡಿದೆ.
ಹೊಸ ಕಾರು ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳ್ಳಲಿದೆ. ಹೀಗಾಗಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹೊಸ ಕಾರು ಮೊದಲ ಬಾರಿಗೆ ನಮ್ಮ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ರೋಡ್ ಟೆಸ್ಟಿಂಗ್ ನಡೆಸುವ ಮೂಲಕ ಎಸ್ಯುವಿ ಪ್ರಿಯರ ಗಮನಸೆಳೆದಿದೆ.
ಹೊಸ ಕಾರು ಪರ್ಲ್ ವೈಟ್, ಬ್ಲ್ಯಾಕ್, ರೆಡ್ ಮತ್ತು ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಾಗುವ ಸುಳಿವು ನೀಡಿದ್ದು, ಸೆಪ್ಟೆಂಬರ್ ಅಥವಾ ಅಕ್ಟೋಬರ್ ಆರಂಭದಲ್ಲಿ ಗ್ಲೊಸ್ಟರ್ ಕಾರು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.
ಹೆಕ್ಟರ್, ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹೆಕ್ಟರ್ ಪ್ಲಸ್ ನಂತರ ಬಿಡುಗಡೆಯಾಗುತ್ತಿರುವ ಗ್ಲೊಸ್ಟರ್ ಕಾರು ಮೊದಲ ಮೂರು ಕಾರುಗಳಿಂತಲೂ ಐಷಾರಾಮಿ ಫೀಚರ್ಸ್ನೊಂದಿಗೆ ದುಬಾರಿ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಫುಲ್ ಸೈಜ್ ಎಸ್ಯುವಿ ಮಾದರಿಯಾಗಿ ಬಿಡುಗಡೆಗೊಳ್ಳಲಿದೆ.
ಗ್ಲೊಸ್ಟರ್ ಕಾರು ಟೊಯೊಟಾ ಐಷಾರಾಮಿ ಕಾರು ಆವೃತ್ತಿಯಾಗಿರುವ ಲ್ಯಾಂಡ್ ಕ್ರೂಸರ್ 200 ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಗಾತ್ರ ಹೊಂದಿದ್ದು, 5,100-ಎಂಎಂ ಉದ್ದ, 1,932-ಎಂಎಂ ಅಗಲ, 1,875-ಎಂಎಂ ಎತ್ತರ, 2,950-ಎಂಎಂ ವೀಲ್ಹ್ ಬೆಸ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.
ಭಾರತದಲ್ಲಿ ಬಿಡುಗಡೆಯಾಗಲಿರುವ ಗ್ಲೊಸ್ಟರ್ ಕಾರಿನ ಎಂಜಿನ್ ಮಾಹಿತಿಯು ಇದುವರೆಗೂ ಬಹಿರಂಗವಾಗಿಲ್ಲವಾದರೂ ಎಂಜಿ ಮಾತೃಸಂಸ್ಥೆಯಾದ ಸೈಕ್ ಕಂಪನಿಯು ತನ್ನ ಮತ್ತೊಂದು ಅಂಗಸಂಸ್ಥೆಯಾದ ಮಾಕ್ಸಸ್ ಡಿ90 ಕಾರಿನಲ್ಲಿ ಬಳಕೆ ಮಾಡಲಾದ 2.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಗ್ಲೊಸ್ಟರ್ ಕಾರಿಗಾಗಿ ಆಯ್ಕೆ ಮಾಡಬಹುದಾಗಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ನೀಡಲಾಗಿದ್ದು, ಲ್ಯಾಡರ್ ಫ್ರೇಮ್ ಚಾರ್ಸಿ ಮೇಲೆ ನಿರ್ಮಾಣವಾಗಿರುವ ಹೊಸ ಕಾರಿನಲ್ಲಿ ಸಂಜ್ಞೆ ಮೂಲಕ ನಿಯಂತ್ರಣ ಮಾಡಬಹುದಾದ ಡ್ಯಾಶ್ಬೋರ್ಡ್ ಮತ್ತು ಟೈಲ್ಗೆಟ್, ಆ್ಯಂಬಿಯೆಂಟ್ ಲೈಟಿಂಗ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೊಲ್, 8-ಇಂಚಿನ ಮಲ್ಟಿ ಇನ್ಫಾರ್ಮೆಷನ್ ಡಿಸ್ಪ್ಲೇ, 12.3-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್ಮೆಂಟ್ ಸಿಸ್ಟಂ, ವೆಂಟಿಲೆಟೆಡ್ ಲೆದರ್ ಸೀಟುಗಳು, ಹಿಟೆಡ್ ವಿಂಗ್ ಮಿರರ್, ಪನೊರಮಿಕ್ ಸನ್ರೂಫ್ ಮತ್ತು ಕ್ವಾಡ್ ಎಕ್ಸಾಸ್ಟ್ ಸಿಸ್ಟಂ ಪಡೆದುಕೊಂಡಿದೆ.
7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಗ್ಲೊಸ್ಟರ್ ಕಾರಿನಲ್ಲಿ 2+2+3 ಮಾದರಿಯಲ್ಲಿ ಆಸನ ಸೌಲಭ್ಯವನ್ನು ಜೋಡಿಸಲಾಗಿದ್ದು, ಮಧ್ಯದಲ್ಲಿರುವ ಕ್ಯಾಪ್ಟನ್ ಆಸನದಲ್ಲಿ ಹಲವಾರು ಕಾರ್ ಕನೆಕ್ಟೆಡ್ ಸೌಲಭ್ಯಗಳೊಂದಿಗೆ ಅರಾಮಾದಾಯಕ ಪ್ರಯಾಣಕ್ಕಾಗಿ ಮಸಾಜ್ ಫೀಚರ್ಸ್ ನೀಡಲಾಗಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..
ಅಂದಾಜು ಬೆಲೆ(ಎಕ್ಸ್ಶೋರೂಂ ಪ್ರಕಾರ)
ಮಾಹಿತಿಗಳ ಪ್ರಕಾರ, ಗ್ಲೊಸ್ಟರ್ ಎಸ್ಯುವಿ ಆವೃತ್ತಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ.30 ಲಕ್ಷದಿಂದ ರೂ.35 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.