ರೋಡ್ ಟೆಸ್ಟಿಂಗ್‌ನಲ್ಲಿರುವ ಎಂಜಿ ಗ್ಲೊಸ್ಟರ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಎಂಜಿ ಮೋಟಾರ್ ಕಂಪನಿಯು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್‌ಗೆ ಪೈಪೋಟಿಯಾಗಿ ಬಿಡುಗಡೆ ಮಾಡುತ್ತಿರುವ ಗ್ಲೊಸ್ಟರ್ ಎಸ್‌ಯುವಿ ಕಾರು ಹಲವು ವಿಶೇಷತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿರಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿರುವ ಎಂಜಿ ಗ್ಲೊಸ್ಟರ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಹೊಚ್ಚ ಹೊಸ ಗ್ಲೊಸ್ಟರ್ ಎಸ್‌ಯುವಿ ಮಾದರಿಯನ್ನು ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಳಿಸಿರುವ ಎಂಜಿ ಮೋಟಾರ್ ಕಂಪನಿಯು ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳಿಸುವ ನೀರಿಕ್ಷೆಯಿದೆ. ಇದಕ್ಕೂ ಮುನ್ನ ಹೊಸ ಕಾರಿನ ಇಂಟಿರಿಯರ್ ಮಾಹಿತಿಯು ಲಭ್ಯವಾಗಿದ್ದು, ಹಲವಾರು ಐಷಾರಾಮಿ ಫೀಚರ್ಸ್ ಒಳಗೊಂಡಿದೆ.

ರೋಡ್ ಟೆಸ್ಟಿಂಗ್‌ನಲ್ಲಿರುವ ಎಂಜಿ ಗ್ಲೊಸ್ಟರ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಐಷಾರಾಮಿ ಟೊಯೊಟಾ ಪ್ರಾಡೋ ಮತ್ತು ವೊಲ್ವೋ ಎಕ್ಸ್‌ಸಿ 90 ಕಾರುಗಳಲ್ಲಿ ಕಂಡುಬರುವ ಅಡ್ವಾನ್ಸ್ ಫ್ರಂಟ್ ಕುಲಿಷನ್ ಡಿಟೆಕ್ಟ್ ತಂತ್ರಜ್ಞಾನ ಪ್ರೇರಣೆ ಹೊಂದಿದೆ ಎನ್ನಲಾಗಿದ್ದು, ಮುಂಬರುವ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ ಕೊನೆಯಲ್ಲಿ ಗ್ಲೊಸ್ಟರ್ ಕಾರು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿರುವ ಎಂಜಿ ಗ್ಲೊಸ್ಟರ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಹೆಕ್ಟರ್, ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹೆಕ್ಟರ್ ಪ್ಲಸ್ ನಂತರ ಬಿಡುಗಡೆಯಾಗುತ್ತಿರುವ ಗ್ಲೊಸ್ಟರ್ ಕಾರು ಮೊದಲ ಮೂರು ಕಾರುಗಳಿಂತಲೂ ಐಷಾರಾಮಿ ಫೀಚರ್ಸ್‌ನೊಂದಿಗೆ ದುಬಾರಿ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಅಡ್ವಾನ್ಸ್ 4x4 ಡ್ರೈವ್ ಸಿಸ್ಟಂ ಜೋಡಣೆ ಹೊಂದಿರಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿರುವ ಎಂಜಿ ಗ್ಲೊಸ್ಟರ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಗ್ಲೊಸ್ಟರ್ ಕಾರು ಟೊಯೊಟಾ ಐಷಾರಾಮಿ ಕಾರು ಆವೃತ್ತಿಯಾಗಿರುವ ಲ್ಯಾಂಡ್ ಕ್ರೂಸರ್ 200 ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಗಾತ್ರ ಹೊಂದಿದ್ದು, 5,100-ಎಂಎಂ ಉದ್ದ, 1,932-ಎಂಎಂ ಅಗಲ, 1,875-ಎಂಎಂ ಎತ್ತರ, 2,950-ಎಂಎಂ ವೀಲ್ಹ್ ಬೆಸ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿರುವ ಎಂಜಿ ಗ್ಲೊಸ್ಟರ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಭಾರತದಲ್ಲಿ ಬಿಡುಗಡೆಯಾಗಲಿರುವ ಗ್ಲೊಸ್ಟರ್ ಕಾರಿನ ಎಂಜಿನ್ ಮಾಹಿತಿಯು ಇದುವರೆಗೂ ಬಹಿರಂಗವಾಗಿಲ್ಲವಾದರೂ ಎಂಜಿ ಮಾತೃಸಂಸ್ಥೆಯಾದ ಸೈಕ್ ಕಂಪನಿಯು ತನ್ನ ಮತ್ತೊಂದು ಅಂಗಸಂಸ್ಥೆಯಾದ ಮಾಕ್ಸಸ್ ಡಿ90 ಕಾರಿನಲ್ಲಿ ಬಳಕೆ ಮಾಡಲಾದ 2.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ ಅನ್ನು ಗ್ಲೊಸ್ಟರ್ ಕಾರಿಗಾಗಿ ಆಯ್ಕೆ ಮಾಡಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ರೋಡ್ ಟೆಸ್ಟಿಂಗ್‌ನಲ್ಲಿರುವ ಎಂಜಿ ಗ್ಲೊಸ್ಟರ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಲ್ಯಾಡರ್ ಫ್ರೇಮ್ ಚಾರ್ಸಿ ಮೇಲೆ ನಿರ್ಮಾಣವಾಗಿರುವ ಹೊಸ ಕಾರಿನಲ್ಲಿ ಸಂಜ್ಞೆ ಮೂಲಕ ನಿಯಂತ್ರಣ ಮಾಡಬಹುದಾದ ಡ್ಯಾಶ್‌ಬೋರ್ಡ್ ಮತ್ತು ಟೈಲ್‌ಗೆಟ್, ಆ್ಯಂಬಿಯೆಂಟ್ ಲೈಟಿಂಗ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೊಲ್, 8-ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, 12.3-ಇಂಚಿನ ಟಚ್ ‌ಸ್ಕ್ರೀನ್ ಇನ್ಪೊಟೈನ್‌ಮೆಂಟ್ ಸಿಸ್ಟಂ, ವೆಂಟಿಲೆಟೆಡ್ ಲೆದರ್ ಸೀಟುಗಳು, ಹಿಟೆಡ್ ವಿಂಗ್ ಮಿರರ್, ಪನೊರಮಿಕ್ ಸನ್‌ರೂಫ್, 64 ಬಣ್ಣಗಳ ಆ್ಯಂಬಿಯೆಂಟ್ ಲೈಟಿಂಗ್ಸ್, 12-ಸ್ಪೀಕರ್ಸ್ ಮತ್ತು ಕ್ವಾಡ್ ಎಕ್ಸಾಸ್ಟ್ ಸಿಸ್ಟಂ ಪಡೆದುಕೊಂಡಿದೆ.

ರೋಡ್ ಟೆಸ್ಟಿಂಗ್‌ನಲ್ಲಿರುವ ಎಂಜಿ ಗ್ಲೊಸ್ಟರ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಗ್ಲೊಸ್ಟರ್ ಕಾರಿನಲ್ಲಿ 2+2+3 ಮಾದರಿಯಲ್ಲಿ ಆಸನ ಸೌಲಭ್ಯವನ್ನು ಜೋಡಿಸಲಾಗಿದ್ದು, ಮಧ್ಯದಲ್ಲಿರುವ ಕ್ಯಾಪ್ಟನ್ ಆಸನದಲ್ಲಿ ಹಲವಾರು ಕಾರ್ ಕನೆಕ್ಟೆಡ್ ಸೌಲಭ್ಯಗಳೊಂದಿಗೆ ಅರಾಮಾದಾಯಕ ಪ್ರಯಾಣಕ್ಕಾಗಿ ಮಸಾಜ್ ಫೀಚರ್ಸ್‌ಗಳನ್ನು ನೀಡಲಾಗಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ರೋಡ್ ಟೆಸ್ಟಿಂಗ್‌ನಲ್ಲಿರುವ ಎಂಜಿ ಗ್ಲೊಸ್ಟರ್ ಕಾರಿನ ಇಂಟಿರಿಯರ್ ಮಾಹಿತಿ ಬಹಿರಂಗ

ಅಂದಾಜು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಮಾಹಿತಿಗಳ ಪ್ರಕಾರ, ಗ್ಲೊಸ್ಟರ್ ಎಸ್‌ಯುವಿ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.30 ಲಕ್ಷದಿಂದ ರೂ.35 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
English summary
MG Gloster Full Size SUV Interior Spied. Read in Kannada.
Story first published: Wednesday, August 26, 2020, 18:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X