Just In
- 9 min ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 57 min ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 1 hr ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- 1 hr ago Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
Don't Miss!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಾರ್ಚೂನರ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ ಎಂಜಿ ಗ್ಲೊಸ್ಟರ್
ಹೆಕ್ಟರ್ ಮತ್ತು ಜೆಡ್ಎಸ್ ಇವಿ ಕಾರು ಬಿಡುಗಡೆಯ ನಂತರ ಮತ್ತೆರಡು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಕಂಪನಿಯು ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸಿದೆ.
ಮುಂದಿನ ತಿಂಗಳು ಜುಲೈ 1ಕ್ಕೆ 7 ಸೀಟರ್ ಮಾದರಿಯಾದ ಹೆಕ್ಟರ್ ಪ್ಲಸ್ ಬಿಡುಗಡೆ ನಂತರ ಗ್ಲೊಸ್ಟರ್ ಬಿಡುಗಡೆಗೆ ಯೋಜನೆ ರೂಪಿಸಲಾಗುತ್ತಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ. ಹೊಸ ಕಾರು ಇದೇ ವರ್ಷ ಸೆಪ್ಟೆಂಬರ್ ಕೊನೆಯಲ್ಲಿ ಇಲ್ಲವೆ ಅಕ್ಟೋಬರ್ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಫುಲ್ ಸೈಜ್ ಎಸ್ಯುವಿ ಮಾದರಿಗಳಿಂತಲೂ ಬಲಿಷ್ಠ ವಿನ್ಯಾಸ ಹೊಂದಿದೆ.
ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಂತಲೂ ಬಲಿಷ್ಠ ಬಾಡಿ ಶೈಲಿ ಹೊಂದಿರುವ ಗ್ಲೊಸ್ಟರ್ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ ಎನ್ನಲಾಗಿದೆ.
ಗ್ಲೊಸ್ಟರ್ ಕಾರಿನ ಗಾತ್ರವು ಟೊಯೊಟಾ ಐಷಾರಾಮಿ ಕಾರು ಆವೃತ್ತಿಯಾಗಿರುವ ಲ್ಯಾಂಡ್ ಕ್ರೂಸರ್ 200 ಆವೃತ್ತಿಗಿಂತಲೂ ಹೆಚ್ಚಿದ್ದು, 5,100-ಎಂಎಂ ಉದ್ದ, 1,932-ಎಂಎಂ ಅಗಲ, 1,875-ಎಂಎಂ ಎತ್ತರ, 2,950-ಎಂಎಂ ವೀಲ್ಹ್ ಬೆಸ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.
ಸದ್ಯ ಚೀನಿ ಮಾರುಕಟ್ಟೆಯಲ್ಲಿರುವ ಮ್ಯಾಕ್ಸಸ್ ಡಿ90 ಮಾದರಿಯನ್ನೇ ಭಾರತದಲ್ಲಿ ಗ್ಲೊಸ್ಟರ್ ಹೆಸರಿನೊಂದಿಗೆ ಬಿಡುಗಡೆ ಮಾಡುತ್ತಿರುವ ಎಂಜಿ ಕಂಪನಿಯು ಭಾರತೀಯ ಗ್ರಾಹಕರ ಬೇಡಿಕೆ ಅನುಸಾರವಾಗಿ ಹಲವು ಬದಲಾವಣೆಗಳನ್ನು ಪರಿಚಯಿಸಿದೆ.
ಚೀನಿ ಮಾರುಕಟ್ಟೆಯಲ್ಲಿ ಮ್ಯಾಕ್ಸಸ್ ಕೂಡಾ ಎಂಜಿ ಕಂಪನಿಯ ಮಾತೃಸಂಸ್ಥೆಯಾದ ಸೈಕ್ ಅಡಿಯಲ್ಲೇ ಕಾರ್ಯನಿರ್ವಹಣೆ ಮಾಡುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗಳನ್ನು ಅರಿತಿರುವ ಸೈಕ್ ಕಂಪನಿಯು ಎಂಜಿ ಬ್ಯಾಡ್ಜ್ನೊಂದಿಗೆ ಕೆಲವು ಬದಲಾವಣೆಗಳನ್ನು ಮಾಡಿ ಗ್ಲೊಸ್ಟರ್ ಹೆಸರಿನಲ್ಲಿ ಬಿಡುಗಡೆ ಮಾಡುತ್ತಿದೆ. ಫುಲ್ ಸೈಜ್ ಎಸ್ಯುವಿ ಆವೃತ್ತಿಯಾಗಿರುವ ಗ್ಲೊಸ್ಟರ್ ಕಾರು ಗಾತ್ರಕ್ಕೆ ತಕ್ಕಂತೆ ಬಲಿಷ್ಠ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳಲಿದೆ.
ಮಾಕ್ಸಸ್ ಡಿ90 ಕಾರು ಸದ್ಯ 2.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ನೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಗ್ಲೊಸ್ಟರ್ ಕಾರಿನ ಎಂಜಿನ್ ಮಾಹಿತಿಯು ಇದುವರೆಗೂ ಬಹಿರಂಗವಾಗಿಲ್ಲ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು
ಇನ್ನು ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ನೀಡಲಾಗಿದ್ದು, ಲ್ಯಾಡರ್ ಫ್ರೇಮ್ ಚಾರ್ಸಿ ಮೇಲೆ ನಿರ್ಮಾಣವಾಗಿರುವ ಹೊಸ ಕಾರಿನಲ್ಲಿಹಾಗೆಯೇ ಹೊಸ ಕಾರಿನ ಒಳಭಾಗದಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್ಗಳಿದ್ದು, ಸಂಜ್ಞೆ ಮೂಲಕ ನಿಯಂತ್ರಣ ಮಾಡಬಹುದಾದ ಡ್ಯಾಶ್ಬೋರ್ಡ್ ಮತ್ತು ಟೈಲ್ಗೆಟ್, ಆ್ಯಂಬಿಯೆಂಟ್ ಲೈಟಿಂಗ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೊಲ್, 8-ಇಂಚಿನ ಮಲ್ಟಿ ಇನ್ಫಾರ್ಮೆಷನ್ ಡಿಸ್ಪ್ಲೇ, 12.3-ಇಂಚಿನ ಟಚ್ ಸ್ಕ್ರೀನ್ ಇನ್ಪೊಟೈನ್ಮೆಂಟ್ ಸಿಸ್ಟಂ, ವೆಂಟಿಲೆಟೆಡ್ ಲೆದರ್ ಸೀಟುಗಳು, ಹಿಟೆಡ್ ವಿಂಗ್ ಮಿರರ್, ಪನೊರಮಿಕ್ ಸನ್ರೂಫ್ ಮತ್ತು ಕ್ವಾಡ್ ಎಕ್ಸಾಸ್ಟ್ ಸಿಸ್ಟಂ ಪಡೆದುಕೊಂಡಿದೆ.
7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಗ್ಲೊಸ್ಟರ್ ಕಾರಿನಲ್ಲಿ 2+2+3 ಮಾದರಿಯಲ್ಲಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಮಧ್ಯದಲ್ಲಿರುವ ಕ್ಯಾಪ್ಟನ್ ಆಸನದಲ್ಲಿ ಹಲವಾರು ಕಾರ್ ಕನೆಕ್ಟೆಡ್ ಸೌಲಭ್ಯಗಳೊಂದಿಗೆ ಅರಾಮಾದಾಯಕ ಪ್ರಯಾಣಕ್ಕಾಗಿ ಮಸಾಜ್ ಫೀಚರ್ಸ್ ನೀಡಲಾಗಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್ಗೆ ಭರ್ಜರಿ ಆಫರ್ ನೀಡಿದ ಟಾಟಾ
ಅಂದಾಜು ಬೆಲೆ(ಎಕ್ಸ್ಶೋರೂಂ ಪ್ರಕಾರ)
ಮಾಹಿತಿಗಳ ಪ್ರಕಾರ, ಗ್ಲೊಸ್ಟರ್ ಎಸ್ಯುವಿ ಆವೃತ್ತಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ.30 ಲಕ್ಷದಿಂದ ರೂ.35 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.
Image Courtesy: DOCTOR RIDER/YouTube