ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಎಂಜಿ ಮೋಟಾರ್ ಕಂಪನಿಯು ಹೆಕ್ಟರ್, ಹೆಕ್ಟರ್ ಪ್ಲಸ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ್ ಕಾರು ಮಾದರಿಗಳ ನಂತರ ನಾಲ್ಕನೇ ಕಾರು ಮಾದರಿಯಾಗಿ ಗ್ಲೊಸ್ಟರ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಅಂತಿಮ ಹಂತದ ರೋಡ್ ಟೆಸ್ಟಿಂಗ್ ಕೈಗೊಂಡಿರುವ ಗ್ಲೊಸ್ಟರ್ ಕಾರು ಮಾದರಿಯು ಅಕ್ಟೋಬರ್ ಮೊದಲ ವಾರದಲ್ಲಿ ರಸ್ತೆಗಿಳಿಯುವುದು ಬಹುತೇಕ ಖಚಿತವಾಗಿದೆ.

ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್

ಫುಲ್ ಸೈಜ್ ಎಸ್‌ಯುವಿ ಮಾದರಿಯಾಗಿರುವ ಹೊಸ ಗೊಸ್ಟರ್ ಕಾರು ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉನ್ನತ ಮಟ್ಟದ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ. ಹೊಸ ಕಾರಿನಲ್ಲಿ ಲೆವಲ್ 1 ಅಟೊನೊಮಸ್ ಪಾರ್ಕಿಂಗ್ ಸೌಲಭ್ಯ ಸೇರಿದಂತೆ ಆಟೋ ಪಾರ್ಕ್ ಅಸಿಸ್ಟ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ಫ್ಯಾಟಿಗ್ಯೂ ರಿಮೆಂಡರ್ ಸಿಸ್ಟಂ ನಂತಹ ಆಧುನಿಕ ಕಾರ್ ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದೆ.

ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್

ಹೊಸ ಸುರಕ್ಷಾ ಸೌಲಭ್ಯಗಳೊಂದಿಗೆ ಕಾರು ಚಾಲನೆಯನ್ನು ಮತ್ತಷ್ಟು ಸರಳ ಮತ್ತು ಸುರಕ್ಷಿತವಾಗಿಸುತ್ತಿರುವ ಎಂಜಿ ಕಂಪನಿಯು ಹೊಸ ಕಾರಿನಲ್ಲಿ ಅಡ್ವಾನ್ಸ್ 4x4 ಡ್ರೈವ್ ಸಿಸ್ಟಂ, ಬೂಟ್ ಲಿಡ್ ತೆರೆಯಲು ಲೆಗ್ ಸ್ವೈಪ್ ಸೌಲಭ್ಯಗಳನ್ನು ಜೋಡಣೆ ಮಾಡಿದೆ.

ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್

ಜೊತೆಗೆ ಲ್ಯಾಡರ್ ಫ್ರೇಮ್ ಚಾರ್ಸಿ ಮೇಲೆ ನಿರ್ಮಾಣವಾಗಿರುವ ಹೊಸ ಕಾರಿನಲ್ಲಿ ಸಂಜ್ಞೆ ಮೂಲಕ ನಿಯಂತ್ರಣ ಮಾಡಬಹುದಾದ ಡ್ಯಾಶ್‌ಬೋರ್ಡ್ ಮತ್ತು ಟೈಲ್‌ಗೆಟ್, ಆ್ಯಂಬಿಯೆಂಟ್ ಲೈಟಿಂಗ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೊಲ್, 8-ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, 12.3-ಇಂಚಿನ ಟಚ್ ‌ಸ್ಕ್ರೀನ್ ಇನ್ಪೊಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್

ಹಾಗೆಯೇ ವೆಂಟಿಲೆಟೆಡ್ ಲೆದರ್ ಸೀಟುಗಳು, ಹಿಟೆಡ್ ವಿಂಗ್ ಮಿರರ್, ಪನೊರಮಿಕ್ ಸನ್‌ರೂಫ್, 64 ಬಣ್ಣಗಳ ಆ್ಯಂಬಿಯೆಂಟ್ ಲೈಟಿಂಗ್ಸ್, 12-ಸ್ಪೀಕರ್ಸ್, ಕ್ವಾಡ್ ಎಕ್ಸಾಸ್ಟ್ ಸಿಸ್ಟಂ ಮತ್ತು 19-ಇಂಚಿನ ಅಲಾಯ್ ವೀಲ್ಹ್ ಪಡೆದುಕೊಂಡಿದ್ದು, ಸ್ನೋ, ಸ್ಯಾಂಡ್, ಇಕೋ, ರಾಕ್ ಮತ್ತು ಸ್ಪೋರ್ಟ್ ಡ್ರೈವಿಂಗ್ ಮೋಡ್ ಹೊಂದಿದೆ.

ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್

6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಗ್ಲೊಸ್ಟರ್ ಕಾರಿನಲ್ಲಿ 2+2+2 ಮತ್ತು 2+2+3 ಮಾದರಿಯಲ್ಲಿ ಆಸನ ಸೌಲಭ್ಯವನ್ನು ಜೋಡಿಸಲಾಗಿದ್ದು, 5,100-ಎಂಎಂ ಉದ್ದ, 1,932-ಎಂಎಂ ಅಗಲ, 1,875-ಎಂಎಂ ಎತ್ತರ, 2,950-ಎಂಎಂ ವೀಲ್ಹ್ ಬೆಸ್ ಹೊಂದಿರುವ ಹೊಸ ಕಾರು ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್ ಪಡೆದುಕೊಂಡಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್

ಎಂಜಿನ್ ಮತ್ತು ಪರ್ಫಾಮೆನ್ಸ್

ಗ್ಲೊಸ್ಟರ್ ಎಸ್‌ಯುವಿ ಮಾದರಿಯು ಜೆಡ್ಎಫ್ ನಿರ್ಮಾಣದ 8-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 2.0-ಲೀಟರ್ ಟ್ವಿನ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದೆ.

ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್

ಹೊಸ ಎಂಜಿನ್ ಮಾದರಿಯು 215-ಬಿಎಚ್‌ಪಿ, 480-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಯಲ್ಲೇ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದ್ದು, ಹೊಸ ಕಾರಿನಲ್ಲಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ನೀಡುತ್ತಿಲ್ಲ ಎನ್ನಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅಕ್ಟೋಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್

ಈ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡಿವರ್ ಕಾರು ಮಾದರಿಗಳಿಗೆ ಅತ್ಯುತ್ತಮ ಪೈಪೋಟಿ ನೀಡಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.35 ಲಕ್ಷದಿಂದ ರೂ.40 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದೆ.

Article Published On: Friday, September 18, 2020, 18:13 [IST]
English summary
MG Gloster Premium Full-Size SUV To Be Launch In India By October 2020. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+