ಗ್ಲೊಸ್ಟರ್ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಹೆಕ್ಟರ್ ಮತ್ತು ಜೆಎಡ್ ಇವಿ ಬಿಡುಗಡೆಯ ನಂತರ ಹೆಕ್ಟರ್ ಪ್ಲಸ್ ಹಾಗೂ ಗ್ಲೊಸ್ಟರ್ ಕಾರು ಮಾದರಿಗಳ ಭಾರೀ ನೀರಿಕ್ಷೆಯಿಟ್ಟುಕೊಂಡಿರುವ ಎಂಜಿ ಮೋಟಾರ್ ಕಂಪನಿಯು ಹೆಕ್ಟರ್ ಪ್ಲಸ್ ನಂತರ ಗ್ಲೊಸ್ಟರ್ ಎಸ್‌ಯುವಿಯನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದವಾಗಿದೆ.

ಗ್ಲೊಸ್ಟರ್ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಹೊಸ ಗ್ಲೊಸ್ಟರ್ ಕಾರು ಬಿಡುಗಡೆಗೂ ಮುನ್ನ ಕಾರಿನ ತಾಂತ್ರಿಕ ಅಂಶಗಳ ಕುರಿತಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಕಾರಿನ ಟೀಸರ್ ಚಿತ್ರವನ್ನು ತನ್ನ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಹೊಸ ಕಾರು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಎಸ್‌ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಗ್ಲೊಸ್ಟರ್ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಎಂಜಿ ಕಂಪನಿಯು ಜುಲೈ 1ಕ್ಕೆ 7 ಸೀಟರ್ ಮಾದರಿಯಾದ ಹೆಕ್ಟರ್ ಪ್ಲಸ್ ಬಿಡುಗಡೆ ನಂತರ ಗ್ಲೊಸ್ಟರ್ ಬಿಡುಗಡೆಗೆ ಯೋಜನೆ ರೂಪಿಸಲಾಗುತ್ತಿದ್ದು, ಹೊಸ ಕಾರು ಇದೇ ವರ್ಷ ಸೆಪ್ಟೆಂಬರ್ ಕೊನೆಯಲ್ಲಿ ಇಲ್ಲವೆ ಅಕ್ಟೋಬರ್‌ ಆರಂಭದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಗ್ಲೊಸ್ಟರ್ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಫುಲ್ ಸೈಜ್ ಎಸ್‌ಯುವಿ ಮಾದರಿಗಳಿಂತಲೂ ಬಲಿಷ್ಠ ವಿನ್ಯಾಸ ಹೊಂದಿರುವ ಗ್ಲೊಸ್ಟರ್ ಕಾರು ತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ ಎನ್ನಲಾಗಿದೆ.

ಗ್ಲೊಸ್ಟರ್ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಗ್ಲೊಸ್ಟರ್ ಕಾರು ಟೊಯೊಟಾ ಐಷಾರಾಮಿ ಕಾರು ಆವೃತ್ತಿಯಾಗಿರುವ ಲ್ಯಾಂಡ್ ಕ್ರೂಸರ್ 200 ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಗಾತ್ರ ಹೊಂದಿದ್ದು, 5,100-ಎಂಎಂ ಉದ್ದ, 1,932-ಎಂಎಂ ಅಗಲ, 1,875-ಎಂಎಂ ಎತ್ತರ, 2,950-ಎಂಎಂ ವೀಲ್ಹ್ ಬೆಸ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಗ್ಲೊಸ್ಟರ್ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಭಾರತದಲ್ಲಿ ಬಿಡುಗಡೆಯಾಗಲಿರುವ ಗ್ಲೊಸ್ಟರ್ ಕಾರಿನ ಎಂಜಿನ್ ಮಾಹಿತಿಯು ಇದುವರೆಗೂ ಬಹಿರಂಗವಾಗಿಲ್ಲವಾದರೂ ಎಂಜಿ ಮಾತೃಸಂಸ್ಥೆಯಾದ ಸೈಕ್ ಕಂಪನಿಯು ತನ್ನ ಮತ್ತೊಂದು ಅಂಗಸಂಸ್ಥೆಯಾದ ಮಾಕ್ಸಸ್ ಡಿ90 ಕಾರಿನಲ್ಲಿ ಬಳಕೆ ಮಾಡಲಾದ 2.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ ಅನ್ನು ಗ್ಲೊಸ್ಟರ್ ಕಾರಿಗಾಗಿ ಆಯ್ಕೆ ಮಾಡಬಹುದಾಗಿದೆ.

MOST READ: ಜುಲೈ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಗ್ಲೊಸ್ಟರ್ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಲ್ಯಾಡರ್ ಫ್ರೇಮ್ ಚಾರ್ಸಿ ಮೇಲೆ ನಿರ್ಮಾಣವಾಗಿರುವ ಹೊಸ ಕಾರಿನಲ್ಲಿ ಸಂಜ್ಞೆ ಮೂಲಕ ನಿಯಂತ್ರಣ ಮಾಡಬಹುದಾದ ಡ್ಯಾಶ್‌ಬೋರ್ಡ್ ಮತ್ತು ಟೈಲ್‌ಗೆಟ್, ಆ್ಯಂಬಿಯೆಂಟ್ ಲೈಟಿಂಗ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೊಲ್, 8-ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, 12.3-ಇಂಚಿನ ಟಚ್ ‌ಸ್ಕ್ರೀನ್ ಇನ್ಪೊಟೈನ್‌ಮೆಂಟ್ ಸಿಸ್ಟಂ, ವೆಂಟಿಲೆಟೆಡ್ ಲೆದರ್ ಸೀಟುಗಳು, ಹಿಟೆಡ್ ವಿಂಗ್ ಮಿರರ್, ಪನೊರಮಿಕ್ ಸನ್‌ರೂಫ್ ಮತ್ತು ಕ್ವಾಡ್ ಎಕ್ಸಾಸ್ಟ್ ಸಿಸ್ಟಂ ಪಡೆದುಕೊಂಡಿದೆ.

ಗ್ಲೊಸ್ಟರ್ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಗ್ಲೊಸ್ಟರ್ ಕಾರಿನಲ್ಲಿ 2+2+3 ಮಾದರಿಯಲ್ಲಿ ಸೌಲಭ್ಯವನ್ನು ಜೋಡಿಸಲಾಗಿದ್ದು, ಮಧ್ಯದಲ್ಲಿರುವ ಕ್ಯಾಪ್ಟನ್ ಆಸನದಲ್ಲಿ ಹಲವಾರು ಕಾರ್ ಕನೆಕ್ಟೆಡ್ ಸೌಲಭ್ಯಗಳೊಂದಿಗೆ ಅರಾಮಾದಾಯಕ ಪ್ರಯಾಣಕ್ಕಾಗಿ ಮಸಾಜ್ ಫೀಚರ್ಸ್ ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಗ್ಲೊಸ್ಟರ್ ಎಸ್‌ಯುವಿ ಕಾರಿನ ಟೀಸರ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಅಂದಾಜು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಮಾಹಿತಿಗಳ ಪ್ರಕಾರ, ಗ್ಲೊಸ್ಟರ್ ಎಸ್‌ಯುವಿ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.30 ಲಕ್ಷದಿಂದ ರೂ.35 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Article Published On: Monday, June 29, 2020, 16:10 [IST]
English summary
MG Gloster Teased On Website Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+