ಎಸ್‌ಯುವಿ ಕಾರುಗಳಲ್ಲೇ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ಗ್ಲೊಸ್ಟರ್

ಎಂಜಿ ಮೋಟಾರ್ ನಿರ್ಮಾಣದ ಬಹುನೀರಿಕ್ಷಿತ ಗ್ಲೊಸ್ಟರ್ ಎಸ್‌ಯುವಿ ಕಾರು ಮಾದರಿಯು ಮುಂಬರುವ ದೀಪಾವಳಿ ಹೊತ್ತಿಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಲೆವಲ್ ಫಸ್ಟ್ ಅಟೊನೊಮಸ್ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಎಸ್‌ಯುವಿ ಕಾರು ಮಾದರಿಯಲ್ಲೇ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ.

ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ಗ್ಲೊಸ್ಟರ್

ಗ್ಲೊಸ್ಟರ್ ಎಸ್‌ಯುವಿ ಕಾರು ಮಾದರಿಯನ್ನು ಹೊಸ ತಲೆಮಾರಿನ ಆಟೋ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಳಿಸುತ್ತಿರುವ ಎಂಜಿ ಮೋಟಾರ್ ಕಂಪನಿಯು ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಶೀಘ್ರದಲ್ಲೇ ಉತ್ಪಾದನಾ ಆವೃತ್ತಿಯೊಂದಿಗೆ ಅನಾವರಣಗೊಳಿಸುವ ನೀರಿಕ್ಷೆಯಿದೆ. ರೋಡ್ ಟೆಸ್ಟಿಂಗ್ ವೇಳೆ ಹೊಸ ಕಾರಿನ ಪ್ರಮುಖ ತಾಂತ್ರಿಕ ಅಂಶಗಳು ಬಹಿರಂಗವಾಗಿದ್ದು, ಇದೀಗ ಆಟೋ ಪಾರ್ಕ್ ಅಸಿಸ್ಟ್ ಸೌಲಭ್ಯಗಳ ಕುರಿತಾಗಿ ಹೊಸ ವಿಡಿಯೋ ಒಂದು ಬಿಡುಗಡೆ ಮಾಡಿದೆ.

ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ಗ್ಲೊಸ್ಟರ್

360 ಡಿಗ್ರಿ ಕ್ಯಾಮೆರಾ ಸೌಲಭ್ಯದೊಂದಿಗೆ ಸೆನ್ಸಾರ್ ಮೂಲಕ ಆಟೋ ಪಾರ್ಕ್ ಅಸಿಸ್ಟ್ ಸೌಲಭ್ಯವನ್ನು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಎಂಜಿ ಗ್ಲೊಸ್ಟರ್ ಕಾರು ಮಾದರಿಯು ಎಸ್‌ಯುವಿ ಪ್ರಿಯರ ಆಯ್ಕೆ ಮುಂಚೂಣಿ ಸಾಧಿಸಲಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಹೊಸ ಕಾರಿನಲ್ಲಿ ಐಷಾರಾಮಿ ಟೊಯೊಟಾ ಪ್ರಾಡೋ ಮತ್ತು ವೊಲ್ವೋ ಎಕ್ಸ್‌ಸಿ 90 ಕಾರುಗಳಲ್ಲಿ ಕಂಡುಬರುವ ಅಡ್ವಾನ್ಸ್ ಫ್ರಂಟ್ ಕುಲಿಷನ್ ಡಿಟೆಕ್ಟ್ ತಂತ್ರಜ್ಞಾನ ಪ್ರೇರಣೆ ಸಹ ಹೊಂದಿದೆ ಎನ್ನಲಾಗಿದ್ದು, ಮುಂಬರುವ ಅಕ್ಟೋಬರ್‌ ಕೊನೆಯಲ್ಲಿ ಅಥವಾ ನವೆಂಬರ್ ಆರಂಭದಲ್ಲಿ ಗ್ಲೊಸ್ಟರ್ ಕಾರು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ಗ್ಲೊಸ್ಟರ್

ಹೆಕ್ಟರ್, ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹೆಕ್ಟರ್ ಪ್ಲಸ್ ನಂತರ ಬಿಡುಗಡೆಯಾಗುತ್ತಿರುವ ಗ್ಲೊಸ್ಟರ್ ಕಾರು ಮೊದಲ ಮೂರು ಕಾರುಗಳಿಂತಲೂ ಐಷಾರಾಮಿ ಫೀಚರ್ಸ್‌ನೊಂದಿಗೆ ದುಬಾರಿ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಅಡ್ವಾನ್ಸ್ 4x4 ಡ್ರೈವ್ ಸಿಸ್ಟಂ ಜೋಡಣೆ ಹೊಂದಿರಲಿದೆ.

ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ಗ್ಲೊಸ್ಟರ್

ಗ್ಲೊಸ್ಟರ್ ಕಾರು ಟೊಯೊಟಾ ಐಷಾರಾಮಿ ಕಾರು ಆವೃತ್ತಿಯಾಗಿರುವ ಲ್ಯಾಂಡ್ ಕ್ರೂಸರ್ 200 ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಗಾತ್ರ ಹೊಂದಿದ್ದು, 5,100-ಎಂಎಂ ಉದ್ದ, 1,932-ಎಂಎಂ ಅಗಲ, 1,875-ಎಂಎಂ ಎತ್ತರ, 2,950-ಎಂಎಂ ವೀಲ್ಹ್ ಬೆಸ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ಗ್ಲೊಸ್ಟರ್

ಭಾರತದಲ್ಲಿ ಬಿಡುಗಡೆಯಾಗಲಿರುವ ಗ್ಲೊಸ್ಟರ್ ಕಾರಿನ ಎಂಜಿನ್ ಮಾಹಿತಿಯು ಇದುವರೆಗೂ ಬಹಿರಂಗವಾಗಿಲ್ಲವಾದರೂ ಎಂಜಿ ಮಾತೃಸಂಸ್ಥೆಯಾದ ಸೈಕ್ ಕಂಪನಿಯು ತನ್ನ ಮತ್ತೊಂದು ಅಂಗಸಂಸ್ಥೆಯಾದ ಮಾಕ್ಸಸ್ ಡಿ90 ಕಾರಿನಲ್ಲಿ ಬಳಕೆ ಮಾಡಲಾದ ಬ್ರಿಟ್ ಡೈಮಾನಿಕ್ ಪ್ರೇರಣೆಯ 2.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ ಅನ್ನು ಗ್ಲೊಸ್ಟರ್ ಕಾರಿಗಾಗಿ ಆಯ್ಕೆ ಮಾಡಬಹುದಾಗಿದೆ.

ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ಗ್ಲೊಸ್ಟರ್

ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಲ್ಯಾಡರ್ ಫ್ರೇಮ್ ಚಾರ್ಸಿ ಮೇಲೆ ನಿರ್ಮಾಣವಾಗಿರುವ ಹೊಸ ಕಾರಿನಲ್ಲಿ ಸಂಜ್ಞೆ ಮೂಲಕ ನಿಯಂತ್ರಣ ಮಾಡಬಹುದಾದ ಡ್ಯಾಶ್‌ಬೋರ್ಡ್ ಮತ್ತು ಟೈಲ್‌ಗೆಟ್, ಆ್ಯಂಬಿಯೆಂಟ್ ಲೈಟಿಂಗ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೊಲ್, 8-ಇಂಚಿನ ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, 12.3-ಇಂಚಿನ ಟಚ್ ‌ಸ್ಕ್ರೀನ್ ಇನ್ಪೊಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ಗ್ಲೊಸ್ಟರ್

ಹಾಗೆಯೇ ವೆಂಟಿಲೆಟೆಡ್ ಲೆದರ್ ಸೀಟುಗಳು, ಹಿಟೆಡ್ ವಿಂಗ್ ಮಿರರ್, ಪನೊರಮಿಕ್ ಸನ್‌ರೂಫ್, 64 ಬಣ್ಣಗಳ ಆ್ಯಂಬಿಯೆಂಟ್ ಲೈಟಿಂಗ್ಸ್, 12-ಸ್ಪೀಕರ್ಸ್, ಕ್ವಾಡ್ ಎಕ್ಸಾಸ್ಟ್ ಸಿಸ್ಟಂ ಮತ್ತು 19-ಇಂಚಿನ ಅಲಾಯ್ ವೀಲ್ಹ್ ಪಡೆದುಕೊಂಡಿದ್ದು, ಸ್ನೋ, ಸ್ಯಾಂಡ್, ಇಕೋ, ರಾಕ್ ಮತ್ತು ಸ್ಪೋರ್ಟ್ ಡ್ರೈವಿಂಗ್ ಮೋಡ್ ಹೊಂದಿದೆ.

ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ಗ್ಲೊಸ್ಟರ್

6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಹೊಂದಿರುವ ಹೊಸ ಗ್ಲೊಸ್ಟರ್ ಕಾರಿನಲ್ಲಿ 2+2+2 ಮತ್ತು 2+2+3 ಮಾದರಿಯಲ್ಲಿ ಆಸನ ಸೌಲಭ್ಯವನ್ನು ಜೋಡಿಸಲಾಗಿದ್ದು, ಮಧ್ಯದಲ್ಲಿರುವ ಕ್ಯಾಪ್ಟನ್ ಆಸನದಲ್ಲಿ ಹಲವಾರು ಕಾರ್ ಕನೆಕ್ಟೆಡ್ ಸೌಲಭ್ಯಗಳೊಂದಿಗೆ ಅರಾಮಾದಾಯಕ ಪ್ರಯಾಣಕ್ಕಾಗಿ ಮಸಾಜ್ ಫೀಚರ್ಸ್ ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ ಎಂಜಿ ಗ್ಲೊಸ್ಟರ್

ಅಂದಾಜು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಮಾಹಿತಿಗಳ ಪ್ರಕಾರ, ಗ್ಲೊಸ್ಟರ್ ಎಸ್‌ಯುವಿ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.30 ಲಕ್ಷದಿಂದ ರೂ.35 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
English summary
MG Gloster Teaser Videos Released Ahead Of Launch. Read in Kannada.
Story first published: Thursday, September 3, 2020, 18:07 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X