'ಹೆಕ್ಟರ್ ಆನಿವರ್ಸರಿ' ಎಡಿಷನ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಕಾರು ಮಾರಾಟವನ್ನು ಆರಂಭಿಸಿ ಜುಲೈ ತಿಂಗಳಿಗೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಹೆಕ್ಟರ್ ಎಸ್‌ಯುವಿ ಮಾದರಿಯಲ್ಲಿ ಆನಿವರ್ಸರಿ ಎಡಿಷನ್ ಬಿಡುಗಡೆಗೊಳಿಸಿದೆ.

'ಹೆಕ್ಟರ್ ಆನಿವರ್ಸರಿ' ಎಡಿಷನ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯ ಫ್ಲ್ಯಾಗ್‌ಶಿಫ್ ಎಸ್‌ಯುವಿ ಮಾದರಿಯಾಗಿ ಬಿಡುಗಡೆಗೊಂಡಿದ್ದ ಹೆಕ್ಟರ್ ಆವೃತ್ತಿಯು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿದ್ದು, ಇದೀಗ ಹೆಕ್ಟರ್ ಕಾರು ಮಾದರಿಯಲ್ಲಿ ಆನಿವರ್ಸರಿ ಎಡಿಷನ್ ಬಿಡುಗಡೆ ಮಾಡಲಾಗಿದೆ. ಹೆಕ್ಟರ್ ಕಾರಿನ ಮಧ್ಯಮ ಕ್ರಮಾಂಕದ ಆವೃತ್ತಿಯಾದ ಸೂಪರ್ ವೆರಿಯೆಂಟ್‌ನಲ್ಲಿ ಆನಿವರ್ಸರಿ ಎಡಿಷನ್ ಬಿಡುಗಡೆ ಮಾಡಲಾಗಿದ್ದು, ಆನಿವರ್ಸರಿ ಎಡಿಷನ್ ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದೆ.

'ಹೆಕ್ಟರ್ ಆನಿವರ್ಸರಿ' ಎಡಿಷನ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಆನಿವರ್ಸರಿ ಎಡಿಷನ್ ಮಾದರಿಯು ಸ್ಟ್ಯಾಂಡರ್ಡ್ ಸೂಪರ್ ಮಾದರಿಯೆಂತೆ ಬೆಲೆ ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಪೆಟ್ರೋಲ್ ಮಾದರಿಯ ಬೆಲೆಯನ್ನು ರೂ.13.63 ಲಕ್ಷಕ್ಕೆ ಮತ್ತು ಡೀಸೆಲ್ ಮಾದರಿಯ ಬೆಲೆಯನ್ನು ರೂ. 14.99 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

'ಹೆಕ್ಟರ್ ಆನಿವರ್ಸರಿ' ಎಡಿಷನ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಸ್ಟ್ಯಾಂಡರ್ಡ್ ಸೂಪರ್ ವೆರಿಯೆಂಟ್‌ಗಿಂತಲೂ ಆನಿವರ್ಸರಿ ಎಡಿಷನ್ ಮಾದರಿಯಲ್ಲಿ ಯಾವುದೇ ಹೆಚ್ಚುವರಿ ಬೆಲೆ ಏರಿಕೆಯಿಲ್ಲದೆ ಕೆಲವು ಹೆಚ್ಚುವರಿ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಆನಿವರ್ಸರಿ ಎಡಿಷನ್ ಮಾದರಿಯು ಸೀಮಿತ ಅವಧಿಗೆ ಮಾತ್ರ ಖರೀದಿಗೆ ಲಭ್ಯವಿರಲಿವೆ.

'ಹೆಕ್ಟರ್ ಆನಿವರ್ಸರಿ' ಎಡಿಷನ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಆನಿವರ್ಸರಿ ಎಡಿಷನ್‌ನಲ್ಲಿ 10.3-ಇಂಚಿನ ಹೆಚ್‌ಡಿ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಡಿಸ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಏರ್ ಪ್ಲೂರಿಫ್ಲೈರ್, ಮೆಡ್‌ಕಿನ್ ಕಿಟ್ ಅಳವಡಿಸಲಾಗಿದ್ದು, ಹೊಸ ಕಾರು ಬಿಎಸ್-6 ಎಂಜಿನ್‌ನೊಂದಿಗೆ ರಸ್ತೆಗಿಳಿದಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

'ಹೆಕ್ಟರ್ ಆನಿವರ್ಸರಿ' ಎಡಿಷನ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ.

'ಹೆಕ್ಟರ್ ಆನಿವರ್ಸರಿ' ಎಡಿಷನ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಇನ್ನು ಹೆಕ್ಟರ್ ಎಸ್‌ಯುವಿ ಬಿಡುಗಡೆ ಮಾಡುವ ಮೂಲಕ ದೇಶಿಯ ಮಾರುಕಟ್ಟೆಯನ್ನು ಅಧಿಕೃತವಾಗಿ ಪ್ರವೇಶಿಸಿದ ಎಂಜಿ ಮೋಟಾರ್ ಕಂಪನಿಯು ಸದ್ಯ ಗ್ರಾಹಕರ ನೆಚ್ಚಿನ ಕಾರು ಮಾದರಿಗಳ ಪೈಕಿ ಅಗ್ರಸ್ಥಾನದಲ್ಲಿದ್ದು, ಇತ್ತೀಚೆಗೆ ಬಿಡುಗಡೆ ಮಾಡಲಾದ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹೆಕ್ಟರ್ ಪ್ಲಸ್ ಎಸ್‌ಯುವಿ ಕೂಡಾ ಹೊಸ ಸಂಚಲನಕ್ಕೆ ಕಾರಣವಾಗಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

'ಹೆಕ್ಟರ್ ಆನಿವರ್ಸರಿ' ಎಡಿಷನ್ ಬಿಡುಗಡೆ ಮಾಡಿದ ಎಂಜಿ ಮೋಟಾರ್

ಸದ್ಯ ಗ್ಲೊಸ್ಟರ್ ಎಸ್‌ಯುವಿ ಕಾರನ್ನು ಸಹ ಬಿಡುಗಡೆ ಮಾಡಲಿರುವ ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಮುಂದಿನ 2 ವರ್ಷಗಳಲ್ಲಿ ವಿವಿಧ ಮಾದರಿಯ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

Most Read Articles

Kannada
English summary
MG Hector Anniversary Edition SUV Launched In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X