ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಎಂಜಿ ಮೋಟಾರ್ ಸಂಸ್ಥೆಯು ತನ್ನ ಜನಪ್ರಿಯ ಎಸ್‌ಯುವಿ ಆವೃತ್ತಿಯಾದ ಹೆಕ್ಟರ್ ಪೆಟ್ರೋಲ್ ಮಾದರಿಯನ್ನು ಬಿಎಸ್-6 ನಿಯಮ ಅನುಸಾರ ಉನ್ನತೀಕರಿಸಿ ಬಿಡುಗಡೆಗೊಳಿಸಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.12.74 ಲಕ್ಷ ಬೆಲೆ ಹೊಂದಿದೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಬಿಎಸ್-4 ಮಾದರಿಗಿಂತಲೂ ಬಿಎಸ್-6 ಎಂಜಿನ್ ಪ್ರೇರಿತ ಹೆಕ್ಟರ್ ಪೆಟ್ರೋಲ್ ಕಾರಿನ ಬೆಲೆಯಲ್ಲಿ ರೂ.26 ಸಾವಿರ ಹೆಚ್ಚಳವಾಗಿದ್ದು, ಹೊಸ ಕಾರು ಖರೀದಿಗಾಗಿ ಇಂದಿನಿಂದಲೇ ರೂ.50 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಸಲ್ಲಿಕೆ ಮಾಡಬಹುದಾಗಿದೆ. ಹೊಸ ಕಾರಿನಲ್ಲಿ ಎಂಜಿನ್ ಹೊರತುಪಡಿಸಿ ಇನ್ನುಳಿದ ಎಲ್ಲಾ ತಾಂತ್ರಿಕ ಅಂಶಗಳು ಬಿಎಸ್-4 ಮಾದರಿಯಲ್ಲಿರುವಂತೆಯೇ ಮುಂದುವರಿಸಲಾಗಿದ್ದು, ಮಾರ್ಚ್ ಹೊತ್ತಿಗೆ ಹೊಸ ಡೀಸೆಲ್ ಎಂಜಿನ್ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಹೊಸ ಎಮಿಷನ್ ನಿಯಮದಿಂದಾಗಿ ಮಾಲಿನ್ಯ ಹೊರಸೂಸುವಿಕೆಯ ಪ್ರಮಾಣದಲ್ಲಿ ಶೇ.15ರಷ್ಟು ಕಡಿತಗೊಂಡಿರುವುದಲ್ಲದೇ ಶೇ.10ರಷ್ಟು ಮೈಲೇಜ್ ಪ್ರಮಾಣವು ಹೆಚ್ಚಳವಾಗಿರುವುದು ಪ್ರಮುಖ ಬದಲಾವಣೆಯಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಇನ್ನು ಹೆಕ್ಟರ್ ಕಾರು ಪ್ರಯಾಣಿಕ ಬೇಡಿಕೆಯೆಂತೆ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಮಾದರಿಯಲ್ಲಿ 7 ವೆರಿಯೆಂಟ್‌ಗಳನ್ನು ಹೊಂದಿದ್ದು, ಹೊಸ ಎಂಜಿನ್ ಜೋಡಣೆಯ ನಂತರ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.12.74 ಲಕ್ಷ ಮತ್ತು ಟಾಪ್ ಎಂಡ್ ಕಾರಿನ ಬೆಲೆಯನ್ನು ರೂ.17.44 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

1.5-ಲೀಟರ್ ಟರ್ಬೋ ಎಂಜಿನ್ ಹೊಂದಿರುವ ಪೆಟ್ರೋಲ್ ಮಾದರಿಯ 143-ಬಿಎಚ್‌ಪಿ ಮತ್ತು 250-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಪೆಟ್ರೋಲ್ ಹೈ ಎಂಡ್ ಆವೃತ್ತಿಯಲ್ಲಿ 48ವೋಲ್ಟ್ ಬ್ಯಾಟರಿಯೊಂದಿಗೆ ಸ್ಮಾರ್ಟ್ ಹೈಬ್ರಿಡ್ ಎಂಜಿನ್ ಜೋಡಿಸಲಾಗಿದೆ. ಇದು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಹೆಚ್ಚಿನ ಮಟ್ಟದ ಇಂಧನ ಕಾರ್ಯಕ್ಷಮತೆಯನ್ನು ಕಾಯ್ದಕೊಳ್ಳಲು ನೆರವಾಗಲಿದೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಇದರೊಂದಿಗೆ ಆಕರ್ಷಕ ಬೆಲೆಗಳಲ್ಲಿ ಫರ್ಸ್ಟ್ ಕ್ಲಾಸ್ ಫೀಚರ್ಸ್, ಪವರ್‍‍ಫುಲ್ ಎಂಜಿನ್, ಬೈಯ್‌ಬ್ಯಾಕ್ ಗ್ಯಾರೆಂಟಿ, 5 ವರ್ಷದ ವಾರೆಂಟಿ/ಅನಿಯಮಿತ 1 ಲಕ್ಷ ಕಿಲೋಮೀಟರ್‍, 5 ವರ್ಷದ ವರೆಗು ಲೇಬರ್ ಫ್ರೀ ಸರ್ವೀಸ್‌ಗಳನ್ನು ನೀಡಲಾಗುತ್ತಿದ್ದು, ಇದು ಎಸ್‌ಯುವಿ ಕಾರು ಖರೀದಿದಾರರ ಪ್ರಮುಖ ಆಕರ್ಷಣೆಯಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಡೀಸೆಲ್ ಮಾದರಿಯು ಎಫ್‌ಸಿಎ ಸಂಸ್ಥೆಯಿಂದ ಎರವಲು ಪಡೆಯಲಾದ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮೂಲಕ 170-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಶೀಘ್ರದಲ್ಲೇ ಡೀಸೆಲ್ ಎಂಜಿನ್ ಕೂಡಾ ಬಿಎಸ್-6 ನಿಯಮದೊಂದಿಗೆ ಬಿಡುಗಡೆಯಾಗಲಿದೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಹೆಕ್ಟರ್ ಕಾರು ಬಿಡುಗಡೆಯ ನಂತರ ಇದುವರೆಗೆ ಸುಮಾರು 60 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ಮಾಡಿದ್ದು, ಇದರಲ್ಲಿ ಇದುವರೆಗೆ ಸುಮಾರು 18 ಸಾವಿರ ಕಾರುಗಳನ್ನು ಮಾತ್ರವೇ ವಿತರಣೆ ಮಾಡಲಾಗಿದ್ದು, ಇನ್ನುಳಿದ ಕಾರುಗಳನ್ನು ನಿಗದಿತ ಅವಧಿಯಲ್ಲಿ ವಿತರಣೆ ಮಾಡಲು ಕಾರು ಉತ್ಪಾದನಾ ಪ್ರಕ್ರಿಯೆಯನ್ನು ಹೆಚ್ಚಿಸಲಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಇದೀಗ ಬಿಎಸ್-6 ನಿಯಮದಂತೆ ಎಂಜಿನ್ ಅನ್ನು ಉನ್ನತೀಕರಿಸಿರುವುದು ಗ್ರಾಹಕರಿಗೆ ಮತ್ತಷ್ಟು ಅನುಕೂಲಕವಾಗಲಿದ್ದು, ಪೆಟ್ರೋಲ್ ಮತ್ತು ಹೈಬ್ರಿಡ್ ವರ್ಷನ್ ಕಾರು ಮಾದರಿಗೆ ಹೆಚ್ಚಿನ ಗ್ರಾಹಕರು ಬೇಡಿಕೆ ಸಲ್ಲಿಸುತ್ತಿದ್ದಾರೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಹೊಸ ಕಾರಿನಲ್ಲಿ ಆ್ಯಂಬಿಯೆಂಟ್ ಲೈಟ್ಸ್ (8 ಬಣ್ಣಗಳಲ್ಲಿ), ಲೆದರ್ ಅಪ್‌ಹೊಲಿಸ್ಟ್ರೈ( ಟಾಪ್ ಎಂಡ್ ಮಾಡೆಲ್‌ಗಳಲ್ಲಿ), 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಸೀಟು, ಪನೊರೊಮಿಕ್ ಸನ್‌ರೂಫ್, ಟಿಲ್ಟ್ ಆ್ಯಂಡ್ ಟೆಲಿಸ್ಕೊಪಿಕ್ ಸ್ಟಿರಿಂಗ್, ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್, ಆಟೋ ಎಸಿ ಜೊತೆ ರಿಯರ್ ವೆಂಟ್ಸ್ , ಪ್ರೀಮಿಯಂ ಇನ್ಫಿನಿಟಿ ಸೌಂಡ್ ಸಿಸ್ಟಂ, ಫ್ರಂಟ್ ಆ್ಯಂಡ್ ರಿಯರ್ ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಅಂಡ್ರಾಯಿಡ್ ಆಡಿಯೋ, ಫುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯಗಳಿವೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ರಿಮೋಟ್ ಕೀ ಲೆಸ್ ಎಂಟ್ರಿ, ವೆಲ್‌ಕಮ್ ಲೈಟ್, ಹೈಟ್ ಅಡ್ಜೆಸ್ಟ್ ಹೆಡ್ ರೆಸ್ಟ್, ಫ್ರಂಟ್ ಮತ್ತು ರಿಯರ್ ಫಾಸ್ಟ್-ಚಾರ್ಜಿಂಗ್ ಪೋರ್ಟ್ಸ್, ಗ್ಲೋ ಬಾಕ್ಸ್, ಡ್ರೈವರ್ ಆರ್ಮ್ ರೆಸ್ಟ್, 60:40 ಅನುಪಾತದಲ್ಲಿ ಮಡಚಬಹುದಾದ ಹಿಂಬದಿ ಆಸನ, ಆಟೋ ಎಸಿ, ಪವರ್ ಅಡ್ಜೆಸ್ಟ್ ರಿಯರ್ ವ್ಯೂ ಮಿರರ್ ಸೌಲಭ್ಯವು ಪ್ರತಿ ವೇರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಬಿಎಸ್-6 ಎಂಜಿನ್ ಪ್ರೇರಿತ ಎಂಜಿ ಹೆಕ್ಟರ್ ಪೆಟ್ರೋಲ್ ವರ್ಷನ್ ಬಿಡುಗಡೆ

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಆರ್ ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಎಬಿಎಸ್ ಜೊತೆಗೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್, ಫ್ರಂಟ್ ಆ್ಯಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಡಿಫಾಗರ್, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಮತ್ತು ISOFIX ಚೈಲ್ಡ್-ಸೀಟ್ ಮೌಂಟ್ಸ್ ಸೌಲಭ್ಯ ನೀಡಲಾಗಿದೆ.

Most Read Articles

Kannada
English summary
BS6 MG Hector launched in india. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X