Just In
Don't Miss!
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Finance
ಪ್ರತಿ ಲೀಟರ್ ಪೆಟ್ರೋಲ್- ಡೀಸೆಲ್ ಗೆ ನೀವು ನೀಡುವ ಬೆಲೆಯಲ್ಲಿ 48% ಕೇಂದ್ರದ ಸುಂಕ
- News
ಕರ್ನಾಟಕ ಆಕ್ರಮಿತ ಪ್ರದೇಶ ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ: ಉದ್ಧವ್ ಠಾಕ್ರೆ
- Movies
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಂಜಿ ಹೆಕ್ಟರ್ ಡೀಸೆಲ್ಗಿಂತ ಪೆಟ್ರೋಲ್ ಆವೃತ್ತಿಗೆ ಹೆಚ್ಚು ಬೇಡಿಕೆ
ಎಂಜಿ ಮೋಟಾರ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಹೆಕ್ಟರ್ ಎಸ್ಯುವಿಯನ್ನು ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದರು. ಎಂಜಿ ಹೆಕ್ಟರ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೂಸ ಸಂಚಲನವನ್ನು ಮೂಡಿಸಿತ್ತು.

ಎಂಜಿ ಮೊಟಾರ್ ಕಂಪನಿಯು ಭಾರತದಲ್ಲಿ ಕಳೆದ ವರ್ಷ ಹೆಕ್ಟರ್ ಎಸ್ಯುವಿಯ ಒಟ್ಟು 15,930 ಯುನಿಟ್ಗಳನ್ನು ಮಾರಾಟ ಮಾಡಿವೆ. ಇದರಲ್ಲಿ ಎಂಜಿ ಹೆಕ್ಟರ್ ಪೆಟ್ರೋಲ್ ಆವೃತ್ತಿಯ 9,110 ಮತ್ತು ಡೀಸೆಲ್ ಆವೃತ್ತಿಯ 6,820 ಯುನಿಟ್ಗಳು ಮಾರಾಟವಾಗಿವೆ. ಎಂಜಿ ಹೆಕ್ಟರ್ ಎಸ್ಯುವಿಯ ಡೀಸೆಲ್ ಆವೃತ್ತಿಗಿಂತ ಪೆಟ್ರೋಲ್ ಆವೃತ್ತಿಗೆ ಹೆಚ್ಚಿನ ಬೇಡಿಕೆ ಹೊಂದಿದೆ. ಎಂಜಿ ಹೆಕ್ಟರ್ ಎಸ್ಯುವಿಯ ಡೀಸೆಲ್ ಆವೃತ್ತಿ ಶೇ.42.8ಮಾರಾಟವಾಗಿದ್ದರೆ, ಪೆಟ್ರೋಲ್ ಆವೃತ್ತಿಯು ಶೇ.57.2% ರಷ್ಟು ಮಾರಾಟವಾಗಿವೆ.

ಗ್ರಾಹಕರು ಡೀಸೆಲ್ ಆವೃತ್ತಿಗಿಂತ ಪೆಟ್ರೋಲ್ ಆವೃತ್ತಿಯನ್ನು ಹೆಚ್ಚು ಬಯಸುತ್ತದೆ ಎಂದು ಇದರಿಂದ ತಿಳಿಯುತ್ತದೆ. ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವೇಗವಾಗಿ ವಿತರಿಸಲು ಈ ವರ್ಷ ಉತ್ಪಾದನೆಯನ್ನು ಹೆಚ್ಚಿಸಿದೆ.

ಎಂಜಿ ಹೆಕ್ಟರ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ 1.5 ಲೀಟರ್ ಎಂಜಿನ್ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ 143 ಬಿಹೆಚ್ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಡೀಸೆಲ್ ಮಾದರಿಯಲ್ಲಿ 2.0 ಲೀಟರ್ ಟಬೋಜಾರ್ಜ್ಡ್ ಎಂಜಿನ್ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮೂಲಕ 170 ಬಿಹೆಚ್ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಈ ಎಸ್ಯುವಿನಲ್ಲಿ ಲೈವ್ ಟ್ರಾಫಿಕ್ ಅಲರ್ಟ್ಗಳು, ಟಯರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ(ಟಿಪಿಎಂಎಸ್), ಜಿಯೋ-ಫೆನ್ಸಿಂಗ್, ತುರ್ತು ಕರೆ, ಸಾಮಾನ್ಯ ಸಹಾಯಕ್ಕಾಗಿ ಸಂಪರ್ಕಿಸಲು ಒಂದು ಬಟನ್ ಮತ್ತು ಪ್ರೀಮಿಯಂ ಗಾನಾ ಆ್ಯಪ್ನ ವೈವಿಧ್ಯಮಯ ಮ್ಯೂಸಿಕ್ ಸಂಗ್ರಹ, ಆನ್-ಬೋರ್ಡ್ ನ್ಯಾವಿಗೇಷನ್ ಅನ್ನು ಹೊಂದಿದೆ.

ಸ್ಮಾರ್ಟ್ಪೋನ್ ಅಪ್ಲಿಕೇಶನ್ ಮತ್ತು ವಾಯ್ಸ್ ಕಾಮೆಂಡ್ಗಳ ಮೂಲಕ ಎಸ್ಯುವಿ ವಿವಿಧ ವೈಶಿಷ್ಟ್ಯಗಳನ್ನು ನಿಯಂತ್ರಿಸಬಹುದು. ಇದರಲ್ಲಿ ಎಸಿ, ಸನ್ರೂಫ್, ಟೈಲ್ಗೇಟ್ ಮತ್ತು ಡೋರ್ಗಳು ಸೇರಿವೆ.
MOST READ: ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ ಹೀಗಿರಲಿದೆ

ಇದರಲ್ಲಿ ಬ್ಲ್ಯಾಕ್ ಕಲರ್ ಥೀಮ್ ಹೊಂದಿರುವ ಇಂಟರಿಯರ್ನೊಂದಿಗೆ ಆಡಿಯೋ ಸಿಸ್ಟಂ, ಕ್ಲೈಮೆಟ್ ಕಂಟ್ರೋಲ್, ಇನ್ಫೋಟೇನ್ಮೆಂಟ್ ಕಂಟ್ರೋಲ್, ಆಟೋ ಎಸಿ, ಪವರ್ ವಿಂಡೋ, ಫಾಸ್ಟ್ ಚಾರ್ಜಿಂಗ್, ಆಟೋಮ್ಯಾಟಿಕ್ ಹೆಡ್ಲ್ಯಾಂಪ್, 10.4 ಇಂಚಿನ ಟಚ್ಸ್ಕ್ರೀನ್ ಇನ್ಫೋಟೇನ್ಮೆಂಟ್ ಡಿಸ್ಪ್ಲೇ ಸೌಲಭ್ಯವಿದೆ.
MOST READ: ಬಿಎಸ್-6 ಎಂಜಿನ್ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಸೆಲೆರಿಯೊ ಎಕ್ಸ್

ಹೆಕ್ಟರ್ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದ್ದು, ಏರ್ಬ್ಯಾಗುಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಫ್ರಂಟ್ ಆಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್, ರೇರ್ ಪಾರ್ಕಿಂಗ್ ಕ್ಯಾಮೆರಾ, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ ಸೌಲಭ್ಯವನ್ನು ಒದಗಿಸಲಾಗಿದೆ.
MOST READ: ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಎಂಜಿ ಹೆಕ್ಟರ್ ಎಸ್ಯುವಿಯ ಪ್ರಾರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.12.37 ಲಕ್ಷಗಳಾಗಿದೆ. ಎಂಜಿ ಹೆಕ್ಟರ್ ಎಸ್ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಜೀಪ್ ಕಂಪಾಸ್, ಮಹೀಂದ್ರಾ ಎಕ್ಸ್ಯುವಿ 500 ಮತ್ತು ಟಾಟಾ ಹ್ಯಾರಿಯರ್ ಎಸ್ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.