ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಹೆಕ್ಟರ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರುಗಳ ಬಿಡುಗಡೆಯನ್ನು ಈ ಹಿಂದೆ ನಿಗದಿಪಡಿಸಿದ ಅವಧಿಯಲ್ಲೇ ಬಿಡುಗಡೆ ಮಾಡುವುದಾಗಿ ಸ್ಪಷ್ಟಪಡಿಸಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಸದ್ಯ ಭಾರತ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕರೋನಾ ವೈರಸ್ ತಡೆಗಾಗಿ ಲಾಕ್ ಡೌನ್ ವಿಧಿಸಿರುವುದು ಆಟೋ ಮೊಬೈಲ್ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಿದ್ದು, ಬಹುತೇಕ ಆಟೋ ಕಂಪನಿಗಳು ಹೊಸ ವಾಹನಗಳ ಬಿಡುಗಡೆಯನ್ನು ಮುಂದಕ್ಕೆ ಹಾಕುವ ಮೂಲಕ ಸದ್ಯ ಮಾರುಕಟ್ಟೆಯಲ್ಲಿ ವಾಹನ ಮಾದರಿಗಳ ಮಾರಾಟವನ್ನು ಹೆಚ್ಚಿಸುವುದು ಹೇಗೆ ಎನ್ನುವುದರ ಕುರಿತು ಯೋಜನೆ ರೂಪಿಸುತ್ತಿವೆ.

ಆದರೆ ಎಂಜಿ ಮೋಟಾರ್ ಕಂಪನಿಯು ಸಂಕಷ್ಟದ ಪರಿಸ್ಥಿತಿಯಲ್ಲಿ ಹೊಸ ಕಾರುಗಳ ಬಿಡುಗಡೆಯನ್ನು ಮುಂದಕ್ಕೆ ಹಾಕುತ್ತಾ ಎನ್ನವ ಅನುಮಾನಗಳಿಗೆ ಸ್ಪಷ್ಟ ನೀಡುವ ಮೂಲಕ ಈ ಹಿಂದೆ ನಿಗದಿ ಪಡಿಸಿದ ಅವಧಿಯಲ್ಲೇ ಹೊಸ ಕಾರುಗಳು ಬಿಡುಗಡೆಯಾಗಲಿವೆ ಎಂದಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಕಾರು ಮಾರಾಟದಲ್ಲಿ ಹೊಸ ಬದಲಾವಣೆಗೆ ಕಾರಣವಾಗಿರುವ ಎಂಜಿ ಮೋಟಾರ್ ಕಂಪನಿಯು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಸುಮಾರು 14 ಹೊಸ ಕಾರು ಮಾದರಿಗಳನ್ನು ಪ್ರದರ್ಶನಗೊಳಿಸುವ ಮೂಲಕ ಹೊಸ ಸಂಚಲನ ಸೃಷ್ಠಿಸಿತ್ತು.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಇದರಲ್ಲಿ ಇದೀಗ ಮೂರು ಪ್ರಮುಖ ಕಾರು ಮಾದರಿಗಳನ್ನು ಬಿಡುಗಡೆಗೆ ಸಜ್ಜಾಗಿದ್ದು, 7 ಸೀಟರ್ ಮಾದರಿಯ ಹೆಕ್ಟರ್ ಪ್ಲಸ್, ಫುಲ್ ಸೈಜ್ ಹೊಂದಿರುವ 7 ಸೀಟರ್ ಗ್ಲೊಸ್ಟರ್ ಮತ್ತು 5 ಸೀಟರ್ ಮಾದರಿ ಜೆಡ್ಎಸ್ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಹೊಸ ಕಾರು ಇದೇ ವರ್ಷ ಅಗಸ್ಟ್ ಮತ್ತು ನವೆಂಬರ್ ಅಂತರದಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರುಗಳ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಆದರೆ ಕರೋನಾ ವೈರಸ್ ನಿಂದಾಗಿ ಆಟೋ ಮಾರುಕಟ್ಟೆಯು ಭಾರೀ ಪ್ರಮಾಣದಲ್ಲಿ ಕುಸಿತ ಕಾಣುವ ಸಾಧ್ಯತೆಗಳಿದ್ದು, ಇಂತಹ ಸಂಕಷ್ಟ ಪರಿಸ್ಥಿತಿಯಲ್ಲೂ ಹೊಸ ಕಾರುಗಳ ಬಿಡುಗಡೆಗೆ ಎಂಜಿ ಮುಂದಾಗಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಇನ್ನು ಬಿಡುಗಡೆಯಾಗಲಿರುವ ಹೊಸ ಗ್ಲೊಸ್ಟರ್ ಕಾರಿನ ಗಾತ್ರವು ಟೊಯೊಟಾ ಐಷಾರಾಮಿ ಕಾರು ಆವೃತ್ತಿಯಾಗಿರುವ ಲ್ಯಾಂಡ್ ಕ್ರೂಸರ್ 200 ಆವೃತ್ತಿಗಿಂತಲೂ ಹೆಚ್ಚಿದ್ದು, ಬರೋಬ್ಬರಿ 5,100 ಎಂಎಂ ಉದ್ದಳತೆ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಚೀನಿ ಮಾರುಕಟ್ಟೆಯಲ್ಲಿ ಮ್ಯಾಕ್ಸಸ್ ಸಂಸ್ಥೆಯು ಕೂಡಾ ಸೈಕ್ ಸಂಸ್ಥೆಯ ಅಡಿಯಲ್ಲೇ ಕಾರ್ಯನಿರ್ವಹಣೆ ಮಾಡುತ್ತಿದ್ದು, ಭಾರತೀಯ ಗ್ರಾಹಕರ ಬೇಡಿಕೆಗಳನ್ನು ಅರಿತಿರುವ ಸೈಕ್ ಸಂಸ್ಥೆಯು ಎಂಜಿ ಬ್ಯಾಡ್ಜ್‌ನೊಂದಿಗೆ ಕೆಲವು ಬದಲಾವಣೆಗಳನ್ನು ಮಾಡಿ ಗ್ಲೊಸ್ಟರ್ ಕಾರನ್ನು ಬಿಡುಗಡೆ ಮಾಡುತ್ತಿದೆ. ಫುಲ್ ಸೈಜ್ ಎಸ್‌ಯುವಿ ಆವೃತ್ತಿಯಾಗಿರುವ ಗ್ಲೊಸ್ಟರ್ ಕಾರು ಇದೇ ವರ್ಷ ನವೆಂಬರ್‌ನಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ಕಾರಿನ ಗಾತ್ರಕ್ಕೆ ತಕ್ಕಂತೆ ಬಲಿಷ್ಠ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳಲಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಸದ್ಯ ಮಾರುಕಟ್ಟೆಯಲ್ಲಿರುವ ಮಾಕ್ಸಸ್ ಡಿ90 ಕಾರು 2.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಗ್ಲೊಸ್ಟರ್ ಕಾರು ಕೆಲವು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 28 ಲಕ್ಷದಿಂದ ರೂ.33 ಲಕ್ಷ ಬೆಲೆ ಅಂತರದೊಂದಿಗೆ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಇದರೊಂದಿಗೆ ಸಾಮಾನ್ಯ ಹೆಕ್ಟರ್ ಮಾದರಿಗಿಂತಲೂ ವಿಭಿನ್ನ ತಂತ್ರಜ್ಞಾನ ಸೌಲಭ್ಯ ಪಡೆದುಕೊಂಡಿರುವ ಹೆಕ್ಟರ್ ಪ್ಲಸ್ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಅಥವಾ 7 ಸೀಟರ್ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿರಲಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ 7 ಸೀಟರ್ ಎಸ್‌ಯುವಿ ಕಾರು ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಫುಲ್ ಸೈಜ್ 7 ಸೀಟರ್ ಎಸ್‌ಯುವಿ ಆವೃತ್ತಿಯಾಗಿರುವ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಮತ್ತು ಟೊಯೊಟಾ ಫಾರ್ಚೂನರ್ ಖರೀದಿಯು ಬಹುತೇಕ ಕಾರು ಖರೀದಿದಾರರಿಗೆ ಕಷ್ಟಸಾಧ್ಯ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಹೀಗಾಗಿ ಹೆಕ್ಟರ್ ಕಾರಿನಲ್ಲಿಯೇ ಹೊಸ ಆವೃತ್ತಿಯನ್ನು ಪರಿಚಯಿಸುತ್ತಿರುವ ಎಂಜಿ ಸಂಸ್ಥೆಯು ಹೆಕ್ಟರ್ ಪ್ಲಸ್ ಮೂಲಕ 7 ಸೀಟರ್ ಎಸ್‌ಯುವಿ ಖರೀದಿದಾರರನ್ನು ಸೆಳೆಯಲು ಮುಂದಾಗಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಇದು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ. ಈ ಮೂಲಕ ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇನ್ಮುಂದೆ ಸಾಮಾನ್ಯ ಮಾದರಿಯಲ್ಲಿ 5 ಸೀಟರ್(ಹೆಕ್ಟರ್) ಮತ್ತು ಹೆಕ್ಟರ್ ಪ್ಲಸ್‌ನಲ್ಲಿ 6 ಅಥವಾ 7 ಸೀಟರ್ ಆವೃತ್ತಿಯನ್ನು ಕೂಡಾ ಖರೀದಿ ಮಾಡಬಹುದಾಗಿದೆ.

ನಿಗದಿತ ಅವಧಿಯಲ್ಲೇ ಬಿಡುಗಡೆಯಾಗಲಿವೆ ಎಂಜಿ ಬಹುನೀರಿಕ್ಷಿತ ಹೆಕ್ಟರ್ ಪ್ಲಸ್ ಮತ್ತು ಗ್ಲೊಸ್ಟರ್

ಹೆಕ್ಟರ್ ಪ್ಲಸ್‌ನಲ್ಲಿ ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಉತ್ತಮ ಆಸನ ಸೌಲಭ್ಯವನ್ನು ಒದಗಿಸಲಾಗಿದ್ದು, ಸಾಮಾನ್ಯ ಕಾರು ಮಾದರಿಗಿಂತಲೂ ಕೆಲವು ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸಿರುವ ಎಂಜಿ ಸಂಸ್ಥೆಯು ಪ್ರತ್ಯೇಕ ಆಸನ ಸೌಲಭ್ಯ ಜೋಡಣೆ ಮಾಡುವ ಮೂಲಕ 5 ಸೀಟರ್‌ಗಿಂತ ರೂ. 1 ಲಕ್ಷದಿಂದ ರೂ.1.50 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.

Most Read Articles

Kannada
English summary
MG Motor is decided to launch Hector Plus and Gloster SUV models in India as per the earlier plan amid coronavirus outbreak. Read in Kannada.
Story first published: Wednesday, April 8, 2020, 17:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X