ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಹೊಸ ಹೆಕ್ಟರ್ ಪ್ಲಸ್ ವಿಶೇಷತೆ ಏನು?

ಹೆಕ್ಟರ್ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಎಂಜಿ ಮೋಟಾರ್ ಸಂಸ್ಥೆಯು ಶೀಘ್ರದಲ್ಲೇ ಮತ್ತೊಂದು ಹೊಸ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಸಿದ್ದವಾಗಿದ್ದು, ಹೆಕ್ಟರ್ ಕಾರು ಮಾದರಿಯಲ್ಲೇ 7 ಸೀಟರ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದೆ.

ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಹೊಸ ಹೆಕ್ಟರ್ ಪ್ಲಸ್ ವಿಶೇಷತೆ ಏನು?

ಕಳೆದ ನವೆಂಬರ್‌ನಲ್ಲಿಯೇ ಹೆಕ್ಟರ್ ಕಾರಿನ ಮುಂದುವರಿದ ಭಾಗವಾಗಿ 7 ಸೀಟರ್ ಮಾದರಿಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದ ಎಂಜಿ ಸಂಸ್ಥೆಯು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಸಹ ಕೈಗೊಂಡಿತ್ತು. ಇದೀಗ ಅಂತಿಮವಾಗಿ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಹೊಸ ಕಾರನ್ನು ಅನಾವರಣಗೊಳಿಸುವ ಮೂಲಕ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಸಾಮಾನ್ಯ ಹೆಕ್ಟರ್ ಮಾದರಿಗಿಂತಲೂ ವಿಭಿನ್ನ ತಂತ್ರಜ್ಞಾನ ಸೌಲಭ್ಯ ಪಡೆದುಕೊಳ್ಳಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಹೊಸ ಹೆಕ್ಟರ್ ಪ್ಲಸ್ ವಿಶೇಷತೆ ಏನು?

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ 7 ಸೀಟರ್ ಎಸ್‌ಯುವಿ ಕಾರು ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಫುಲ್ ಸೈಜ್ 7 ಸೀಟರ್ ಎಸ್‌ಯುವಿ ಆವೃತ್ತಿಯಾಗಿರುವ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಮತ್ತು ಟೊಯೊಟಾ ಫಾರ್ಚೂನರ್ ಖರೀದಿಯ ಬಹುತೇಕ ಕಾರು ಖರೀದಿದಾರರಿಗೆ ಕಷ್ಟಸಾಧ್ಯ.

ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಹೊಸ ಹೆಕ್ಟರ್ ಪ್ಲಸ್ ವಿಶೇಷತೆ ಏನು?

ಹೀಗಾಗಿ ಹೆಕ್ಟರ್ ಕಾರಿನಲ್ಲಿಯೇ ಹೊಸ ಆವೃತ್ತಿಯನ್ನು ಪರಿಚಯಿಸುತ್ತಿರುವ ಎಂಜಿ ಸಂಸ್ಥೆಯು ಹೆಕ್ಟರ್ ಪ್ಲಸ್ ಮೂಲಕ 7 ಸೀಟರ್ ಎಸ್‌ಯುವಿ ಖರೀದಿದಾರರನ್ನು ಸೆಳೆಯಲು ಮುಂದಾಗಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಇದು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಹೊಸ ಹೆಕ್ಟರ್ ಪ್ಲಸ್ ವಿಶೇಷತೆ ಏನು?

ಈ ಮೂಲಕ ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಹೊಸ ಕಾರನ್ನು ಇನ್ಮುಂದೆ ಸಾಮಾನ್ಯ ಮಾದರಿಯಲ್ಲಿ 5 ಸೀಟರ್ ಮತ್ತು ಹೆಕ್ಟರ್ ಪ್ಲಸ್‌ನಲ್ಲಿ 6 ಅಥವಾ 7 ಸೀಟರ್ ಆವೃತ್ತಿಯನ್ನು ಕೂಡಾ ಖರೀದಿ ಮಾಡಬಹುದಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಉತ್ತಮ ಆಸನ ಸೌಲಭ್ಯವನ್ನು ಒದಗಿಸಲಾಗಿದೆ. ಜೊತೆಗೆ ಸಾಮಾನ್ಯ ಕಾರು ಮಾದರಿಗಿಂತಲೂ ಕೆಲವು ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸಿರುವ ಎಂಜಿ ಸಂಸ್ಥೆಯು ಪ್ರತ್ಯೇಕ ಆಸನ ಸೌಲಭ್ಯ ಜೋಡಣೆ ಮಾಡಿದೆ.

ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಹೊಸ ಹೆಕ್ಟರ್ ಪ್ಲಸ್ ವಿಶೇಷತೆ ಏನು?

ಒಂದು ವೇಳೆ ಗ್ರಾಹಕರಿಗೆ ಹಿಂಬದಿಯ ಆಸನದ ಸಾಲಿನಲ್ಲಿ ಪ್ರತ್ಯೇಕ ಸೀಟು ಬೇಡವಾದಲ್ಲಿ ಅದೇ ಕಾರನ್ನು 7 ಸೀಟರ್ ಆವೃತ್ತಿಯನ್ನಾಗಿ ಕೂಡಾ ಮಾಡಿಕೊಳ್ಳಬಹುದಾಗಿದ್ದು, ಅದಕ್ಕಾಗಿ ಹೆಚ್ಚುವರಿ ಮೊತ್ತ ಪಾವತಿ ಮಾಡಬೇಕಾಗುತ್ತದೆ.

ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಹೊಸ ಹೆಕ್ಟರ್ ಪ್ಲಸ್ ವಿಶೇಷತೆ ಏನು?

ಎಂಜಿನ್ ಸಾಮರ್ಥ್ಯ

ಸದ್ಯ ಮಾರುಕಟ್ಟೆಯಲ್ಲಿರುವ 5 ಸೀಟರ್ ಹೆಕ್ಟರ್ ಕಾರು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 6 ಸೀಟರ್ ಹೆಕ್ಟರ್ ಪ್ಲಸ್ ಕಾರು ಕೂಡಾ ಸಾಮಾನ್ಯ ಕಾರಿನಂತೆಯೇ ಎಂಜಿನ್ ಆಯ್ಕೆ ಪಡೆಯಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಹೊಸ ಹೆಕ್ಟರ್ ಪ್ಲಸ್ ವಿಶೇಷತೆ ಏನು?

ಈ ಮೂಲಕ ಮತ್ತಷ್ಟು ಎಸ್‌ಯುವಿ ಕಾರು ಖರೀದಿದಾರರನ್ನು ಸೆಳೆಯಲಿರುವ ಎಂಜಿ ಮೋಟಾರ್ ಸಂಸ್ಥೆಯು ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಜೊತೆಗೆ ಟೊಯೊಟಾ ಇನೋವಾ ಕ್ರಿಸ್ಟಾ ಆವೃತ್ತಿಗೂ ಪೈಪೋಟಿ ನೀಡಲಿದ್ದು, ಸಾಮಾನ್ಯ ಹೆಕ್ಟರ್ ಕಾರಿಗಿಂತಲೂ ತುಸು ದುಬಾರಿಯಾಗಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಹೊಸ ಹೆಕ್ಟರ್ ಪ್ಲಸ್ ವಿಶೇಷತೆ ಏನು?

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, ಹೆಕ್ಟರ್ ಪ್ಲಸ್ ಮಾದರಿಯು ಸಾಮಾನ್ಯ ಕಾರಿಗಿಂತಲೂ ರೂ. 1.50 ಲಕ್ಷದಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಹೊಂದಿರಲಿದೆ.

ಬಿಡುಗಡೆಗೆ ಸಿದ್ದವಾಗಿರುವ ಎಂಜಿ ಮೋಟಾರ್ ಹೊಸ ಹೆಕ್ಟರ್ ಪ್ಲಸ್ ವಿಶೇಷತೆ ಏನು?

ಬಿಡುಗಡೆಯ ಅವಧಿ(ಅಂದಾಜು)

ಹೊಸ ಕಾರು ಸದ್ಯ ಅನಾವರಣಗೊಂಡಿದ್ದು, ಜೂನ್ ಅಥವಾ ಜುಲೈ ಹೊತ್ತಿಗೆ ಬಿಡುಗಡೆಯಾಗಿದೆ. ಹೆಕ್ಟರ್ ಪ್ಲಸ್ ಹೊರತುಪಡಿಸಿ ಒಟ್ಟು 14 ಹೊಸ ಕಾರುಗಳನ್ನು ದೆಹಲಿ ಆಟೋ ಎಕ್ಸ್‌ಪೋ ಅನಾವರಣಗೊಳಿಸಿರುವ ಎಂಜಿ ಸಂಸ್ಥೆಯು ಮುಂದಿನ ಎರಡು ವರ್ಷಗಳ ಅವಧಿಯಲ್ಲಿ 6ಕ್ಕೂ ಹೆಚ್ಚು ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲಿದೆ.

Most Read Articles

Kannada
English summary
MG Hector Plus, features, engine, seating details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X