7 ಸೀಟರ್ ಹೆಕ್ಟರ್ ಪ್ಲಸ್ ಬಿಡುಗಡೆ ಮಾಹಿತಿ ಬಹಿರಂಗಪಡಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ 7 ಸೀಟರ್ ಎಸ್‌ಯುವಿ ಮಾದರಿಯಾದ ಹೆಕ್ಟರ್ ಪ್ಲಸ್ ಕಾರನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರಿನ ಬಿಡುಗಡೆ ಮಾಹಿತಿಯನ್ನು ಬಹಿರಂಗಪಡಿಸಿದೆ.

7 ಸೀಟರ್ ಹೆಕ್ಟರ್ ಪ್ಲಸ್ ಬಿಡುಗಡೆ ಮಾಹಿತಿ ಬಹಿರಂಗಪಡಿಸಿದ ಎಂಜಿ

ಹೆಕ್ಟಕ್ ಪ್ಲಸ್ ಬಿಡುಗಡೆ ಕುರಿತಾದ ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿರುವ ಎಂಜಿ ಮೋಟಾರ್ ಕಂಪನಿಯು ಹೊಸ ಕಾರನ್ನು ಮುಂದಿನ ತಿಂಗಳು ಜುಲೈ ಮಧ್ಯಂತರದಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಇದೆ ತಿಂಗಳ ಕೊನೆಯಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿವೆ. ಹೆಕ್ಟರ್ ಪ್ಲಸ್ ಕಾರನ್ನು ಮೊದಲ ವರ್ಷದ ಸಂಭ್ರಮಕ್ಕಾಗಿ ಬಿಡುಗಡೆ ಮಾಡಲಾಗುತ್ತಿದ್ದು, ಸದ್ಯ ಉತ್ಪಾದನಾ ಮಾದರಿಯ ಅನಾವರಣಕ್ಕೆ ಸಿದ್ದತೆ ನಡೆಸಲಾಗುತ್ತಿದೆ.

7 ಸೀಟರ್ ಹೆಕ್ಟರ್ ಪ್ಲಸ್ ಬಿಡುಗಡೆ ಮಾಹಿತಿ ಬಹಿರಂಗಪಡಿಸಿದ ಎಂಜಿ

ಸಾಮಾನ್ಯ ಹೆಕ್ಟರ್ ಮಾದರಿಗಿಂತಲೂ ವಿಭಿನ್ನ ತಂತ್ರಜ್ಞಾನ ಸೌಲಭ್ಯಗಳನ್ನು ಪಡೆದುಕೊಂಡಿರುವ ಹೆಕ್ಟರ್ ಪ್ಲಸ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಅಥವಾ 7 ಸೀಟರ್ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿರಲಿದೆ.

7 ಸೀಟರ್ ಹೆಕ್ಟರ್ ಪ್ಲಸ್ ಬಿಡುಗಡೆ ಮಾಹಿತಿ ಬಹಿರಂಗಪಡಿಸಿದ ಎಂಜಿ

ಹೆಕ್ಟರ್ ಕಾರಿನಲ್ಲಿಯೇ ಹೊಸ ಆವೃತ್ತಿಯನ್ನು ಪರಿಚಯಿಸುತ್ತಿರುವ ಎಂಜಿ ಕಂಪನಿಯು ಹೆಕ್ಟರ್ ಪ್ಲಸ್ ಮೂಲಕ 7 ಸೀಟರ್ ಎಸ್‌ಯುವಿ ಖರೀದಿದಾರರನ್ನು ಸೆಳೆಯಲು ಮುಂದಾಗಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಇದು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.

7 ಸೀಟರ್ ಹೆಕ್ಟರ್ ಪ್ಲಸ್ ಬಿಡುಗಡೆ ಮಾಹಿತಿ ಬಹಿರಂಗಪಡಿಸಿದ ಎಂಜಿ

ಈ ಮೂಲಕ ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇನ್ಮುಂದೆ ಸಾಮಾನ್ಯ ಮಾದರಿಯಲ್ಲಿ 5 ಸೀಟರ್(ಹೆಕ್ಟರ್) ಮತ್ತು ಹೆಕ್ಟರ್ ಪ್ಲಸ್‌ನಲ್ಲಿ 6 ಅಥವಾ 7 ಸೀಟರ್ ಆವೃತ್ತಿಯನ್ನು ಕೂಡಾ ಖರೀದಿ ಮಾಡಬಹುದಾಗಿದೆ.

7 ಸೀಟರ್ ಹೆಕ್ಟರ್ ಪ್ಲಸ್ ಬಿಡುಗಡೆ ಮಾಹಿತಿ ಬಹಿರಂಗಪಡಿಸಿದ ಎಂಜಿ

ಹೆಕ್ಟರ್ ಪ್ಲಸ್‌ನಲ್ಲಿ ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಉತ್ತಮ ಆಸನ ಸೌಲಭ್ಯವನ್ನು ಒದಗಿಸಲಾಗಿದ್ದು, ಸಾಮಾನ್ಯ ಕಾರು ಮಾದರಿಗಿಂತಲೂ ಕೆಲವು ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸಿರುವ ಎಂಜಿ ಕಂಪನಿಯು ಪ್ರತ್ಯೇಕ ಆಸನ ಸೌಲಭ್ಯ ಜೋಡಣೆ ಮಾಡಿದೆ.

MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

7 ಸೀಟರ್ ಹೆಕ್ಟರ್ ಪ್ಲಸ್ ಬಿಡುಗಡೆ ಮಾಹಿತಿ ಬಹಿರಂಗಪಡಿಸಿದ ಎಂಜಿ

ಎಂಜಿನ್ ಸಾಮರ್ಥ್ಯ

ಸದ್ಯ ಮಾರುಕಟ್ಟೆಯಲ್ಲಿರುವ 5 ಸೀಟರ್ ಹೆಕ್ಟರ್ ಕಾರು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 6 ಸೀಟರ್ ಹೆಕ್ಟರ್ ಪ್ಲಸ್ ಕಾರು ಕೂಡಾ ಸಾಮಾನ್ಯ ಕಾರಿನಂತೆಯೇ ಎಂಜಿನ್ ಆಯ್ಕೆ ಪಡೆಯಲಿದೆ.

7 ಸೀಟರ್ ಹೆಕ್ಟರ್ ಪ್ಲಸ್ ಬಿಡುಗಡೆ ಮಾಹಿತಿ ಬಹಿರಂಗಪಡಿಸಿದ ಎಂಜಿ

ಈ ಮೂಲಕ ಮತ್ತಷ್ಟು ಎಸ್‌ಯುವಿ ಕಾರು ಖರೀದಿದಾರರನ್ನು ಸೆಳೆಯಲಿರುವ ಎಂಜಿ ಮೋಟಾರ್ ಕಂಪನಿಯು ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ ಜೊತೆಗೆ ಟೊಯೊಟಾ ಇನೋವಾ ಕ್ರಿಸ್ಟಾ ಆವೃತ್ತಿಗೂ ಪೈಪೋಟಿ ನೀಡಲಿದ್ದು, ಸಾಮಾನ್ಯ ಹೆಕ್ಟರ್ ಕಾರಿಗಿಂತಲೂ ತುಸು ದುಬಾರಿಯಾಗಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

7 ಸೀಟರ್ ಹೆಕ್ಟರ್ ಪ್ಲಸ್ ಬಿಡುಗಡೆ ಮಾಹಿತಿ ಬಹಿರಂಗಪಡಿಸಿದ ಎಂಜಿ

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, ಹೆಕ್ಟರ್ ಪ್ಲಸ್ ಮಾದರಿಯು ಸಾಮಾನ್ಯ ಕಾರಿಗಿಂತಲೂ ರೂ. 1.50 ಲಕ್ಷದಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಹೊಂದಿರಲಿದೆ.

Article Published On: Wednesday, June 10, 2020, 13:47 [IST]
English summary
MG Hector Plus To Launch In India In July 2020. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+