Just In
Don't Miss!
- News
ಕೊಟ್ಟ ಮಾತು ಉಳಿಸಿಕೊಂಡ ಬೈಡನ್, ಸಂಪುಟದಲ್ಲಿ ಭಾರತೀಯರೇ ಮಿಂಚಿಂಗ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೆಕ್ಟರ್ ಪ್ಲಸ್ ಕಾರಿನ ಹೊಸ ದರ ಪಟ್ಟಿ ಬಿಡುಗಡೆ ಮಾಡಿದ ಎಂಜಿ ಮೋಟಾರ್
ಎಂಜಿ ಮೋಟಾರ್ ಕಂಪನಿಯು ನಿಗದಿಯಂತೆ ಹೆಕ್ಟರ್ ಪ್ಲಸ್ ಕಾರಿನ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಹೊಸ ಕಾರು ಬಿಡುಗಡೆಯ ಒಂದೂವರೆ ತಿಂಗಳ ನಂತರ ದರ ಪರಿಷ್ಕರಣೆ ಮಾಡಿ ಹೊಸ ದರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಳೆದ ತಿಂಗಳು 13ರಂದು ಹೆಕ್ಟರ್ ಪ್ಲಸ್ ಬಿಡುಗಡೆಯ ಸಂದರ್ಭದಲ್ಲೇ ಹೊಸ ಕಾರಿನ ಬೆಲೆಯನ್ನು ಹೆಚ್ಚಳ ಮಾಡುವ ಬಗ್ಗೆ ಹೇಳಿಕೊಂಡಿದ್ದ ಎಂಜಿ ಮೋಟಾರ್ ನಿಗದಿತ ಅವಧಿಯಲ್ಲಿ ಹೊಸ ಕಾರು ಖರೀದಿ ಮಾಡುವ ಗ್ರಾಹಕರಿಗೆ ಆಫರ್ ನೀಡಿತ್ತು. ಇದೀಗ ಆಫರ್ ಅವಧಿ ಮುಗಿದಿದ್ದು, ಹೊಸ ದರ ಪಟ್ಟಿ ಬಿಡುಗಡೆ ಮಾಡಿದೆ. ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರು ರೂ. 5 ಸಾವಿರದಿಂದ ರೂ.46 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದುಕೊಂಡಿದೆ.

ಈ ಮೊದಲು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.49 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.18.54 ಲಕ್ಷಕ್ಕೆ ಬಿಡುಗಡೆಗೊಂಡಿದ್ದ ಎಂಜಿ ಹೆಕ್ಟರ್ ಪ್ಲಸ್ ಕಾರು ಇದೀಗ ಆರಂಭಿಕವಾಗಿ ರೂ. 13.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು 18.69 ಲಕ್ಷ ಬೆಲೆ ಹೊಂದಿದೆ.

ಹೆಕ್ಟರ್ ಪ್ಲಸ್ ಬೆಲೆ ಪಟ್ಟಿ(ದೆಹಲಿ ಎಕ್ಸ್‌ಶೋರೂಂ ಪ್ರಕಾರ)
ವೆರಿಯೆಂಟ್‌ಗಳು | ಬಿಡುಗಡೆಯ ಅವಧಿಯಲ್ಲಿನ ದರ | ಪರಿಷ್ಕರಣೆ ಮಾಡಲಾದ ದರ | ಹೆಚ್ಚಳವಾದ ದರ |
ಸ್ಪೈಲ್ (1.5 ಪೆಟ್ರೋಲ್ ಎಂಟಿ) | ₹13.49 ಲಕ್ಷ | ₹13.74 ಲಕ್ಷ | ₹25,000 |
ಸ್ಮಾರ್ಟ್ (1.5 ಪೆಟ್ರೋಲ್ ಎಟಿ) | ₹16.65 ಲಕ್ಷ | ₹16.70 ಲಕ್ಷ | ₹5,000 |
ಶಾರ್ಪ್ (1.5 ಪೆಟ್ರೋಲ್ ಎಟಿ) | ₹18.21 ಲಕ್ಷ | ₹18.36 ಲಕ್ಷ | ₹15,000 |
ಶಾರ್ಪ್ (1.5 ಪೆಟ್ರೋಲ್-ಹೈಬ್ರಿಡ್ ಎಂಟಿ) | ₹17.29 ಲಕ್ಷ | ₹17.39 ಲಕ್ಷ | ₹10,000 |
ಸ್ಟೈಲ್ (2.0ಡೀಸೆಲ್ ಎಂಟಿ) | ₹14.44 ಲಕ್ಷ | ₹14.90 ಲಕ್ಷ | ₹46,000 |
ಸೂಪರ್ (2.0 ಡೀಸೆಲ್ ಎಂಟಿ) | ₹15.65 ಲಕ್ಷ | ₹15.70 ಲಕ್ಷ | ₹5,000 |
ಸ್ಮಾರ್ಟ್ (2.0 ಡೀಸೆಲ್ ಎಂಟಿ) | ₹17.15 ಲಕ್ಷ | ₹17.20 ಲಕ್ಷ | ₹5,000 |
ಶಾರ್ಪ್ (2.0 ಡೀಸೆಲ್ ಎಂಟಿ) | ₹18.54 ಲಕ್ಷ | ₹18.69 ಲಕ್ಷ | ₹15,000 |

ಇನ್ನು ಹೊಸ ಹೆಕ್ಟರ್ ಪ್ಲಸ್ ಎಸ್‌ಯುವಿ ಆವೃತ್ತಿಯು ಸದ್ಯಕ್ಕೆ 6 ಆಸನ ಸೌಲಭ್ಯಗಳೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು ಸಹ ಮಾರಾಟ ಮಾಡುವುದಾಗಿ ಎಂಜಿ ಕಂಪನಿಯು ಹೇಳಿಕೊಂಡಿದೆ. ಹೊಸ ಕಾರು ಗ್ರಾಹಕರ ಬೇಡಿಕೆ ಅನ್ವಯ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲದೆ ಎಂಪಿವಿ ಕಾರು ಮಾದರಿಗಳಿಗೂ ಪೈಪೋಟಿ ನೀಡಲುವ ನೀರಿಕ್ಷೆಯಲ್ಲಿದೆ.

ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಒಟ್ಟು 8 ವೆರಿಯೆಂಟ್‌ಗಳನ್ನು ಪಡೆದುಕೊಂಡಿದ್ದು, ಪೆಟ್ರೋಲ್ ಮಾದರಿಯಲ್ಲಿ ಮೂರು ವೆರಿಯೆಂಟ್, ಪೆಟ್ರೋಲ್ ಹೈಬ್ರಿಡ್ ಮಾದರಿಯಲ್ಲಿ ಒಂದು ವೆರಿಯೆಂಟ್ ಹೊಂದಿದೆ. ಹಾಗೆಯೇ ಡೀಸೆಲ್ ವೆರಿಯೆಂಟ್‌ನಲ್ಲಿ ನಾಲ್ಕು ವೆರಿಯೆಂಟ್‌ಗಳನ್ನು ಪಡೆದುಕೊಂಡಿದ್ದು, ಸಾಮಾನ್ಯ ಹೆಕ್ಟರ್ ಕಾರಿಗೂ ಹೆಕ್ಟರ್ ಪ್ಲಸ್ ಕಾರು ರೂ.1.11 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಂಡಿದೆ.

ಹೊಚ್ಚ ಹೊಸ ಹೆಕ್ಟರ್ ಪ್ಲಸ್ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಹೇಳುವುದಾದರೇ, ಹೊಸ ಕಾರು ಸಾಮಾನ್ಯ ಹೆಕ್ಟರ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಸಿದ್ದಗೊಂಡಿದ್ದು, 2+2+2 ಆಸನ ವಿನ್ಯಾಸವನ್ನು ಪಡೆದುಕೊಂಡಿದೆ.

ಹೊಸ ಕಾರಿನ ಮಧ್ಯದ ಸಾಲಿನಲ್ಲಿರುವ ಕ್ಯಾಪ್ಟನ್ ಸೀಟ್ ಕಾರಿನ ಪ್ರಮುಖ ಆಕರ್ಷಣೆಯಾಗಿದ್ದು, ಬ್ರೌನ್ ಲೆದರ್ ಆಸನವು ಹೆಡ್ ರೆಸ್ಟ್ ಮತ್ತು ಸೆಂಟರ್ ಆರ್ಮ್ ರೆಸ್ಟ್ ಫೀಚರ್ಸ್ ಪಡೆದುಕೊಂಡಿದೆ. ಜೊತೆಗೆ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಎಂಜಿನ್ ಸಾಮಾರ್ಥ್ಯ
ಸಾಮಾನ್ಯ ಮಾದರಿಯ 5 ಆಸನವುಳ್ಳ ಹೆಕ್ಟರ್ ಕಾರಿನಲ್ಲಿ ನೀಡಲಾಗಿರುವ ಎಂಜಿನ್ ಮಾದರಿಯೇ ಇದೀಗ ಹೊಸ ಹೆಕ್ಟರ್ ಪ್ಲಸ್‌ನಲ್ಲೂ ನೀಡಲಾಗಿದ್ದು, 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಜೋಡಣೆ ಮಾಡಲಾಗಿದೆ.

2.0-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 170-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದರೆ 1.5-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 143-ಬಿಎಚ್‌ಪಿ ಮತ್ತು ಹೈಬ್ರಿಡ್ ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ 48ವೋಲ್ಟ್ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಉತ್ತಮ ಇಂಧನ ಕಾರ್ಯಕ್ಷಮತೆ ಹೊಂದಿದೆ.