ಲಾಕ್‌ಡೌನ್ ನಂತರ ಬಿಡುಗಡೆಯಾಗಲಿದೆ 7 ಸೀಟರ್ ಎಂಜಿ ಹೆಕ್ಟರ್ ಪ್ಲಸ್
ಹೆಕ್ಟರ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆಗೆ ಸಜ್ಜಾಗಿರುವ ಎಂಜಿ ಮೋಟಾರ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದತೆ ನಡೆಸಿದ್ದು, 7 ಸೀಟರ್ ಮಾದರಿಯಾದ ಹೆಕ್ಟರ್ ಪ್ಲಸ್ ಕೂಡಾ ಪ್ರಮುಖ ಆಕರ್ಷಣೆಯಾಗಿದೆ.

ಸದ್ಯ ಭಾರತ ಸೇರಿದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕರೋನಾ ವೈರಸ್ ತಡೆಗಾಗಿ ಲಾಕ್ ಡೌನ್ ವಿಧಿಸಿರುವುದರಿಂದ ಆಟೋ ಮೊಬೈಲ್ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಿದ್ದು, ಬಹುತೇಕ ಆಟೋ ಕಂಪನಿಗಳು ಹೊಸ ವಾಹನಗಳ ಬಿಡುಗಡೆಯನ್ನು ಮುಂದಕ್ಕೆ ಹಾಕುವ ಮೂಲಕ ಸದ್ಯ ಮಾರುಕಟ್ಟೆಯಲ್ಲಿ ವಾಹನ ಮಾದರಿಗಳ ಮಾರಾಟವನ್ನು ಹೆಚ್ಚಿಸುವುದು ಹೇಗೆ ಎನ್ನುವುದರ ಕುರಿತು ಯೋಜನೆ ರೂಪಿಸುತ್ತಿವೆ.

ಆದರೆ ಎಂಜಿ ಮೋಟಾರ್ ಕಂಪನಿಯು ಸಂಕಷ್ಟದ ಪರಿಸ್ಥಿತಿಯಲ್ಲೂ ಹೊಸ ಕಾರುಗಳ ಬಿಡುಗಡೆಯನ್ನು ನಿಗದಿತ ಅವಧಿಯ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೆಕ್ಟರ್ ಪ್ಲಸ್ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ರೋಡ್ ಟೆಸ್ಟಿಂಗ್ ಪುನಾರಂಭಿಸಿದೆ.

ಹೊಸ ಕಾರು ಇದೇ ವರ್ಷ ಜುಲೈ ಅಥವಾ ಅಗಸ್ಟ್ ಅವಧಿಯಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರುಗಳ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದೆ.

ಸಾಮಾನ್ಯ ಹೆಕ್ಟರ್ ಮಾದರಿಗಿಂತಲೂ ವಿಭಿನ್ನ ತಂತ್ರಜ್ಞಾನ ಸೌಲಭ್ಯ ಪಡೆದುಕೊಂಡಿರುವ ಹೆಕ್ಟರ್ ಪ್ಲಸ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಅಥವಾ 7 ಸೀಟರ್ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿರಲಿದೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಹೆಕ್ಟರ್ ಕಾರಿನಲ್ಲಿಯೇ ಹೊಸ ಆವೃತ್ತಿಯನ್ನು ಪರಿಚಯಿಸುತ್ತಿರುವ ಎಂಜಿ ಸಂಸ್ಥೆಯು ಹೆಕ್ಟರ್ ಪ್ಲಸ್ ಮೂಲಕ 7 ಸೀಟರ್ ಎಸ್‌ಯುವಿ ಖರೀದಿದಾರರನ್ನು ಸೆಳೆಯಲು ಮುಂದಾಗಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಇದು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ. ಈ ಮೂಲಕ ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇನ್ಮುಂದೆ ಸಾಮಾನ್ಯ ಮಾದರಿಯಲ್ಲಿ 5 ಸೀಟರ್(ಹೆಕ್ಟರ್) ಮತ್ತು ಹೆಕ್ಟರ್ ಪ್ಲಸ್‌ನಲ್ಲಿ 6 ಅಥವಾ 7 ಸೀಟರ್ ಆವೃತ್ತಿಯನ್ನು ಕೂಡಾ ಖರೀದಿ ಮಾಡಬಹುದಾಗಿದೆ.

ಹೆಕ್ಟರ್ ಪ್ಲಸ್‌ನಲ್ಲಿ ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಉತ್ತಮ ಆಸನ ಸೌಲಭ್ಯವನ್ನು ಒದಗಿಸಲಾಗಿದ್ದು, ಸಾಮಾನ್ಯ ಕಾರು ಮಾದರಿಗಿಂತಲೂ ಕೆಲವು ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸಿರುವ ಎಂಜಿ ಕಂಪನಿಯು ಪ್ರತ್ಯೇಕ ಆಸನ ಸೌಲಭ್ಯ ಜೋಡಣೆ ಮಾಡಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಎಂಜಿನ್ ಸಾಮರ್ಥ್ಯ
ಸದ್ಯ ಮಾರುಕಟ್ಟೆಯಲ್ಲಿರುವ 5 ಸೀಟರ್ ಹೆಕ್ಟರ್ ಕಾರು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 6 ಸೀಟರ್ ಹೆಕ್ಟರ್ ಪ್ಲಸ್ ಕಾರು ಕೂಡಾ ಸಾಮಾನ್ಯ ಕಾರಿನಂತೆಯೇ ಎಂಜಿನ್ ಆಯ್ಕೆ ಪಡೆಯಲಿದೆ.

ಈ ಮೂಲಕ ಮತ್ತಷ್ಟು ಎಸ್‌ಯುವಿ ಕಾರು ಖರೀದಿದಾರರನ್ನು ಸೆಳೆಯಲಿರುವ ಎಂಜಿ ಮೋಟಾರ್ ಕಂಪನಿಯು ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಜೊತೆಗೆ ಟೊಯೊಟಾ ಇನೋವಾ ಕ್ರಿಸ್ಟಾ ಆವೃತ್ತಿಗೂ ಪೈಪೋಟಿ ನೀಡಲಿದ್ದು, ಸಾಮಾನ್ಯ ಹೆಕ್ಟರ್ ಕಾರಿಗಿಂತಲೂ ತುಸು ದುಬಾರಿಯಾಗಲಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, ಹೆಕ್ಟರ್ ಪ್ಲಸ್ ಮಾದರಿಯು ಸಾಮಾನ್ಯ ಕಾರಿಗಿಂತಲೂ ರೂ. 1.50 ಲಕ್ಷದಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಹೊಂದಿರಲಿದೆ.
Source:rushlane


Click it and Unblock the Notifications