ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

5 ಸೀಟರ್ ಹೆಕ್ಟರ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆಗೆ ಸಜ್ಜಾಗಿರುವ ಎಂಜಿ ಮೋಟಾರ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದತೆ ನಡೆಸಿದ್ದು, 7 ಸೀಟರ್ ಮಾದರಿಯಾದ ಹೆಕ್ಟರ್ ಪ್ಲಸ್ ಕೂಡಾ ಪ್ರಮುಖ ಕಾರು ಮಾದರಿಯಾಗಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

ಹೆಕ್ಟರ್ ಪ್ಲಸ್ ಮಾದರಿಯು ಮುಂಬರುವ ಒಂದೆರಡು ತಿಂಗಳಿನಲ್ಲಿ ಅಧಿಕೃತವಾಗಿ ಮಾರಾಟಕ್ಕೆ ಲಭ್ಯವಾಗುತ್ತಿದ್ದು, ಮೊದಲ ವರ್ಷದ ಸಂಭ್ರಮಕ್ಕಾಗಿ ಹೆಕ್ಟರ್ ಪ್ಲಸ್ ಮಾದರಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಕರೋನಾ ವೈರಸ್ ಪರಿಣಾಮ ಹೊಸ ಎಂಜಿನ್ ಕಾರ್ಯಕ್ಷಮತೆ ಕುರಿತಾದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ್ದ ಎಂಜಿ ಕಂಪನಿಯು ಇದೀಗ ಲಾಕ್‌ಡೌನ್ ಸಡಿಲಿಕೆಯ ನಂತರ ಮತ್ತೆ ರೋಡ್ ಟೆಸ್ಟಿಂಗ್‌ಗೆ ಮರುಚಾಲನೆ ನೀಡಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

ಹರಿಣಾಯದ ಹೊರವಲಯದಲ್ಲಿ ರೋಡ್ ಟೆಸ್ಟಿಂಗ್ ನಡೆಸುವಾಗ ಪ್ರತಿಸ್ಪರ್ಧಿ ಕಾರು ಮಾದರಿಯಾದ ಇನೋವಾ ಕ್ರಿಸ್ಟಾ ಜೊತೆಗಿನ ಹೆಕ್ಟರ್ ಪ್ಲಸ್ ಮಾದರಿಯ ಚಿತ್ರಗಳನ್ನು ಸೆರೆಹಿಡಿಯಲಾಗಿದ್ದು, ಪ್ರತಿಸ್ಪರ್ಧಿ ಮಾದರಿಯಲ್ಲೇ ಬಹುತೇಕ ಫೀಚರ್ಸ್‌ಗಳನ್ನು ಹೆಕ್ಟರ್ ಪ್ಲಸ್ ಪಡೆದುಕೊಂಡಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

ಹೊಸ ಕಾರು ಇದೇ ವರ್ಷ ಜುಲೈ ಅಥವಾ ಅಗಸ್ಟ್ ಅವಧಿಯಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಶೀಘ್ರದಲ್ಲೇ ಪ್ರದರ್ಶನ ಮಾಡಲು ಎಂಜಿ ಮೋಟಾರ್ ಸಿದ್ದತೆ ನಡೆಸಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

ಸಾಮಾನ್ಯ ಹೆಕ್ಟರ್ ಮಾದರಿಗಿಂತಲೂ ವಿಭಿನ್ನ ತಂತ್ರಜ್ಞಾನ ಸೌಲಭ್ಯ ಪಡೆದುಕೊಂಡಿರುವ ಹೆಕ್ಟರ್ ಪ್ಲಸ್ ಎಸ್‌ಯುವಿ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಅಥವಾ 7 ಸೀಟರ್ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಿರಲಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

ಹೆಕ್ಟರ್ ಕಾರಿನಲ್ಲಿಯೇ ಹೊಸ ಆವೃತ್ತಿಯನ್ನು ಪರಿಚಯಿಸುತ್ತಿರುವ ಎಂಜಿ ಸಂಸ್ಥೆಯು ಹೆಕ್ಟರ್ ಪ್ಲಸ್ ಮೂಲಕ 7 ಸೀಟರ್ ಎಸ್‌ಯುವಿ ಖರೀದಿದಾರರನ್ನು ಸೆಳೆಯಲು ಮುಂದಾಗಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಇದು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

ಈ ಮೂಲಕ ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ಇನ್ಮುಂದೆ ಸಾಮಾನ್ಯ ಮಾದರಿಯಲ್ಲಿ 5 ಸೀಟರ್(ಹೆಕ್ಟರ್) ಮತ್ತು ಹೆಕ್ಟರ್ ಪ್ಲಸ್‌ನಲ್ಲಿ 6 ಅಥವಾ 7 ಸೀಟರ್ ಆವೃತ್ತಿಯನ್ನು ಕೂಡಾ ಖರೀದಿ ಮಾಡಬಹುದಾಗಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

ಹೆಕ್ಟರ್ ಪ್ಲಸ್‌ನಲ್ಲಿ ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಉತ್ತಮ ಆಸನ ಸೌಲಭ್ಯವನ್ನು ಒದಗಿಸಲಾಗಿದ್ದು, ಸಾಮಾನ್ಯ ಕಾರು ಮಾದರಿಗಿಂತಲೂ ಕೆಲವು ಪ್ರೀಮಿಯಂ ಸೌಲಭ್ಯಗಳನ್ನು ಒದಗಿಸಿರುವ ಎಂಜಿ ಕಂಪನಿಯು ಪ್ರತ್ಯೇಕ ಆಸನ ಸೌಲಭ್ಯ ಜೋಡಣೆ ಮಾಡಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

ಎಂಜಿನ್ ಸಾಮರ್ಥ್ಯ

ಸದ್ಯ ಮಾರುಕಟ್ಟೆಯಲ್ಲಿರುವ 5 ಸೀಟರ್ ಹೆಕ್ಟರ್ ಕಾರು 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 6 ಸೀಟರ್ ಹೆಕ್ಟರ್ ಪ್ಲಸ್ ಕಾರು ಕೂಡಾ ಸಾಮಾನ್ಯ ಕಾರಿನಂತೆಯೇ ಎಂಜಿನ್ ಆಯ್ಕೆ ಪಡೆಯಲಿದೆ.

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

ಈ ಮೂಲಕ ಮತ್ತಷ್ಟು ಎಸ್‌ಯುವಿ ಕಾರು ಖರೀದಿದಾರರನ್ನು ಸೆಳೆಯಲಿರುವ ಎಂಜಿ ಮೋಟಾರ್ ಕಂಪನಿಯು ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಜೊತೆಗೆ ಟೊಯೊಟಾ ಇನೋವಾ ಕ್ರಿಸ್ಟಾ ಆವೃತ್ತಿಗೂ ಪೈಪೋಟಿ ನೀಡಲಿದ್ದು, ಸಾಮಾನ್ಯ ಹೆಕ್ಟರ್ ಕಾರಿಗಿಂತಲೂ ತುಸು ದುಬಾರಿಯಾಗಲಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಇನೋವಾ ಕ್ರಿಸ್ಟಾ ಕಾರಿಗೆ ಪೈಪೋಟಿ ನೀಡಲು ಸಜ್ಜಾದ ಎಂಜಿ ಹೆಕ್ಟರ್ ಪ್ಲಸ್

ಸದ್ಯ ಸಾಮಾನ್ಯ ಹೆಕ್ಟರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.74 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.17.44 ಲಕ್ಷ ಬೆಲೆ ಹೊಂದಿದ್ದು, ಹೆಕ್ಟರ್ ಪ್ಲಸ್ ಮಾದರಿಯು ಸಾಮಾನ್ಯ ಕಾರಿಗಿಂತಲೂ ರೂ. 1.50 ಲಕ್ಷದಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆ ಹೊಂದಿರಲಿದೆ.

Most Read Articles

Kannada
English summary
MG Hector Plus Spied Testing In India Ahead Of India Launch Soon: Spy Pics & Details. Read in Kannada.
Story first published: Wednesday, June 3, 2020, 18:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X