ಹೆಕ್ಟರ್ ಪ್ಲಸ್ ಮಾದರಿಯ ಸ್ಟೈಲ್ ವೆರಿಯೆಂಟ್ ಸ್ಥಗಿತಗೊಳಿಸಿದ ಎಂಜಿ ಮೋಟಾರ್

ಎಂಜಿ ಮೋಟಾರ್ ಕಂಪನಿಯು ತನ್ನ 6 ಸೀಟರ್ ಎಸ್‌ಯುವಿ ಕಾರು ಮಾದರಿಯಾದ ಹೆಕ್ಟರ್ ಪ್ಲಸ್ ಮೂಲಕ ಎಸ್‌ಯುವಿ ಕಾರು ವಿಭಾಗದಲ್ಲಿ ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಂಟ್ರಿ ಲೆವಲ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಿದೆ.

ಹೆಕ್ಟರ್ ಪ್ಲಸ್ ಮಾದರಿಯ ಸ್ಟೈಲ್ ವೆರಿಯೆಂಟ್ ಸ್ಥಗಿತಗೊಳಿಸಿದ ಎಂಜಿ

ಹೆಕ್ಟರ್ ಪ್ಲಸ್ ಮಾದರಿಯನ್ನು ಕಳೆದ ಜುಲೈನಲ್ಲಿ ಬಿಡುಗಡೆ ಮಾಡಿದ್ದ ಸಂದರ್ಭದಲ್ಲಿ ಸ್ಟೈಲ್, ಸ್ಮಾರ್ಟ್, ಶಾರ್ಪ್ ಮತ್ತು ಸೂಪರ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡಿತ್ತು. ಆದರೆ ಹೊಸ ಕಾರಿನಲ್ಲಿ ಸ್ಮಾರ್ಟ್ ಮತ್ತು ಶಾರ್ಪ್ ವೆರಿಯೆಂಟ್‌ಗಳು ಗ್ರಾಹಕರ ಬೇಡಿಕೆ ಅಗ್ರಸ್ಥಾನದಲ್ಲಿದ್ದರೆ ಹೈ ಎಂಡ್ ಮಾದರಿಯು ಮೂರನೇ ಸ್ಥಾನದಲ್ಲಿ ಮತ್ತು ಸ್ಟೈಲ್ ವೆರಿಯೆಂಟ್ ಗ್ರಾಹಕರ ಬೇಡಿಕೆಯಲ್ಲಿ ತ್ರೀವ ಹಿನ್ನಡೆ ಅನುಭವಿಸಿದೆ.

ಹೆಕ್ಟರ್ ಪ್ಲಸ್ ಮಾದರಿಯ ಸ್ಟೈಲ್ ವೆರಿಯೆಂಟ್ ಸ್ಥಗಿತಗೊಳಿಸಿದ ಎಂಜಿ

ಈ ಹಿನ್ನಲೆಯಲ್ಲಿ ಸ್ಟೈಲ್ ವೆರಿಯೆಂಟ್ ಮಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ಸ್ಟೈಲ್ ವೆರಿಯೆಂಟ್ 1.5-ಲೀಟರ್ ಪೆಟ್ರೋಲ್ ಮ್ಯಾನುವಲ್ ಮತ್ತು 2.0-ಲೀಟರ್ ಡೀಸೆಲ್ ಮ್ಯಾನುವಲ್ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 13.74 ಲಕ್ಷ ಮತ್ತು ರೂ. 14.90 ಲಕ್ಷ ಬೆಲೆ ಹೊಂದಿತ್ತು.

ಹೆಕ್ಟರ್ ಪ್ಲಸ್ ಮಾದರಿಯ ಸ್ಟೈಲ್ ವೆರಿಯೆಂಟ್ ಸ್ಥಗಿತಗೊಳಿಸಿದ ಎಂಜಿ

ಸ್ಟೈಲ್ ವೆರಿಯೆಂಟ್ ಸ್ಥಗಿತದ ನಂತರ ಇದೀಗ ಸೂಪರ್ ಡೀಸೆಲ್ ಮ್ಯಾನುವಲ್ ವೆರಿಯೆಂಟ್ ಆರಂಭಿಕ ಕಾರು ಮಾದರಿಯಾಗಿದ್ದು, ಸ್ಟೈಲ್ ವೆರಿಯೆಂಟ್ ಸ್ಥಗಿತದ ನಂತರ ಹೊಸ ಹೆಕ್ಟರ್ ಕಾರು ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.70 ಲಕ್ಷದಿಂದ ಟಾಪ್ ಎಂಡ್ ಮಾದರಿಯು 18.70 ಲಕ್ಷ ಬೆಲೆ ಹೊಂದಿದೆ.

ಹೆಕ್ಟರ್ ಪ್ಲಸ್ ಮಾದರಿಯ ಸ್ಟೈಲ್ ವೆರಿಯೆಂಟ್ ಸ್ಥಗಿತಗೊಳಿಸಿದ ಎಂಜಿ

ಹೊಸ ಹೆಕ್ಟರ್ ಪ್ಲಸ್ ಎಸ್‌ಯುವಿ ಆವೃತ್ತಿಯು ಸದ್ಯಕ್ಕೆ 6 ಆಸನ ಸೌಲಭ್ಯಗಳೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು ಸಹ ಮಾರಾಟ ಮಾಡುವುದಾಗಿ ಎಂಜಿ ಕಂಪನಿಯು ಹೇಳಿಕೊಂಡಿದೆ. ಹೊಸ ಕಾರು ಗ್ರಾಹಕರ ಬೇಡಿಕೆ ಅನ್ವಯ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲದೆ ಎಂಪಿವಿ ಕಾರು ಮಾದರಿಗಳಿಗೂ ಪೈಪೋಟಿ ನೀಡಲುವ ನೀರಿಕ್ಷೆಯಲ್ಲಿದೆ.

ಹೆಕ್ಟರ್ ಪ್ಲಸ್ ಮಾದರಿಯ ಸ್ಟೈಲ್ ವೆರಿಯೆಂಟ್ ಸ್ಥಗಿತಗೊಳಿಸಿದ ಎಂಜಿ

ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಒಟ್ಟು ಆರು ವೆರಿಯೆಂಟ್‌ಗಳನ್ನು ಪಡೆದುಕೊಂಡಿದ್ದು, ಪೆಟ್ರೋಲ್ ಮಾದರಿಯಲ್ಲಿ ಎರಡು ವೆರಿಯೆಂಟ್, ಪೆಟ್ರೋಲ್ ಹೈಬ್ರಿಡ್ ಮಾದರಿಯಲ್ಲಿ ಒಂದು ವೆರಿಯೆಂಟ್ ಹೊಂದಿದೆ. ಹಾಗೆಯೇ ಡೀಸೆಲ್ ವೆರಿಯೆಂಟ್‌ನಲ್ಲಿ ಮೂರು ವೆರಿಯೆಂಟ್‌ಗಳನ್ನು ಪಡೆದುಕೊಂಡಿದ್ದು, ಸಾಮಾನ್ಯ ಹೆಕ್ಟರ್ ಕಾರಿಗೂ ಹೆಕ್ಟರ್ ಪ್ಲಸ್ ಕಾರು ಆರಂಭಿಕ ಮಾದರಿಯ ನಡುವೆಯೂ ರೂ. 2.14 ಲಕ್ಷ ಬೆಲೆ ಅಂತರವಿದೆ.

ಹೆಕ್ಟರ್ ಪ್ಲಸ್ ಮಾದರಿಯ ಸ್ಟೈಲ್ ವೆರಿಯೆಂಟ್ ಸ್ಥಗಿತಗೊಳಿಸಿದ ಎಂಜಿ

ಹೊಚ್ಚ ಹೊಸ ಹೆಕ್ಟರ್ ಪ್ಲಸ್ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಹೇಳುವುದಾದರೇ, ಹೊಸ ಕಾರು ಸಾಮಾನ್ಯ ಹೆಕ್ಟರ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಸಿದ್ದಗೊಂಡಿದ್ದು, 2+2+2 ಆಸನ ವಿನ್ಯಾಸವನ್ನು ಪಡೆದುಕೊಂಡಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೆಕ್ಟರ್ ಪ್ಲಸ್ ಮಾದರಿಯ ಸ್ಟೈಲ್ ವೆರಿಯೆಂಟ್ ಸ್ಥಗಿತಗೊಳಿಸಿದ ಎಂಜಿ

ಹೊಸ ಕಾರಿನ ಮಧ್ಯದ ಸಾಲಿನಲ್ಲಿರುವ ಕ್ಯಾಪ್ಟನ್ ಸೀಟ್ ಕಾರಿನ ಪ್ರಮುಖ ಆಕರ್ಷಣೆಯಾಗಿದ್ದು, ಬ್ರೌನ್ ಲೆದರ್ ಆಸನವು ಹೆಡ್ ರೆಸ್ಟ್ ಮತ್ತು ಸೆಂಟರ್ ಆರ್ಮ್ ರೆಸ್ಟ್ ಫೀಚರ್ಸ್ ಪಡೆದುಕೊಂಡಿದೆ. ಜೊತೆಗೆ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಹೆಕ್ಟರ್ ಪ್ಲಸ್ ಮಾದರಿಯ ಸ್ಟೈಲ್ ವೆರಿಯೆಂಟ್ ಸ್ಥಗಿತಗೊಳಿಸಿದ ಎಂಜಿ

ಎಂಜಿನ್ ಸಾಮಾರ್ಥ್ಯ

ಸಾಮಾನ್ಯ ಮಾದರಿಯ 5 ಆಸನವುಳ್ಳ ಹೆಕ್ಟರ್ ಕಾರಿನಲ್ಲಿ ನೀಡಲಾಗಿರುವ ಎಂಜಿನ್ ಮಾದರಿಯೇ ಇದೀಗ ಹೊಸ ಹೆಕ್ಟರ್ ಪ್ಲಸ್‌ನಲ್ಲೂ ನೀಡಲಾಗಿದ್ದು, 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಜೋಡಣೆ ಮಾಡಲಾಗಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹೆಕ್ಟರ್ ಪ್ಲಸ್ ಮಾದರಿಯ ಸ್ಟೈಲ್ ವೆರಿಯೆಂಟ್ ಸ್ಥಗಿತಗೊಳಿಸಿದ ಎಂಜಿ

2.0-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 170-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದರೆ 1.5-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 6-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 143-ಬಿಎಚ್‌ಪಿ ಮತ್ತು ಹೈಬ್ರಿಡ್ ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ 48ವೋಲ್ಟ್ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಉತ್ತಮ ಇಂಧನ ಕಾರ್ಯಕ್ಷಮತೆ ಹೊಂದಿದೆ.

More from DriveSpark

Article Published On: Saturday, October 31, 2020, 13:24 [IST]
English summary
MG Hector Plus Style Variant Discontinued. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+