ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಎಂಜಿ ಹೆಕ್ಟರ್ ಪ್ಲಸ್

ಕರೋನಾ ವೈರಸ್ ಎಂಬ ಮಹಾಮಾರಿಯಿಂದಾಗಿ ದೇಶವೇ ತಲ್ಲಣವಾಗಿದೆ. ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗ ಕೇಂದ್ರ ಸರ್ಕಾರ ದೇಶಾದ್ಯಂತ 21 ದಿನಗಳ ಲಾಕ್‌ಡೌನ್ ಮುಗಿದ ಬಳಿಕ ಮೇ 3ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ್ದಾರೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಎಂಜಿ ಹೆಕ್ಟರ್ ಪ್ಲಸ್

ಕರೋನಾ ವೈರಸ್ ಭೀತಿಯಿಂದ ವಾಹನಗಳ ಮಾರಟವು ಪಾತಾಳಕ್ಕೆ ಕುಸಿದಿದೆ. ಇದೇ ಕಾರಣಕ್ಕೆ ಹಲವಾರು ಜನಪ್ರಿಯ ಕಾರುಗಳ ಬಿಡುಗಡೆಯನ್ನು ಮುಂದೂಡಲಾಗಿದೆ. ಎಂಜಿ ಮೋಟಾರ್ ಕಂಪನಿಯು ತನ್ನ ಹೊಸ ಹೆಕ್ಟರ್ ಪ್ಲಸ್ ಎಸ್‍ಯುವಿಯನ್ನು ಈ ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೊಳಿಸಬೇಕಾಗಿತ್ತು. ಆದರೆ ಕರೋನಾ ವೈರಸ್ ಭೀತಿಯಿಂದಾಗಿ ಎಂಜಿ ಹೆಕ್ಟರ್ ಬಿಡುಗಡೆಯನ್ನು ಜೂನ್ ತಿಂಗಳಲ್ಲಿ ಬಿಡುಗಡೆಗೊಳಿಸಲಿದೆ. ಎಂಜಿ ಹೆಕ್ಟರ್ ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ಆಟೋಕಾರ್ ಇಂಡೀಯಾ ವರದಿಯನ್ನು ಪ್ರಕಟಿಸಿದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಎಂಜಿ ಹೆಕ್ಟರ್ ಪ್ಲಸ್

ಎಂ.ಜಿ. ಮೋಟರ್ ಇಂಡಿಯಾದ ಅಧ್ಯಕ್ಷ ಮತ್ತು ಎಂಡಿ ರಾಜೀವ್ ಚಾಬಾ ಅವರು ಮಾತನಾಡಿ, ಎಂಜಿ ಹೆಕ್ಟರ್ ಎಸ್‍ಯುವಿಯನ್ನು ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೊಳಿಸಬೇಕಾಗಿತ್ತು. ಆದರೆ ಭಾರತದಲ್ಲಿ ಸ್ವಲ್ಪ ತಡವಾಗಿ ಜೂನ್ ತಿಂಗಳಲ್ಲಿ ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಚಿಂತಿಸುತ್ತಿದ್ದೇವೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಎಂಜಿ ಹೆಕ್ಟರ್ ಪ್ಲಸ್

ಎಂಜಿ ಹೆಕ್ಟರ್ ಪ್ಲಸ್ 7ಸೀಟರ್ ಆವೃತ್ತಿಯಾಗಿದೆ. ದೆಹಲಿ ಆಟೋ ಎಕ್ಸ್‌ಪೋದಲ್ಲಿ ಹೊಸ ಹೆಕ್ಟರ್ ಪ್ಲಸ್ ಎಸ್‍ಯುವಿಯನ್ನು ಅನಾವರಣಗೊಳಿಸಲಾಗಿತ್ತು. ಎಂಜಿ ಹೆಕ್ಟರ್ ಪ್ಲಸ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಎಂಜಿ ಹೆಕ್ಟರ್ ಪ್ಲಸ್

ಎಂಜಿ ಹೆಕ್ಟರ್ ಎಸ್‍ಯುವಿಯ ಮುಂಭಾಗದಲ್ಲಿ ಎಲ್ಇಡಿ ಡಿಆರ್‍‍ಎಲ್ ಗಳ ಕೆಳಗೆ ಬ್ಲ್ಯಾಕ್ಡ್ ಔಟ್ ಫ್ರಂಟ್ ಗ್ರಿಲ್ ಅನ್ನು ಹೊಂದಿದೆ. ಈ ಎಸ್‍ಯುವಿಯ ಹೆಡ್‍ ಲ್ಯಾಂಪ್ ಮತ್ತು ಫಾಂಗ್ ಲ್ಯಾಂಪ್‍ನ ವಿನ್ಯಾಸದಲ್ಲಿ ಸ್ವಲ್ಪ ಬದಲಾವಣೆಯನ್ನು ಮಾಡಲಾಗಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಎಂಜಿ ಹೆಕ್ಟರ್ ಪ್ಲಸ್

ಎಂಜಿ ಹೆಕ್ಟೆರ್ ಪ್ಲಸ್ ಎಸ್‍ಯುವಿಯ ಒಟ್ಟಾರೆ ವಿನ್ಯಾಸವು ಹೆಚ್ಚು ಕಡಿಮೆ ಎಂಜಿ ಹೆಕ್ಟರ್ ಮಾದರಿಯಂತಿದೆ. ಹೊಸ ಎಂಜಿ ಹೆಕ್ಟರ್ ಪ್ಲಸ್ ಎಸ್‍ಯುವಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‍ ಗಳ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಎಂಜಿ ಹೆಕ್ಟರ್ ಪ್ಲಸ್

ಎಂಜಿ ಹೆಕ್ಟರ್ ಎಸ್‍ಯುವಿಯಲ್ಲಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 115 ಬಿಹೆಚ್‌ಪಿ ಪವರ್ ಮತ್ತು 250 ಎನ್ಎಂ ಅನ್ನು ಉತ್ಪಾದಿಸುತ್ತದೆ.

MOST READ: ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಎಂಜಿ ಹೆಕ್ಟರ್ ಪ್ಲಸ್

ಎಂಜಿ ಹೆಕ್ಟರ್ ಎಸ್‍ಯುವಿಯು ಡೀಸೆಲ್ ಆವೃತ್ತಿಯಲ್ಲಿ ಬಿಡುಗಡೆಯಾಗಲಿದೆ. ಎಂಜಿ ಹೆಕ್ಟರ್ ಎಸ್‍ಯುವಿಯಲ್ಲಿ 2.0-ಲೀಟರ್ ಫಿಯೆಟ್ ಮೂಲದ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 168.4 ಬಿಹೆಚ್‌ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಎಂಜಿ ಹೆಕ್ಟರ್ ಪ್ಲಸ್

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹೆಕ್ಟರ್ ಎಸ್‍ಯುವಿಗೆ ಹೋಲಿಸಿದರೆ ಎಂಜಿ ಹೆಕ್ಟರ್ ಪ್ಲಸ್ ಹೆಚ್ಚಿನ ಆಸನಗಳ ಸಾಮರ್ಥ್ಯವನ್ನು ಹೊಂದಿದೆ. ಎಂಜೆ ಹೆಕ್ಟರ್ ಪ್ಲಸ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಹೀಂದ್ರಾ ಅಲ್ತುರಾಸ್ ಜಿ 4, ಫೋರ್ಡ್ ಎಂಡೀವರ್ ಮತ್ತು ಟೊಯೊಟಾ ಫಾರ್ಚೂನರ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
MG Motor Is Expected To Launch The Hector Plus In June 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X