ಬಿಡುಗಡೆಯಾಗಿರುವ ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಎಂಜಿ ಮೋಟಾರ್ ಕಂಪನಿಯು ಹೆಕ್ಟರ್ ಮತ್ತು ಜೆಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯ ನಂತರ ಮೂರನೇ ಕಾರು ಮಾದರಿಯಾಗಿ ಹೆಕ್ಟರ್ ಪ್ಲಸ್ ಕಾರು ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಎಂಜಿ ಕಂಪನಿಯ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸುವ ನೀರಿಕ್ಷೆಯಲ್ಲಿದೆ.

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಹೊಸ ಹೆಕ್ಟರ್ ಪ್ಲಸ್ ಎಸ್‌ಯುವಿ ಆವೃತ್ತಿಯು ಸದ್ಯಕ್ಕೆ 6 ಆಸನ ಸೌಲಭ್ಯಗಳೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು ಸಹ ಮಾರಾಟ ಮಾಡುವುದಾಗಿ ಎಂಜಿ ಕಂಪನಿಯು ಹೇಳಿಕೊಂಡಿದೆ. ಹೊಸ ಕಾರು ಗ್ರಾಹಕರ ಬೇಡಿಕೆ ಅನ್ವಯ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲದೆ ಎಂಪಿವಿ ಕಾರು ಮಾದರಿಗಳಿಗೂ ಪೈಪೋಟಿ ನೀಡಲಿದೆ.

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಹೆಕ್ಟರ್ ಪ್ಲಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.54 ಲಕ್ಷ ಬೆಲೆ ಹೊಂದಿದ್ದು, ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಒಟ್ಟು 8 ವೆರಿಯೆಂಟ್‌ಗಳನ್ನು ಪಡೆದುಕೊಂಡಿದೆ.

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಪೆಟ್ರೋಲ್ ಮಾದರಿಯಲ್ಲಿ ಮೂರು ವೆರಿಯೆಂಟ್, ಪೆಟ್ರೋಲ್ ಹೈಬ್ರಿಡ್ ಮಾದರಿಯಲ್ಲಿ ಒಂದು ವೆರಿಯೆಂಟ್ ಮತ್ತು ಡೀಸೆಲ್ ವೆರಿಯೆಂಟ್‌ನಲ್ಲಿ ನಾಲ್ಕು ವೆರಿಯೆಂಟ್‌ಗಳನ್ನು ಪಡೆದುಕೊಂಡಿದ್ದು, ಸಾಮಾನ್ಯ ಹೆಕ್ಟರ್ ಕಾರಿಗೂ ಹೆಕ್ಟರ್ ಪ್ಲಸ್ ಕಾರು ರೂ.65 ಸಾವಿರ ಹೆಚ್ಚುವರಿ ಬೆಲೆ ಪಡೆದುಕೊಂಡಿದೆ.

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಹೆಕ್ಟರ್ ಪ್ಲಸ್ ವೆರಿಯೆಂಟ್ ಮತ್ತು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಸ್ಟೈಲ್ ಪೆಟ್ರೋಲ್ ಮ್ಯಾನುವಲ್- ರೂ.13.49 ಲಕ್ಷ

ಸ್ಟೈಲ್ ಡಿಸೇಲ್ ಮ್ಯಾನುವಲ್- ರೂ. 14.44 ಲಕ್ಷ

ಸೂಪರ್ ಡಿಸೇಲ್ ಮ್ಯಾನುವಲ್- ರೂ. 15.65 ಲಕ್ಷ

ಸ್ಮಾರ್ಟ್ ಪೆಟ್ರೋಲ್ ಆಟೋಮ್ಯಾಟಿಕ್- ರೂ.16.65 ಲಕ್ಷ

ಸ್ಮಾರ್ಟ್ ಡೀಸೆಲ್ ಆಟೋಮ್ಯಾಟಿಕ್- ರೂ. 17.15 ಲಕ್ಷ

ಶಾರ್ಪ್ ಪೆಟ್ರೋಲ್ ಆಟೋಮ್ಯಾಟಿಕ್ ರೂ. 18.21 ಲಕ್ಷ

ಶಾರ್ಪ್ ಪೆಟ್ರೋಲ್ ಹೈಬ್ರಿಡ್ ರೂ. 17.29 ಲಕ್ಷ

ಶಾರ್ಪ್ ಡೀಸೆಲ್ ಆಟೋಮ್ಯಾಟಿಕ್ - ರೂ. 18.54 ಲಕ್ಷ

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಹೆಕ್ಟರ್ ಪ್ಲಸ್ ಕಾರನ್ನು ಅಗಸ್ಟ್ 13ರ ವರೆಗೆ ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಿರುವ ಎಂಜಿ ಕಂಪನಿಯು ಅಗಸ್ಟ್ 14ರ ನಂತರ ಕಾರಿನ ಬೆಲೆಯನ್ನು ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.50 ಸಾವಿರ ಬೆಲೆ ಏರಿಕೆ ಮಾಡುವುದಾಗಿ ಹೇಳಿಕೊಂಡಿದ್ದು, ಮೊದಲ ಒಂದು ತಿಂಗಳು ಕಾರು ಖರೀದಿಸುವ ಗ್ರಾಹಕರಿಗೆ ಹೊಸ ಆಫರ್ ನೀಡಿದೆ.

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಇನ್ನು ಹೊಚ್ಚ ಹೊಸ ಹೆಕ್ಟರ್ ಪ್ಲಸ್ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಹೇಳುವುದಾದರೇ, ಹೊಸ ಕಾರು ಸಾಮಾನ್ಯ ಹೆಕ್ಟರ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲೇ ಸಿದ್ದಗೊಂಡಿದ್ದು, 2+2+2 ಆಸನ ವಿನ್ಯಾಸವನ್ನು ಪಡೆದುಕೊಂಡಿದೆ.

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಹೊಸ ಕಾರಿನ ಮಧ್ಯದ ಸಾಲಿನಲ್ಲಿರುವ ಕ್ಯಾಪ್ಟನ್ ಸೀಟ್ ಕಾರಿನ ಪ್ರಮುಖ ಆಕರ್ಷಣೆಯಾಗಿದ್ದು, ಬ್ರೌನ್ ಲೆದರ್ ಆಸನವು ಹೆಡ್ ರೆಸ್ಟ್ ಮತ್ತು ಸೆಂಟರ್ ಆರ್ಮ್ ರೆಸ್ಟ್ ಫೀಚರ್ಸ್ ಪಡೆದುಕೊಂಡಿದೆ. ಜೊತೆಗೆ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಹೊಸ ಕಾರಿನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಹೊಲೊಜೆನ್ ಫ್ರಂಟ್ ಗ್ರಿಲ್, ಫ್ರಂಟ್ ಮತ್ತು ರಿಯರ್ ಬಂಪರ್, ಹೊಸ ವಿನ್ಯಾಸದ ರಿಯರ್ ಟೈಲ್ ಲೈಟ್, ಸ್ಕೀಡ್ ಪ್ಲೇಟ್, ಟೈಲ್‌ಗೆಟ್ ತೆರೆಯಲು ಲೆಗ್ ಸ್ಪೈಫ್, ಪನೊರಮಿಕ್ ಸನ್‌ರೂಫ್ ಸೌಲಭ್ಯವಿದೆ.

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಜೊತೆಗೆ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೊಲ್, 10.4-ಇಂಚಿನ ವರ್ಟಿಕಲ್ ಇನ್ಪೋಟೈನ್‌ಮೆಂಟ್ ಸಿಸ್ಟಂನೊಂದಿಗೆ ಸ್ಮಾರ್ಟ್ ಫೋನ್ ಕೆನೆಕ್ವಿಟಿ, ವೈ-ಫೈ ಸೌಲಭ್ಯ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ವಿವಿಧ ಮಾದರಿಯ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

ಎಂಜಿನ್ ಸಾಮಾರ್ಥ್ಯ

ಸಾಮಾನ್ಯ ಮಾದರಿಯ 5 ಆಸನವುಳ್ಳ ಹೆಕ್ಟರ್ ಕಾರಿನಲ್ಲಿ ನೀಡಲಾಗಿರುವ ಎಂಜಿನ್ ಮಾದರಿಯೇ ಇದೀಗ ಹೊಸ ಹೆಕ್ಟರ್ ಪ್ಲಸ್‌ನಲ್ಲೂ ನೀಡಲಾಗಿದ್ದು, 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಪೆಟ್ರೋಲ್ ಹೈಬ್ರಿಡ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಜೋಡಣೆ ಮಾಡಲಾಗಿದೆ.

ಎಂಜಿ ಹೆಕ್ಟರ್ ಪ್ಲಸ್ ವೆರಿಯೆಂಟ್‌ಗಳು ಮತ್ತು ಬೆಲೆ ಮಾಹಿತಿ...

2.0-ಲೀಟರ್ ಡೀಸೆಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 170-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದರೆ 1.5-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 143-ಬಿಎಚ್‌ಪಿ ಮತ್ತು ಹೈಬ್ರಿಡ್ ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ 48ವೋಲ್ಟ್ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಉತ್ತಮ ಇಂಧನ ಕಾರ್ಯಕ್ಷಮತೆ ಹೊಂದಿದೆ.

Most Read Articles

Kannada
English summary
Here are the variant wise features list of new MG Hector Plus SUV. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X